ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡವಾಗಿದೆ, ನರಕಯಾತನೆಗೆ ಕೊನೆಯೇ ಇಲ್ಲ- ಡಿಕೆ ಶಿವಕುಮಾರ್ ವ್ಯಥೆ

DK Shivakumar: ಮೃತರ ಕುಟುಂಬಸ್ಥರಿಗೆ ಪರಿಹಾರ ಕೊಡಿಸುವ ಕೆಲಸ ಕಾಂಗ್ರೆಸ್‌ನಿಂದ ಮಾಡೋಣ. ಶಾಸಕಾಂಗ ಪಕ್ಷದ ( ಸಿಎಲ್‌ಪಿ ) ನಾಯಕ ಸಿದ್ದರಾಮಯ್ಯ ಜತೆ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡವಾಗಿದೆ, ನರಕಯಾತನೆಗೆ ಕೊನೆಯೇ ಇಲ್ಲ- ಡಿಕೆ ಶಿವಕುಮಾರ್ ವ್ಯಥೆ
ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡವಾಗಿದೆ, ನರಕಯಾತನೆಗೆ ಕೊನೆಯೇ ಇಲ್ಲ- ಡಿಕೆ ಶಿವಕುಮಾರ್ ವ್ಯಥೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 19, 2021 | 1:55 PM

ಬೆಂಗಳೂರು: ‘ರಾಮನ ಪಾರ್ಟಿಯಲ್ಲಿ ರಾಮಾಯಣ ನಡೆಯುತ್ತಿದೆ. ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡದಂತಾಗಿದೆ. ಈ ನರಕಯಾತನೆಗೆ ಕೊನೆಯೇ ಇಲ್ಲದಂತಾಗಿದೆ  ಎಂದು  ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನರ ಬಗ್ಗೆ ವ್ಯಥೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ಕೆಟ್ಟ ಕಾಲದಲ್ಲಿ ಜನರು ಉದ್ಯೋಗಕ್ಕಾಗಿ ಪರದಾಡುವ ಪರಿಸ್ಥಿತಿ ಇದೆ. ಕೊವಿಡ್ ನಷ್ಟ ಲೆಕ್ಕ ಮಾಡುವುದಕ್ಕೆ ಆಗುತ್ತಿಲ್ಲ. ಕೊವಿಡ್ ಸಾವಿನ ಲೆಕ್ಕವೇ ಸರಿಯಾಗಿ ಆಡಿಟ್ ಆಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರೇ ಆಡಿಟ್ ಮಾಡಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾವಿನ ಲೆಕ್ಕ ಮಾಡುವಂತೆ ಕರೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಸಾವಿನ ಪ್ರಮಾಣಪತ್ರ ಸಮೇತ ಎಲ್ಲ ಮಾಹಿತಿ ಕಲೆಹಾಕಿ. ನಂತರ ಏನು ಮಾಡಬೇಕೆಂದು ನಾನು ತಿಳಿಸುತ್ತೇನೆ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಮೃತರ ಕುಟುಂಬಸ್ಥರಿಗೆ ಪರಿಹಾರ ಕೊಡಿಸುವ ಕೆಲಸ ಕಾಂಗ್ರೆಸ್‌ನಿಂದ ಮಾಡೋಣ. ಶಾಸಕಾಂಗ ಪಕ್ಷದ ( ಸಿಎಲ್‌ಪಿ ) ನಾಯಕ ಸಿದ್ದರಾಮಯ್ಯ ಜತೆ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮೃತರ ಕುಟುಂಬಸ್ಥರಿಂದ ನೋಂದಣಿ ಮಾಡಿಸಬೇಕು. ಕಾಂಗ್ರೆಸ್ ಕಾರ್ಯಕರ್ತರೇ ನೋಂದಣಿ ಮಾಡಿಸಬೇಕು. ಪರಿಹಾರ ಕೊಡಬೇಕೆಂದು ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಎಲ್ಲವನ್ನೂ ಮುಚ್ಚಿಡುವ ಕೆಲಸ ಮಾಡ್ತಿದೆ. ನಾವು ಎಲ್ಲ ವಿಚಾರ ಬಯಲಿಗೆಳೆಯುವ ಕೆಲಸ ಮಾಡುತ್ತೇವೆ  ಎಂದು ಡಿಕೆ ಶಿವಕುಮಾರ್  ಕರೆ ಕೊಟ್ಟಿದ್ದಾರೆ.

(KPCC President DK Shivakumar criticizes karnataka bjp government on coronavirus mismanagement )

ಕೆಲವೇ ಕ್ಷಣಗಳಲ್ಲಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ, ಬಿರುಸುಗೊಂಡ ಶಾಸಕ ಅರವಿಂದ ಬೆಲ್ಲದ್​ ಚಟುವಟಿಕೆ

Published On - 1:51 pm, Sat, 19 June 21

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ