ಬೆಂಗಳೂರು: ‘ರಾಮನ ಪಾರ್ಟಿಯಲ್ಲಿ ರಾಮಾಯಣ ನಡೆಯುತ್ತಿದೆ. ಬಿಜೆಪಿ ಯುದ್ಧಕಾಂಡ ಜನಸಾಮಾನ್ಯರ ಕರ್ಮಕಾಂಡದಂತಾಗಿದೆ. ಈ ನರಕಯಾತನೆಗೆ ಕೊನೆಯೇ ಇಲ್ಲದಂತಾಗಿದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನರ ಬಗ್ಗೆ ವ್ಯಥೆ ವ್ಯಕ್ತಪಡಿಸಿದ್ದಾರೆ.
ಕೊರೊನಾ ಕೆಟ್ಟ ಕಾಲದಲ್ಲಿ ಜನರು ಉದ್ಯೋಗಕ್ಕಾಗಿ ಪರದಾಡುವ ಪರಿಸ್ಥಿತಿ ಇದೆ. ಕೊವಿಡ್ ನಷ್ಟ ಲೆಕ್ಕ ಮಾಡುವುದಕ್ಕೆ ಆಗುತ್ತಿಲ್ಲ. ಕೊವಿಡ್ ಸಾವಿನ ಲೆಕ್ಕವೇ ಸರಿಯಾಗಿ ಆಡಿಟ್ ಆಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರೇ ಆಡಿಟ್ ಮಾಡಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾವಿನ ಲೆಕ್ಕ ಮಾಡುವಂತೆ ಕರೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಸಾವಿನ ಪ್ರಮಾಣಪತ್ರ ಸಮೇತ ಎಲ್ಲ ಮಾಹಿತಿ ಕಲೆಹಾಕಿ. ನಂತರ ಏನು ಮಾಡಬೇಕೆಂದು ನಾನು ತಿಳಿಸುತ್ತೇನೆ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ಮೃತರ ಕುಟುಂಬಸ್ಥರಿಗೆ ಪರಿಹಾರ ಕೊಡಿಸುವ ಕೆಲಸ ಕಾಂಗ್ರೆಸ್‌ನಿಂದ ಮಾಡೋಣ. ಶಾಸಕಾಂಗ ಪಕ್ಷದ ( ಸಿಎಲ್‌ಪಿ ) ನಾಯಕ ಸಿದ್ದರಾಮಯ್ಯ ಜತೆ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮೃತರ ಕುಟುಂಬಸ್ಥರಿಂದ ನೋಂದಣಿ ಮಾಡಿಸಬೇಕು. ಕಾಂಗ್ರೆಸ್ ಕಾರ್ಯಕರ್ತರೇ ನೋಂದಣಿ ಮಾಡಿಸಬೇಕು. ಪರಿಹಾರ ಕೊಡಬೇಕೆಂದು ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಎಲ್ಲವನ್ನೂ ಮುಚ್ಚಿಡುವ ಕೆಲಸ ಮಾಡ್ತಿದೆ. ನಾವು ಎಲ್ಲ ವಿಚಾರ ಬಯಲಿಗೆಳೆಯುವ ಕೆಲಸ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ.
(KPCC President DK Shivakumar criticizes karnataka bjp government on coronavirus mismanagement )
ಕೆಲವೇ ಕ್ಷಣಗಳಲ್ಲಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ, ಬಿರುಸುಗೊಂಡ ಶಾಸಕ ಅರವಿಂದ ಬೆಲ್ಲದ್ ಚಟುವಟಿಕೆ
Published On - 1:51 pm, Sat, 19 June 21