ಸುಳ್ಯ ಕೋರ್ಟ್​ನಲ್ಲಿ ವಿಚಾರಣೆಗೆ ಡಿಕೆ ಶಿವಕುಮಾರ್ ಹಾಜರು

ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯೊಬ್ಬನ ವಿರುದ್ಧ ಅಧಿಕಾರಿಗಳು ದೂರು ದಾಖಲಿಸಿದ್ದರು. ಅದೇ ವ್ಯಕ್ತಿ ನನ್ನನ್ನೂ ನಿಂದಿಸಿದ್ದ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಸುಳ್ಯ ಕೋರ್ಟ್​ನಲ್ಲಿ ವಿಚಾರಣೆಗೆ ಡಿಕೆ ಶಿವಕುಮಾರ್ ಹಾಜರು
ಡಿಕೆ ಶಿವಕುಮಾರ್

ಮಂಗಳೂರು: ಕಾನೂನಿಗೆ ತಲೆ ಬಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯೊಬ್ಬನ ವಿರುದ್ಧ ಅಧಿಕಾರಿಗಳು ದೂರು ದಾಖಲಿಸಿದ್ದರು. ಅದೇ ವ್ಯಕ್ತಿ ನನ್ನನ್ನೂ ನಿಂದಿಸಿದ್ದ ಎಂದು ಡಿ.ಕೆ.ಶಿವಕುಮಾರ್ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಸಾರ್ವಜನಿಕ ಕೆಲಸ ಮಾಡುವ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನಗಳು ನಡೆಯುತ್ತವೆ. ಇದೇ ಕಾರಣಕ್ಕಾಗಿ ಅಧಿಕಾರಿಗಳು ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ವಿಚಾರವನ್ನು ಕೋರ್ಟ್ ಮುಂದೆ ಹೇಳಿದ್ದೇನೆ. ಸುಳ್ಯ ಭಾಗದಲ್ಲಿ ವಿದ್ಯುತ್ ಸಮಸ್ಯೆಯಿದೆ. ನಾನು ಸಚಿವನಾಗಿದ್ದಾಗ ಸಮಸ್ಯೆ ಪರಿಹರಿಸಲು ಪ್ರಯತ್ನಿಸಿದ್ದೆ. ಈಗಿನ ಇಂಧನ ಸಚಿವರು ಈ ಬಗ್ಗೆ ಗಮನ ಹರಿಸಬಹುದು ಎಂಬ ನಿರೀಕ್ಷೆಯಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ಅವರು ಸುಳ್ಯ ನ್ಯಾಯಾಲಯಕ್ಕೆ ಭೇಟಿ ನೀಡಿದ್ದ ವೇಳೆ ಸುಳ್ಯ ಕೋರ್ಟ್ ಆವರಣದಲ್ಲಿ ಕಾಂಗ್ರೆಸ್ ಮುಖಂಡರಿಬ್ಬರ ಜೇಬಿನಲ್ಲಿದ್ದ ನಗದನ್ನು ಕೆಲ ದುಷ್ಕರ್ಮಿಗಳು ಕಳವು ಮಾಡಿದ್ದಾರೆ. ಒಬ್ಬರು ₹ 25 ಸಾವಿರ, ಮತ್ತೊಬ್ಬರು ₹ 7 ಸಾವಿರ ಕಳೆದುಕೊಂಡಿದ್ದಾರೆ. ಡಿಕೆಶಿ ಹಾಜರಾಗುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಬೆಂಬಲಿಗರು ಸೇರಿದ್ದರು. ಜನಸಂದಣಿಯ ನೂಕಾಟ-ತಳ್ಳಾಟದ ಸಂದರ್ಭ ಬಳಸಿಕೊಂಡ ಕಳ್ಳರು ತಮ್ಮ ಕರಾಮತ್ತು ತೋರಿಸಿದ್ದಾರೆ.

(KPCC President DK Shivakumar Visits Sullia Court face Trial)

ಇದನ್ನೂ ಓದಿ: ಯತೀಂದ್ರ ಸಾರಥ್ಯದಲ್ಲಿ ಹೊಸ ಸೋಷಿಯಲ್ ಮೀಡಿಯಾ ತಂಡ ಅಖಾಡಕ್ಕೆ

ಇದನ್ನೂ ಓದಿ: ಅಧಿಕಾರಕ್ಕೆ ಬಂದ ಮೊದಲ ದಿನವೇ ಉಚಿತ ಅಕ್ಕಿ ಘೋಷಿಸಿದ ನಾಯಕ: ಸಿದ್ದರಾಮಯ್ಯಗೆ ಡಿಕೆಶಿ ತಾರೀಪು

Read Full Article

Click on your DTH Provider to Add TV9 Kannada