ಬಿಜೆಪಿ ಬಂದ ಮೇಲೆ ವಸತಿ ಇಲಾಖೆ ಹಳಿತಪ್ಪಿದೆ -ಖಂಡ್ರೆ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಸತಿ ಇಲಾಖೆ ಆಡಳಿತ ಹಳಿತಪ್ಪಿ ಹೋಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಮನೆ ನಿರ್ಮಾಣ ಯುದ್ಧೋಪಾದಿಯಲ್ಲಿ ನಡೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ವಸತಿ ಇಲಾಖೆಯಿಂದ ಹಣ ಬಿಡುಗಡೆಯಾಗ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ. ಬಡವರಿಗೆ ಸರ್ಕಾರದಿಂದ ಮಂಜೂರಾತಿ ಆದೇಶ ಇದ್ರೂ 8 ತಿಂಗಳಿಂದ ಡುಡ್ಡೇ ಕೊಟ್ಟಿಲ್ಲ. ಇದು ಅತ್ಯಂತ ಕಳವಳಕಾರಿ ಸಂಗತಿ. ಬಸವ ವಸತಿ ಯೋಜನೆ, ವಾಜಪೇಯಿ ಯೋಜನೆ, […]
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಸತಿ ಇಲಾಖೆ ಆಡಳಿತ ಹಳಿತಪ್ಪಿ ಹೋಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಮನೆ ನಿರ್ಮಾಣ ಯುದ್ಧೋಪಾದಿಯಲ್ಲಿ ನಡೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ವಸತಿ ಇಲಾಖೆಯಿಂದ ಹಣ ಬಿಡುಗಡೆಯಾಗ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.
ಬಡವರಿಗೆ ಸರ್ಕಾರದಿಂದ ಮಂಜೂರಾತಿ ಆದೇಶ ಇದ್ರೂ 8 ತಿಂಗಳಿಂದ ಡುಡ್ಡೇ ಕೊಟ್ಟಿಲ್ಲ. ಇದು ಅತ್ಯಂತ ಕಳವಳಕಾರಿ ಸಂಗತಿ. ಬಸವ ವಸತಿ ಯೋಜನೆ, ವಾಜಪೇಯಿ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ ಟಾರ್ಗೆಟ್ ಹಾಕಿಕೊಳ್ಳಲಾಗಿತ್ತು. ನಮ್ಮ ಅವಧಿಯಲ್ಲಿ 16 ಲಕ್ಷ ಮನೆಗಳು ಮಂಜೂರಾಗಿತ್ತು. ಆದ್ರೆ ಈಗ 1.59 ಲಕ್ಷ ಫಲಾನುಭವಿಗಳಿಗೆ ಸರ್ಕಾರ ಹಣ ಕೊಡದೇ ಬಾಕಿ ಉಳಿಸಿಕೊಂಡಿದೆ ಎಂದು ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.