AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ಅಕ್ರಮ ಆರೋಪ: ಕೆಪಿಎಸ್​​​​ಸಿಗೆ ಮೇಜರ್ ಸರ್ಜರಿ!

KPSC Officer Transfers: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸಾಲು ಸಾಲು ಅಕ್ರಮ ಆರೋಪಗಳು ಕೇಳಿ ಬಂದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೆಪಿಎಸ್​​​​ಸಿಗೆ ಮೇಜರ್ ಸರ್ಜರಿ ಮಾಡಿದೆ. ಕೆಪಿಎಸ್​ಸಿಗೆ ಇಬ್ಬರು ಐಎಎಸ್​ ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಸಾಲು ಸಾಲು ಅಕ್ರಮ ಆರೋಪ: ಕೆಪಿಎಸ್​​​​ಸಿಗೆ ಮೇಜರ್ ಸರ್ಜರಿ!
ಕೆಪಿಎಸ್​ಸಿImage Credit source: kpsc.kar.nic.in
ವಿನಯ್​ ಕಾಶಪ್ಪನವರ್​
| Edited By: |

Updated on: Aug 12, 2026 | 5:52 PM

Share

ಬೆಂಗಳೂರು, ಆಗಸ್ಟ್​​ 12: ಕರ್ನಾಟಕ ಲೋಕಸೇವಾ ಆಯೋಗದ (KPSC) ಇತ್ತೀಚಿನ ನೇಮಕಾತಿ ಪ್ರಕ್ರಿಯೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಅಕ್ರಮಗಳ ವಿರುದ್ಧ ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳು ಉಗ್ರ ಹೋರಾಟ ಕೂಡ ಮಾಡಿದ್ದರು. ಹೀಗೆ ಸಾಲು ಸಾಲು ಅಕ್ರಮ ಆರೋಪಗಳ ಬೆನ್ನಲ್ಲೇ ಇದೀಗ ಸರ್ಕಾರ ಕೆಪಿಎಸ್​​​​ಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ಅಧಿಕಾರಿಗಳ ವರ್ಗಾವಣೆ (Transfer) ಮಾಡಿ ಆದೇಶ ಹೊರಡಿಸಿದೆ.

ಕೆಪಿಎಸ್‌ಸಿಗೆ ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರಮುಖ ಅಧಿಕಾರಿಗಳ ಎತ್ತಂಗಡಿಗೆ ಆದೇಶಿಸಿದ್ದು, ಕೆಪಿಎಸ್‌ಸಿಗೆ ಇಬ್ಬರು ಐಎಎಸ್ (IAS) ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಸುಳ್ಳು ಆದಾಯ ಪ್ರಮಾಣಪತ್ರ ವಿವಾದ: ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆ, ಕೆಪಿಎಸ್​ಸಿ ಕಾರ್ಯವೈಖರಿ ಬಗ್ಗೆ ಗರಂ

ಈ ಮುಂಚೆ ಪರೀಕ್ಷಾ ನಿಯಂತ್ರಣ ಅಧಿಕಾರಿಯಾಗಿದ್ದ ದಿಗ್ವಿಜಯ್ ಬೋಡ್ಕೆ ಅವರನ್ನು ಯಾವುದೇ ಪರ್ಯಾಯ ಜಾಗ ತೋರಿಸದೆ ಸರ್ಕಾರ ವರ್ಗಾವಣೆಗೊಳಿಸಿದೆ. ತೆರವಾದ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಹುದ್ದೆಗೆ ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಹೆಚ್. ಪ್ರಸನ್ನ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರಾಗಿ ಲವೀಶ್ ಓರ್ಡಿಯಾ ನೇಮಕ 

ಇನ್ನು ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರಾಗಿ ಐಎಎಸ್ ಅಧಿಕಾರಿ ಲವೀಶ್ ಓರ್ಡಿಯಾ ಅವರನ್ನು ನೇಮಕ ಮಾಡಲಾಗಿದೆ. ಸದ್ಯ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿರುವ ಲವೀಶ್ ಓರ್ಡಿಯಾ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: KPSC ಪರೀಕ್ಷೆ ಅಕ್ರಮ, ಒಂದೇ ಕೊಠಡಿಯಲ್ಲಿದ್ದ 15 ಮಂದಿ ಪಾಸ್! ಕೆಎಎಸ್ ಮುಖ್ಯಪರೀಕ್ಷೆ ಫಲಿತಾಂಶದ ಬಗ್ಗೆಯೇ ಹತ್ತಾರು ಸಂಶಯ

ಸರ್ಕಾರದ ಆದೇಶದಂತೆ ಈ ಎರಡೂ ಹುದ್ದೆಗಳನ್ನು ಪೌರಾಡಳಿತ ನಿರ್ದೇಶಕರ ಹುದ್ದೆಗೆ ಸಮಾನವಾಗಿ ಪರಿಗಣಿಸಿ ಈ ನೇಮಕಾತಿಗಳನ್ನು ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us