AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸುಮಾಗೆ ಟಿಕೆಟ್ ಕೊಟ್ಟಿರುವುದು ಮಹಿಳೆಯರಿಗೆ ಹೆಮ್ಮೆ-ಕುಸುಮಾ ಪರ ಪುಷ್ಪಾ ಬ್ಯಾಟಿಂಗ್​

ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ಬಹಳ ದಿನಗಳ ನಂತರ ಮಾತನಾಡಿದ್ದಾರೆ. ಇಡೀ ದೇಶ ಹತ್ರಾಸ್ ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡುತ್ತಿರುವ ಸಂದರ್ಭದಲ್ಲಿ ಅದರ ಬಗ್ಗೆ ಮಾತನಾಡಲು ಶೋಭಾಗೆ ಸಮಯವಿಲ್ಲ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್​ ಖಾರವಾಗಿ ಹೇಳಿದ್ದಾರೆ. ರಾಜಕೀಯಕ್ಕಾಗಿ ಇವತ್ತು ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿಷಯದಲ್ಲಿ ಮಾತನಾಡಿದ್ದಾರೆ. ಅವರ ಮಾತುಗಳು ಹೆಣ್ಣುಕುಲಕ್ಕೇ ಅವಮಾನ. ಉಪ ಚುನಾವಣೆಯಲ್ಲಿ ಕುಸುಮಾಗೆ ಟಿಕೆಟ್ ಕೊಟ್ಟಿರುವುದು ಮಹಿಳೆಯರಿಗೆ ಒಂದು ಹೆಮ್ಮೆ. ಸೋನಿಯಾ ಗಾಂಧಿ ಅಧ್ಯಕ್ಷೆಯಾಗಿರುವ ಈ ಪಕ್ಷದಲ್ಲಿ […]

ಕುಸುಮಾಗೆ ಟಿಕೆಟ್ ಕೊಟ್ಟಿರುವುದು ಮಹಿಳೆಯರಿಗೆ ಹೆಮ್ಮೆ-ಕುಸುಮಾ ಪರ ಪುಷ್ಪಾ ಬ್ಯಾಟಿಂಗ್​
KUSHAL V
| Edited By: |

Updated on: Oct 12, 2020 | 2:08 PM

Share

ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ಬಹಳ ದಿನಗಳ ನಂತರ ಮಾತನಾಡಿದ್ದಾರೆ. ಇಡೀ ದೇಶ ಹತ್ರಾಸ್ ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡುತ್ತಿರುವ ಸಂದರ್ಭದಲ್ಲಿ ಅದರ ಬಗ್ಗೆ ಮಾತನಾಡಲು ಶೋಭಾಗೆ ಸಮಯವಿಲ್ಲ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್​ ಖಾರವಾಗಿ ಹೇಳಿದ್ದಾರೆ.

ರಾಜಕೀಯಕ್ಕಾಗಿ ಇವತ್ತು ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿಷಯದಲ್ಲಿ ಮಾತನಾಡಿದ್ದಾರೆ. ಅವರ ಮಾತುಗಳು ಹೆಣ್ಣುಕುಲಕ್ಕೇ ಅವಮಾನ. ಉಪ ಚುನಾವಣೆಯಲ್ಲಿ ಕುಸುಮಾಗೆ ಟಿಕೆಟ್ ಕೊಟ್ಟಿರುವುದು ಮಹಿಳೆಯರಿಗೆ ಒಂದು ಹೆಮ್ಮೆ.

ಸೋನಿಯಾ ಗಾಂಧಿ ಅಧ್ಯಕ್ಷೆಯಾಗಿರುವ ಈ ಪಕ್ಷದಲ್ಲಿ ಮಹಿಳೆಯೊಬ್ಬಳು ಉಪಚುನಾವಣೆ ಅಭ್ಯರ್ಥಿಯಾಗಿರುವುದು ನಿಜಕ್ಕೂ ಹೆಮ್ಮೆ ಎಂದು ಪುಷ್ಪಾ ಅಮರನಾಥ್​ ಖಾರವಾಗಿ ತಿರುಗೇಟು ಕೊಟ್ಟಿದ್ದಾರೆ.

‘ಗಂಡ ಸತ್ತ ನಂತರ ಮಹಿಳೆ ಮನೆಯಲ್ಲಿಯೇ ಇರಬೇಕಾ?’ ಶೋಭಾ ಕರಂದ್ಲಾಜೆ ಸಾವಿನ ರಾಜಕೀಯ ಮಾಡುತ್ತಿರುವವರು. ಕುಸುಮಾ ಡಿ.ಕೆ.ರವಿ ಹೆಸರನ್ನು ಬಳಕೆ ಮಾಡಬಾರದು ಎಂದು ಹೆಣ್ಣುಕುಲಕ್ಕೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಈಗಾಗಲೇ, ಕುಸುಮಾ ಡಿ.ಕೆ ರವಿ ಹೆಸರು ಬಳಕೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ, ಗಂಡ ಸತ್ತ ನಂತರ ಮಹಿಳೆ ಸಮಾಜದಲ್ಲಿ ಮುಂಚೂಣಿಗೆ ಬರಬಾರದಾ? ಮನೆಯಲ್ಲಿಯೇ ಇರಬೇಕಾ? ಎಂದು ಪುಷ್ಪಾ ಪ್ರಶ್ನಿಸಿದ್ದಾರೆ. ಬಿಜೆಪಿಯ ಮನಸ್ಮೃತಿಯ ಮನಸ್ಥಿತಿ ಎಂಥದ್ದು ಎಂದು ಸಂಸದೆ ಶೋಭಾ ಕರಂದ್ಲಾಜೆ ತೋರಿಸಿದ್ದಾರೆ. ಇದನ್ನು ರಾಜರಾಜಶ್ವರಿ ನಗರದ ಮಹಿಳೆಯರು ಗಂಭೀರವಾಗಿ ಪರಿಗಣಿಸಿ ಬಿಜೆಪಿಗೆ ಪಾಠ ಕಲಿಸಬೇಕು ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸುದ್ದಿಗೋಷ್ಠಿ ವೇಳೆ ಹೇಳಿದ್ದಾರೆ. ಕರಂದ್ಲಾಜೆಯವರೇ ಒಂದು ಹೆಣ್ಣು ಮಗುವಿಗೆ ಗೌರವ ನೀಡಿ ಈ ನಡುವೆ ಮಾತನಾಡಿದ ಮಾಜಿ ಸಚಿವೆ ಉಮಾಶ್ರೀ ಕುಸುಮಾ ಸಂಪ್ರದಾಯದಂತೆ ಡಿ.ಕೆ.ರವಿ ವಿವಾಹವಾಗಿದ್ದಾರೆ. ಅವರ ಪತಿ ಹೆಸರು ಹಾಕಿಕೊಳ್ಳುವುದು ಬೇಡ ಅಂದರೆ ಹೇಗೆ? ಇದರ ಬಗ್ಗೆ ಪ್ರಶ್ನೆ ಮಾಡುವಂತಹ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ಒಂದೇ ದಿಕ್ಕಿನಲ್ಲಿ ಯೋಚಿಸಬಾರದು. ಕುಸುಮಾ ಸಣ್ಣ ವಯಸ್ಸಿನಲ್ಲೇ ಗಂಡನನ್ನ ಕಳೆದುಕೊಂಡಿದ್ದಾರೆ. ಪತಿ ಕಳೆದುಕೊಂಡ ಅವರ ನೋವು ಯಾರಿಗೆ ಅರ್ಥವಾಗುತ್ತೆ. ತನ್ನ ಎಲ್ಲ ನೋವನ್ನು ಮರೆತು ಸಾಮಾಜ ಸೇವೆಗೆ ಬಂದಿದ್ದಾರೆ. ಅಂಥವರ ಬಗ್ಗೆ ಈ ರೀತಿಯಾಗಿ ಮಾತಾಡುವುದು ಸರಿಯಲ್ಲ.

ಶೋಭಾ ಕರಂದ್ಲಾಜೆಯವರೇ ಒಂದು ಹೆಣ್ಣು ಮಗುವಿಗೆ ಗೌರವ ನೀಡಿ. ಇದನ್ನು ಚರ್ಚಾ ವಿಷಯವಾಗಿ ಮಾಡುವುದಕ್ಕೆ ಹೋಗಬೇಡಿ. ವಿದ್ಯಾವಂತ ಹೆಣ್ಣುಮಗಳಿಗೆ ಗೌರವ ಕೊಡುವುದನ್ನ ಕಲಿಯಿರಿ. ಕುಸುಮಾ ಅಭ್ಯರ್ಥಿಯಾಗಿದ್ದಕ್ಕೆ ನಿಮಗೆ ಭಯ ಶುರುವಾಗಿದೆ. ಹೀಗಾಗಿ ಇಂತಹ ಮಾತುಗಳನ್ನು ಹೇಳುತ್ತಿದ್ದೀರೆಂದು ಉಮಾಶ್ರೀ ಟಾಂಗ್ ಕೊಟ್ಟಿದ್ದಾರೆ.

ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ