AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ವಕ್ತಾರೆ ಭವ್ಯಾ ನರಸಿಂಹಮೂರ್ತಿಗೆ 50ಕ್ಕೂ ಹೆಚ್ಚು ಬೆದರಿಕೆ ಕರೆ; ಕಾಂಗ್ರೆಸ್ ಮಹಿಳಾ ನಾಯಕರಿಂದ ಪತ್ರಿಕಾಗೋಷ್ಠಿ

ಸಿಮ್‌ಗಳು ಬೇರೆ ಬೇರೆ ರಾಜ್ಯಗಳಲ್ಲಿ ರಿಜಿಸ್ಟ್ರೇಷನ್ ಆಗಿವೆ. ಆದರೆ ಎಲ್ಲರೂ ಕನ್ನಡದಲ್ಲೇ ಮಾತನಾಡುತ್ತಾರೆ. ಹೀಗಾಗಿ ಸ್ಥಳೀಯರೇ ನನಗೆ ಬೆದರಿಕೆ ಕರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಭವ್ಯಾ ನರಸಿಂಹಮೂರ್ತಿ ಆರೋಪಿಸಿದರು.

ಕೆಪಿಸಿಸಿ ವಕ್ತಾರೆ ಭವ್ಯಾ ನರಸಿಂಹಮೂರ್ತಿಗೆ 50ಕ್ಕೂ ಹೆಚ್ಚು ಬೆದರಿಕೆ ಕರೆ; ಕಾಂಗ್ರೆಸ್ ಮಹಿಳಾ ನಾಯಕರಿಂದ ಪತ್ರಿಕಾಗೋಷ್ಠಿ
ಕೆಪಿಸಿಸಿ ವಕ್ತಾರೆ ಭವ್ಯಾ ನರಸಿಂಹಮೂರ್ತಿ
TV9 Web
| Edited By: |

Updated on: Jun 12, 2021 | 7:05 PM

Share

ಬೆಂಗಳೂರು: ಕೆಪಿಸಿಸಿ ವಕ್ತಾರೆ ಭವ್ಯಾ ನರಸಿಂಹಮೂರ್ತಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಸ್ವತಃ ಅವರೇ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ವಿಷಯವನ್ನು ಬಹಿರಂಗಪಡಿಸಿದರು. ‘ನಾನು ಕೆಪಿಸಿಸಿ ಮೀಡಿಯಾ ಪ್ಯಾನಲಿಸ್ಟ್ ಇರುವ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ಕಾರ್ಯಗಳ ಬಗ್ಗೆ ವಿವರಣೆ ನೀಡುತ್ತೇನೆ. ಆದರೆ ಇದನ್ನು ಸಹಿಸಲಾಗದೇ ಕರೆ ಮಾಡಿ ಬೆದರಿಕೆ ಹಾಕಲಾಗುತ್ತಿದೆ. ಚರ್ಚೆಗಳಿಗೆ ಹೋಗಿ ಬಂದ ನಂತರ ಇಂತಹ ಕರೆಗಳು ಬರುತ್ತಿವೆ. ಸೈಬರ್ ಕ್ರೈಂ ಪೊಲೀಸರಿಗೆ ಮತ್ತು ಬೆಂಗಳೂರು ಪೊಲೀಸ್ ಆಯುಕ್ತರಿಗೂ ಈ ಬಗ್ಗೆ ದೂರು ನೀಡಿದ್ದೇನೆ. ಆದರೆ ಮತ್ತೆ ದೂರು ಕೊಡೋಕೆ ಹೋದ್ರೆ ನಮಗೇ ಪ್ರಶ್ನೆ ಕೇಳ್ತಾರೆ. ನಮ್ಮ ವ್ಯಾಪ್ತಿಗೆ ನಿಮ್ಮ ಕೇಸ್ ಬರಲ್ಲವೆಂದು ಡಿಸಿಪಿ ವಾಪಸ್ ಕಳಿಸಿದ್ದಾರೆ. ನನಗೆ ಮತ್ತೆ 2 ದಿನಗಳಿಂದ ಬೆದರಿಕೆ ಕರೆಗಳು ಬರುತ್ತಲೇ ಇವೆ. ಇದನ್ನು ಒಬ್ಬರೇ ಮಾಡುತ್ತಿಲ್ಲ. ಬದಲಿಗೆ ಯೋಜನೆ ರೂಪಿಸಿ ಬೆದರಿಕೆ ಒಡ್ಡಲಾಗುತ್ತಿದೆ’ ಎಂದು ಅವರು ದೂರಿದರು.

ಕೆಪಿಸಿಸಿ ಮಹಿಳಾ ಘಟಕ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 9ರಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಕ್ರೈಂ ಬ್ರ್ಯಾಂಚ್‌ಗೆ ದೂರು ನೀಡುತ್ತಿದ್ದಾಗಲೂ ಕರೆ ಬಂದಿತ್ತು. ನೀವೇ ಮಾತಾಡಿ ಎಂದು ಪೊಲೀಸರಿಗೆ ಮೊಬೈಲ್ ಕೊಟ್ಟಿದ್ದೆ. ಸಿಮ್‌ಗಳು ಬೇರೆ ಬೇರೆ ರಾಜ್ಯಗಳಲ್ಲಿ ರಿಜಿಸ್ಟ್ರೇಷನ್ ಆಗಿವೆ. ಆದರೆ ಎಲ್ಲರೂ ಕನ್ನಡದಲ್ಲೇ ಮಾತನಾಡುತ್ತಾರೆ. ಹೀಗಾಗಿ ಸ್ಥಳೀಯರೇ ನನಗೆ ಬೆದರಿಕೆ ಕರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಭವ್ಯಾ ನರಸಿಂಹಮೂರ್ತಿ ಆರೋಪಿಸಿದರು.

ಈ ಕುರಿತು ಮಾತನಾಡಿದ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ರಾಜ್ಯ, ರಾಷ್ಟ್ರದಲ್ಲೂ ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲದಂತಾಗಿದೆ. ಹೆಣ್ಣುಮಕ್ಕಳನ್ನು ಭಯದಲ್ಲಿ ಇರಿಸುವ ಪ್ರಯತ್ನ ಮಾಡಲಾಗುತ್ತಿದೆ. ಅತ್ಯಾಚಾರ ಬೆದರಿಕೆ, ಕೊಲೆ ಬೆದರಿಕೆ ಕರೆಗಳ ಮೂಲಕ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮಹಿಳೆಯರನ್ನು ಲಕ್ಷ್ಮೀ, ಸರಸ್ವತಿ ಎಂದು ಪೂಜೆ ಮಾಡುತ್ತೇವೆ. ನಮಗೆ ಯಾರ ಪೂಜೆಯೂ ಬೇಡ, ಮರ್ಯಾದೆ ಕೊಟ್ಟರೆ ಸಾಕು. ಮಹಿಳೆಯರಿಗೆ ಇಷ್ಟೊಂದು ಬೆದರಿಕೆಗಳು ಇರುವುದನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಆಗ್ರಹಿಸಿದರು.

ಕೆಪಿಸಿಸಿ ಮಹಿಳಾ ಘಟಕ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಶಾಸಕಿ ಮೇಲೆ ಹಲ್ಲೆ ಮಾಡಿ ‘ರೌಡಿ ಎಂಎಲ್​ಎ’ ಎಂದು ಕೇಸ್ ಹಾಕ್ತಾರೆ. ನಮ್ಮ ಮೇಲೆಯೇ ಅಟ್ಯಾಕ್ ಮಾಡಿ ಪ್ರಕರಣ ಹಾಕಿದ್ದರು. ಇಂತಹ ವ್ಯವಸ್ಥೆಯಲ್ಲಿ ನಾವಿದ್ದೇವೆ ಎಂದು ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಬೇಸರ ವ್ಯಕ್ತಪಡಿಸಿದರು.

ಯಾವ ಹೆಣ್ಣುಮಗಳೇ ಆಗಲಿ, ಮಹಿಳೆ ಬಗ್ಗೆ ಕೆಟ್ಟದಾಗಿ ಮಾತಾಡುವುದನ್ನ ನಾವು ಒಪ್ಪಲ್ಲ. ಬಿಜೆಪಿ ನಾಯಕರ ಮನೆಗಳಲ್ಲಿ‌ ಹೆಣ್ಣುಮಕ್ಕಳಿಲ್ವೇ? ಅವರು ಇಂತಹ ವ್ಯವಸ್ಥೆಯನ್ನ ವಿರೋಧಿಸಬೇಕು. ಇದರ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು. ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲೇ ಪತ್ತೆಯಾಯ್ತು ಅಕ್ರಮ ಕೊವಿಡ್ ಕೇರ್ ಸೆಂಟರ್! ದಾಳಿ ನಡೆಸಿದ ಅಧಿಕಾರಿಗಳು

ಕಾಂಗ್ರೆಸ್​ನ ಕೆಲ ಬುದ್ಧಿಜೀವಿಗಳು ಬೆಡ್ ಬ್ಲಾಕಿಂಗ್ ಹಗರಣದ ತನಿಖೆಯ ದಾರಿ ತಪ್ಪಿಸುತ್ತಿದ್ದಾರೆ: ಸಂಸದ ತೇಜಸ್ವಿ ಸೂರ್ಯ

(KPCC spokesperson Bhavya Narasimhamurthy attacked by more than 50 threat calls)

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ