AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನೇಮಕಾತಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು ಸಹಾಯಕ ನಿಯಂತ್ರಕ ಮತ್ತು ಲೆಕ್ಕಪರಿಶೋಧಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 83 ಹುದ್ದೆಗಳಿದ್ದು, M.Com ಅಥವಾ MBA ಪದವೀಧರರು ಅರ್ಹರು. ಆಕರ್ಷಕ ವೇತನ ಶ್ರೇಣಿಯ ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಯುತ್ತದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 26ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನೇಮಕಾತಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
KPSC ನೇಮಕಾತಿImage Credit source: Getty Images
ಅಕ್ಷತಾ ವರ್ಕಾಡಿ
|

Updated on: Sep 10, 2026 | 2:00 PM

Share

ಕರ್ನಾಟಕ ಲೋಕಸೇವಾ ಆಯೋಗವು (KPSC) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ನಿಯಂತ್ರಕ ಹಾಗೂ ಲೆಕ್ಕಪರಿಶೋಧಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಇಲಾಖೆಗಳಲ್ಲಿ ಉನ್ನತ ಹುದ್ದೆಯ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 26ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.

ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ:

ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 83 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯುತ್ತಮ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಒಟ್ಟು ಹುದ್ದೆಗಳಲ್ಲಿ 15 ಸಹಾಯಕ ನಿಯಂತ್ರಕ ಪೋಸ್ಟ್‌ಗಳಿದ್ದು, ಇವುಗಳಿಗೆ ತಿಂಗಳಿಗೆ 83,700 ರಿಂದ 1,55,200 ರೂ. ವರೆಗೆ ವೇತನ ಸಿಗಲಿದೆ. ಉಳಿದ 68 ಲೆಕ್ಕಪರಿಶೋಧನಾ ಅಧಿಕಾರಿ ಹುದ್ದೆಗಳಿಗೆ ತಿಂಗಳಿಗೆ 69,250 ರಿಂದ 1,34,200ರೂ. ವರೆಗೆ ವೇತನ ಶ್ರೇಣಿಯಿರಲಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Com ಅಥವಾ MBA ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಮತ್ತು ಗರಿಷ್ಠ ವಯೋಮಿತಿ 40 ವರ್ಷಗಳಾಗಿವೆ. ನಿಯಮಾವಳಿಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇದ್ದು, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಸಡಿಲಿಕೆ ಸಿಗಲಿದೆ.

ಇದನ್ನೂ ಓದಿ: ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!

ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600ರೂ. ಹಾಗೂ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 300ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಮಾಜಿ ಸೈನಿಕ ಹಾಗೂ ಅಂಗವಿಕಲ (PH) ಅಭ್ಯರ್ಥಿಗಳು 50ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳು ಈ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ ಮತ್ತು ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳ ಆಯ್ಕೆಯನ್ನು ಸ್ಪರ್ಧಾತ್ಮಕ ಪೂರ್ವಭಾವಿ ಪರೀಕ್ಷೆಯ ಆಧಾರದ ಮೇಲೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಲು KPSC ಯ ಅಧಿಕೃತ ವೆಬ್‌ಸೈಟ್ kpsc.kar.nic.in ಗೆ ಭೇಟಿ ನೀಡಿ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಫಾರ್ಮ್‌ನಲ್ಲಿ ಅಗತ್ಯವಿರುವ ಎಲ್ಲಾ ಶೈಕ್ಷಣಿಕ ವಿವರಗಳನ್ನು ನವೀಕರಿಸಿ, ಇತ್ತೀಚಿನ ಛಾಯಾಚಿತ್ರ ಹಾಗೂ ಅಗತ್ಯ ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಿ, ಶುಲ್ಕ ಪಾವತಿಸಿ ‘Submit’ ಬಟನ್ ಕ್ಲಿಕ್ ಮಾಡುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಕಾಯ್ದಿರಿಸಿಕೊಳ್ಳುವುದು ಮುಖ್ಯ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ