ಧಾರವಾಡ: ಪಿಡಿಒ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮದ ಆರೋಪ, ಸೀಲ್ ಓಪನ್ ಆಗಿರುವ ಪ್ರಶ್ನೆಪತ್ರಿಕೆ ಫೋಟೊ ವೈರಲ್

ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿದೆ. ಧಾರವಾಡದಲ್ಲಿ ಪ್ರಶ್ನೆ ಪತ್ರಿಕೆಗಳ ಮೇಲಿನ ಸೀಲ್ ಓಪನ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಭ್ಯರ್ಥಿಗಳು ಮರು ಪರೀಕ್ಷೆಗೆ ಆಗ್ರಹಿಸಿದ್ದಾರೆ.

ಧಾರವಾಡ: ಪಿಡಿಒ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮದ ಆರೋಪ, ಸೀಲ್ ಓಪನ್ ಆಗಿರುವ ಪ್ರಶ್ನೆಪತ್ರಿಕೆ ಫೋಟೊ ವೈರಲ್
ಸೀಲ್ ಓಪನ್ ಆಗಿರುವ ಪ್ರಶ್ನೆಪತ್ರಿಕೆ ಫೋಟೊ ವೈರಲ್
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Ganapathi Sharma

Updated on:Dec 12, 2024 | 9:55 AM

ಧಾರವಾಡ, ಡಿಸೆಂಬರ್ 12: ಪಿಡಿಒ ನೇಮಕಾತಿಗೆ ಸಂಬಂಧಿಸಿ ಡಿಸೆಂಬರ್ 8ರಂದು ನಡೆದಿದ್ದ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಿರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಪ್ಪಿತಸ್ಥರನ್ನು ಶಿಕ್ಷಿಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಗ್ರವೂ ವ್ಯಕ್ತವಾಗಿದೆ. ಇದರೊಂದಿಗೆ, ಈ ಸಲವೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಕೆಪಿಎಸ್‌ಸಿ ವಿಫಲವಾಯ್ತಾ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಧಾರವಾಡದ ಕೆಎನ್‌ಕೆ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ಕೈ ಸೇರುವ ಮೊದಲೇ ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಸಾಮಾನ್ಯ ಜ್ಞಾನ ವಿಷಯಕ್ಕೆ ಸಂಬಂಧಪಟ್ಟ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು ಎನ್ನಲಾಗಿದೆ.

ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾನ್ಯವಾಗಿ ಮೂರು ಹಂತದ ಸೀಲ್ ಭದ್ರತೆ ಹೊಂದಿರುತ್ತವೆ. ಪರೀಕ್ಷಾ ಕೇಂದ್ರದ ಪ್ರಶ್ನೆ ಪತ್ರಿಕೆಗಳ ಬಂಡಲ್‌ಗೆ ಸಮಗ್ರವಾಗಿ ಪ್ಲಾಸ್ಟಿಕ್ ಕವರ್​ನ ಸೀಲ್ ಹಾಕಿರಲಾಗುತ್ತದೆ. ಬಳಿಕ ಆಯಾ ಪರೀಕ್ಷಾ ಕೊಠಡಿಯ ಪ್ರಶ್ನೆ ಪತ್ರಿಕೆಗಳಿಗೆ ಕಾಗದದ ಕವರ್​ನ ಜೊತೆಗೆ ಸೀಲ್ ಹಾಕಿರುತ್ತಾರೆ. ಕೊನೆಗೆ ಪ್ರತಿಯೊಂದು ಪ್ರಶ್ನೆ ಪತ್ರಿಕೆಗೂ ಪ್ರತ್ಯೇಕ ಸೀಲ್ ಇರುತ್ತದೆ. ಆದರೆ, ಪ್ರಶ್ನೆ ಪತ್ರಿಕೆಯ ಮೇಲಿನ ಸೀಲ್ ಓಪನ್ ಮಾಡಿ ಪುನಃ ಆಂಟಿಸಿದ್ದಾರೆಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಕೆಪಿಎಸ್‌ಸಿ ಸರಿಯಾಗಿ ಪರೀಕ್ಷೆ ನಡೆಸಿಲ್ಲವೆಂದು ಅಭ್ಯರ್ಥಿಗಳು ಆರೋಪ ಮಾಡಿದ್ದು, ಮರುಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಕೆಪಿಎಸ್‌ಸಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿಯನ್ನೂ ಮಾಡಲಾಗಿದೆ.

ಹೋರಾಟಕ್ಕೆ ನಿರ್ಧಾರ

ಮರುಪರೀಕ್ಷೆ ಮಾಡಬೇಕೆಂದು ಹೋರಾಟ ನಡೆಸಲು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ ತೀರ್ಮಾನಿಸಿದೆ. ಜತೆಗೆ, ಸೀಲ್ ಓಪನ್ ಮಾಡಿರುವ ಬಗ್ಗೆ ತನಿಖೆ ಮಾಡುವಂತೆ ಆಗ್ರಹಿಸಿದೆ.

150 ಪಿಡಿಒ ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್ 8ರಂದು ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ ಒಟ್ಟಾರೆ 2 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಕಾಂತಕುಮಾರ್ ಆರ್ ಎಕ್ಸ್​ ಸಂದೇಶ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ, ದಿನಾಂಕ 8/12/2024 ರಂದು ನಡೆದ “ಪಂಚಾಯತ್ ಅಭಿವೃದ್ಧಿ ಅಧಿಕಾರಿ” ಪರೀಕ್ಷೆಯಲ್ಲಿ PSI-545 ಹಗರಣದ ಮಾದರಿಯಲ್ಲಿಯೇ ಬ್ಲೂಟೂತ್ ಸದ್ದು ಮಾಡಿದೆ. ಕೇವಲ ತುಮಕೂರಿನಲ್ಲಿ ಒಬ್ಬ ಅಭ್ಯರ್ಥಿ ಬ್ಲೂಟೂತ್ ಬಳಸಿಲ್ಲ, ಇದರ ಹಿಂದೆ ಒಂದು ದೊಡ್ಡ ಗ್ಯಾಂಗ್ ಇದೆ. ನಮಗೆಲ್ಲ ನೆನಪಿದೆ, ತಾವೇ ಮುಂದಾಳತ್ವ ವಹಿಸಿಕೊಂಡು PSI ಹಗರಣವನ್ನು ಬಯಲಿಗೆಳೆದು, ಅಕ್ರಮದ ಅಪರಾಧಿಗಳಿಗೆ ಜೈಲುಗಂಬಿ ಎಣಿಸಲಿಕ್ಕೆ ಹಚ್ಚಿದಿರಿ. PDO HK ಮತ್ತು NON HK ಪರೀಕ್ಷೆಯಲ್ಲಿ “ಬ್ಲೂಟೂತ್ ಬಳಕೆ”ಮತ್ತು “ಪ್ರಶ್ನೆ ಪತ್ರಿಕೆ ಸೋರಿಕೆ” ಆಗಿರುವುದು ಜಗಜ್ಜಾಹೀರವಾಗಿದೆ. ಬಡ ಅಭ್ಯರ್ಥಿಗಳು 5-6 ವರ್ಷದಿಂದ ಪರೀಕ್ಷೆಗೆ ಹಗಲು-ರಾತ್ರಿ ತಯಾರಿ ನಡೆಸಿದ್ದರು. ಅಕ್ರಮವಾಗಿ ಸರ್ಕಾರಿ ಹುದ್ದೆಗಳು ಮಾರಾಟವಾದರೆ, ಪ್ರತಿಭಾನ್ವಿತ ಬಡ ಅಭ್ಯರ್ಥಿಗಳ ಗತಿಯೇನು? ಇದಕ್ಕೆ ಉತ್ತರ ತಾವು ಕೊಡಬೇಕು. ಯುವಕರ ಕಣ್ಮಣಿ ನೀವು, ನಿಮ್ಮ ಮೇಲೆ ಲಕ್ಷಾಂತರ ಅಭ್ಯರ್ಥಿಗಳು ಭರವಸೆ ಇಟ್ಟಿದ್ದಾರೆ. ಇದಕ್ಕೆ ಪರಿಹಾರ ಹುಡಿಕಿ, ಅಕ್ರಮದಲ್ಲಿ ಭಾಗಿಯಾದ ಆರೋಪಿಗಳಿಗೆ ಜೈಲಿಗಟ್ಟಿಸಿ, “ಮರುಪರೀಕ್ಷೆ “ನಡೆಸುವಂತೆ KPSC ಗೆ ಅದೇಶಿಸಬೇಕೆಂದು AKSSA ಸಂಘಟನೆ ಪರವಾಗಿ ಕೇಳಿಕೊಳ್ಳುತ್ತೇವೆ ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (ರಿ) ವಿದ್ಯಾರ್ಥಿ ಘಟಕದ ಕಾಂತಕುಮಾರ್ ಆರ್ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೆಇಎ ಸೀಟ್​ ಬ್ಲಾಕಿಂಗ್​ ಹಗರಣ: 10 ಆರೋಪಿಗಳ ಬಂಧನ

ಎಕ್ಸ್​ ಸಂದೇಶದ ಜತೆಗೆ ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಿದ್ದು ಎನ್ನಲಾದ ಆರೋಪಕ್ಕೆ ಸಂಬಂಧಿಸಿದ ಚಿತ್ರವನ್ನೂ ಅವರು ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:21 am, Thu, 12 December 24

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!