ಕೊನೆ ಕ್ಷಣದಲ್ಲಿ ಕೆಪಿಎಸ್​ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿಕೆ: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತೆ ಶಾಕ್

ಕೆಪಿಎಸ್​ಸಿ ನಾಳೆ ನಡೆಯಬೇಕಿದ್ದ ಕೆಪಿಎಸ್​ಸಿಯ ವಿವಿಧ ಗ್ರೂಪ್-ಬಿ ಹುದ್ದೆಗಳ ಪರೀಕ್ಷೆ ಮುಂದೂಡಲಾಗಿದೆ. ಸರ್ಕಾರದ ಆದೇಶದಿಂದ ಎಲ್ಲಾ ಪ್ರವರ್ಗಗಳಿಗೆ 1 ಬಾರಿ ಅನ್ವಯವಾಗುವಂತೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ಹಾಗಾಗಿ ಹೀಗಾಗಿ ನಾಳೆ ನಡೆಯಬೇಕಿದ್ದ ಕೆಪಿಎಸ್​ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಲಾಗಿದೆ.

ಕೊನೆ ಕ್ಷಣದಲ್ಲಿ ಕೆಪಿಎಸ್​ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿಕೆ: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತೆ ಶಾಕ್
ಕೊನೆ ಕ್ಷಣದಲ್ಲಿ ಕೆಪಿಎಸ್​ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿಕೆ: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತೆ ಶಾಕ್
Follow us
ಗಂಗಾಧರ​ ಬ. ಸಾಬೋಜಿ
|

Updated on:Sep 13, 2024 | 7:07 PM

ಬೆಂಗಳೂರು, ಸೆಪ್ಟೆಂಬರ್​ 13: ಕೊನೆ ಕ್ಷಣದಲ್ಲಿ ಕೆಪಿಎಸ್​ಸಿ (KPSC) ಗ್ರೂಪ್ ಬಿ ಪರೀಕ್ಷೆ ಮುಂದೂಡಲಾಗಿದೆ. ಆ ಮೂಲಕ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕೆಪಿಎಸ್​ಸಿ ಮತ್ತೆ ಶಾಕ್ ಕೊಟ್ಟಿದೆ. ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಸರ್ಕಾರ ನೀಡಿದೆ. ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿ ಅನ್ವಯವಾಗುವಂತೆ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ನಾಳೆಯಿಂದ ನಡೆಯಬೇಕಿದ್ದ ಕೆಪಿಎಸ್ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.

ಸರ್ಕಾರದ ಈ ಆದೇಶದಿಂದ ಎಲ್ಲಾ ಹುದ್ದಿಗಳಿಗೂ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ನಾಳೆ ಕಡ್ಡಾಯ ಕನ್ನಡ ಹಾಗೂ ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ಇತ್ತು. ಆದರೆ ಸರ್ಕಾರ ಈ ನಿರ್ಧಾರದಿಂದ ಪರೀಕ್ಷೆ ಮುಂದೂಡಲಾಗಿದೆ. ಹೀಗಾಗಿ ಕೆಪಿಎಸ್ಸಿ ಕೈಗೊಂಡಿರುವ ಪರೀಕ್ಷೆಯಲ್ಲಿ ಕೊನೆ ಕ್ಷಣದ ಬದಲಾವಣೆಯಿಂದ‌ ಪರೀಕ್ಷಾರ್ಥಿಗಳು ಕಂಗೆಟ್ಟಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲೇನಿದೆ?

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಪಿಎಸ್​ಸಿ ನಾಳೆ ನಡೆಯಬೇಕಿದ್ದ ಕೆಪಿಎಸ್​ಸಿಯ ವಿವಿಧ ಗ್ರೂಪ್-ಬಿ ಹುದ್ದೆಗಳ ಪರೀಕ್ಷೆ ಮುಂದೂಡಲಾಗಿದೆ. 14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳ ಹಂಚಿಕೆ ಕೂಡ ಮಾಡಲಾಗಿತ್ತು.

ಇದನ್ನೂ ಓದಿ: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ: ಹೊಸ ದಿನಾಂಕ ನಿಗದಿಪಡಿಸಿದ ಕೆಪಿಎಸ್​​ಸಿ

ಈ ಮಧ್ಯೆ ದಿನಾಂಕ 10-09-2024ರಂದು ಕರ್ನಾಟಕ ಸರ್ಕಾರ ತನ್ನ ನಡಾವಳಿಗಳಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ.

ಇದನ್ನೂ ಓದಿ: ಕೆಎಎಸ್​​ ಪ್ರಿಲಿಮ್ಸ್​ ಪರೀಕ್ಷೆ: ಕೋಲಾರದಲ್ಲಿ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಿಸಿದ ಡಿಸಿ

ಹಾಗಾಗಿ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಮಾರ್ಚ್​ 13 ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:52 pm, Fri, 13 September 24

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ