
ಬೆಂಗಳೂರು: ಕಾನೂನು ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಸರ್ಕಾರದ ಸ್ವಾಮ್ಯದ ಪ್ರಮುಖ ಉದ್ಯಮವಾದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ನಿಗಮದ ಕಾನೂನು ವಿಷಯಗಳಿಗೆ ಸಂಬಂಧಪಟ್ಟ ಕಾರ್ಯಗಳನ್ನು ನಿರ್ವಹಿಸಲು ಒಟ್ಟು 02 ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಜೂನ್ 22 ರ ಸಂಜೆ 5:30 ರೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ನಿಗದಿತ ಅರ್ಹತೆಗಳನ್ನು ಹೊಂದಿರಬೇಕು:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 65,000 ರೂ. ಗಳ ಸ್ಥಿರ ಮಾಸಿಕ ಸಂಭಾವನೆ ನೀಡಲಾಗುವುದು (ನಿಯಮಾವಳಿಗಳ ಪ್ರಕಾರ ಆದಾಯ ತೆರಿಗೆ ಕಡಿತಕ್ಕೆ ಒಳಪಟ್ಟಿರುತ್ತದೆ). ಇದಕ್ಕದೇ ಕರ್ತವ್ಯ ನಿರ್ವಹಣೆಗೆ ಅಗತ್ಯವಿರುವ ಪ್ರಯಾಣಗಳಿಗೆ ನಿಯಮಾನುಸಾರ TA/DA ಸೌಲಭ್ಯ ಒದಗಿಸಲಾಗುವುದು.
ಅಭ್ಯರ್ಥಿಗಳನ್ನು ನೇರ ಸಂದರ್ಶನ (Interview) ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಈ ಗುತ್ತಿಗೆ ನೇಮಕಾತಿಯು ಗರಿಷ್ಠ 02 ವರ್ಷಗಳ ಅವಧಿಯಾಗಿದ್ದರೂ, ಪ್ರಸ್ತುತ ಆರಂಭದಲ್ಲಿ 06 ತಿಂಗಳ ಅವಧಿಗೆ ಸೀಮಿತವಾಗಿರುತ್ತದೆ. ಅಭ್ಯರ್ಥಿಯ ಕಾರ್ಯಕ್ಷಮತೆ ತೃಪ್ತಿಕರವಾಗಿದ್ದಲ್ಲಿ ಪ್ರತಿ 6 ತಿಂಗಳಿಗೊಮ್ಮೆ ಅವಧಿಯನ್ನು ವಿಸ್ತರಿಸಲಾಗುವುದು.
ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲು ಕೆಪಿಸಿಎಲ್ ಅಧಿಕೃತ ವೆಬ್‌ಸೈಟ್ kpcl.karnataka.gov.in ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ವಿದ್ಯಾರ್ಹತೆ, ವಯಸ್ಸು ಮತ್ತು ಅನುಭವಕ್ಕೆ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇ-ಮೇಲ್ ಐಡಿ kpclcontractappt@gmail.com ಗೆ ಕಳುಹಿಸಬೇಕು.
ನಿಗದಿತ ದಿನಾಂಕ ಮತ್ತು ಸಮಯದ ನಂತರ ಬರುವ ಇ-ಮೇಲ್ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಸಂದರ್ಶನಕ್ಕೆ ಹಾಜರಾಗುವಾಗ ಎಲ್ಲಾ ಮೂಲ ದಾಖಲೆಗಳು ಹಾಗೂ ಸ್ವಯಂ ದೃಢೀಕೃತ (Self-attested) ಜೆರಾಕ್ಸ್ ಪ್ರತಿಗಳನ್ನು ತರಬೇಕಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ