ಮೈಸೂರು ಪಾಲಿಕೆ ಚುನಾವಣೆ; ಮೈತ್ರಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್
Mysuru Corporation Mayor Election: ಪಾಲಿಕೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಮೈತ್ರಿಯ ಹಿಂದಿನ ಸತ್ಯವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಬಿಚ್ಚಿಟ್ಟಿದ್ದಾರೆ.
ಮೈಸೂರು: ಪಾಲಿಕೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಮೈತ್ರಿಯ ಹಿಂದಿನ ಸತ್ಯವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಬಿಚ್ಚಿಟ್ಟಿದ್ದಾರೆ. ಈ ಬಾರಿ ಬಿಜೆಪಿ, ಜೆಡಿಎಸ್ ಒಪ್ಪಂದ ಮಾಡಿಕೊಂಡಿತ್ತು. ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್ಗೆ ನೀಡುವುದು. ಮೈಸೂರು, ತುಮಕೂರು ಪಾಲಿಕೆ ಮೇಯರ್ ಸ್ಥಾನ ಬಿಜೆಪಿಗೆ ನೀಡುವುದು ಹಾಗೂ ಮೇಯರ್ ಸ್ಥಾನ ಬಿಜೆಪಿಗೆ ಬಿಟ್ಟುಕೊಡುವ ಒಪ್ಪಂದ ಆಗಿತ್ತು. ಆದರೆ ಸಿದ್ದರಾಮಯ್ಯ ಹೇಳಿಕೆ ಮುಂದಿಟ್ಟುಕೊಂಡು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಟ ಆಡಿದ್ದಾರೆ ಎಂದು ಲಕ್ಷ್ಮಣ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ಹೇಳಿದಂತೆ ನಡೆದುಕೊಂಡಿದೆ. ಈ ಬಾರಿ ಕಾಂಗ್ರೆಸ್ಗೆ ಮೇಯರ್ ಸ್ಥಾನ ಕೊಡಬೇಕಾಗಿತ್ತು. ಜೆಡಿಎಸ್ ನಾಟಕ ಮಾಡಿಕೊಂಡು ಅಧಿಕಾರ ಪಡೆದಿದೆ. ಸಿದ್ದರಾಮಯ್ಯ ಹೇಳಿಕೆ ಮುಂದಿಟ್ಟುಕೊಂಡು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಟ ಆಡಿದರು. ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿಯೇ ಇದೆ ಎಂದಿದ್ದಾರೆ.
ಜೆಡಿಎಸ್ ಪಕ್ಷಕ್ಕೆ ಯಾವುದೇ ತತ್ವ, ಸಿದ್ಧಾಂತಗಳು ಇಲ್ಲ. ಜೆಡಿಎಸ್ ಯಾವ ರೀತಿ ರಾಜಕೀಯ ಪಕ್ಷವೆಂದು ಹೆಚ್. ಡಿ. ಕುಮಾರಸ್ವಾಮಿ ಹೇಳಲಿ. ಜೆಡಿಎಸ್ ಅಧಿಕಾರ ಬೇಕಾದಾಗ ಬಿಜೆಪಿ ಪರ ಹೋಗುತ್ತದೆ. ಅಧಿಕಾರ ಪಡೆದ ನಂತರ ಜೆಡಿಎಸ್ ಪಕ್ಷ ಇಲ್ಲಿ ಬರುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ ಎಚ್ಚರಿಕೆ:
ಮೈಸೂರು ಪಾಲಿಕೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಕಾರಣಾಂತರಗಳಿಂದ ನಾವು ನಿಮ್ಮನ್ನು ಬೆಂಬಲಿಸಿದ್ದೇವೆ. ಈಗ ನೀವು ತೊಡೆತಟ್ಟುವ ಕೆಲಸವನ್ನು ಮಾಡಬೇಡಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಗ್ಗೆ ಹಗುರವಾಗಿ ಮಾತಾಡಬೇಡಿ. ಸಿದ್ದರಾಮಯ್ಯ ಅವರಿಗೆ ನೀವ್ಯಾರೂ ಪಾಠ ಕಲಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ತಂದಿಡುತ್ತಿದ್ದೀರಾ? ನಿಮಗೆ ಧೈರ್ಯವಿದ್ದರೆ ನೇರವಾಗಿ ಕಾಂಗ್ರೆಸ್ ವಿರುದ್ಧ ನಿಲ್ಲಿ. ಜೆಡಿಎಸ್ ಪಕ್ಷವನ್ನು ಕಟ್ಟಿದವರು ನೀವಲ್ಲ ಎಂದು ಹೇಳಿದ್ದಾರೆ.
ಈ ಕುರಿತಾಗಿ ಮಾತನಾಡುತ್ತಾ, ಸುಮ್ಮನೇ ದಾರಿಯಲ್ಲಿ ಹೋಗುವಾಗ ಮಾತನಾಡುವಂತೆ ಸಿದ್ದರಾಮಯ್ಯ ಬಗ್ಗೆ ಹೇಳುವುದಲ್ಲ. ಸಾಧ್ಯವಿದ್ದರೆ ಈಗ ಒಂದು ಪಕ್ಷವನ್ನು ಕಟ್ಟಿ ತೋರಿಸಲಿ ಎಂದು ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಮೈಸೂರು ಪಾಲಿಕೆ ಚುನಾವಣೆ: ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ್ರಾ ಹೆಚ್.ಡಿ. ಕುಮಾರಸ್ವಾಮಿ!?