AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​ಸಿ ನೇಮಕಾತಿ ಅಕ್ರಮ: ಎಸ್​ಐಟಿ ರಚನೆಯ ಹೈಕೋರ್ಟ್ ಆದೇಶಕ್ಕೆ ಸರ್ಕಾರ ಠಕ್ಕರ್, ಸುಪ್ರೀಂನಲ್ಲಿ ಪ್ರಶ್ನಿಸಲು ತೀರ್ಮಾನ

ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ಆದೇಶಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಯನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಿದೆ. ಅಲೋಕ್ ಕುಮಾರ್ ನೇತೃತ್ವದಲ್ಲಿ ಎಸ್‌ಐಟಿ ರಚನೆ, ಹಾಗೂ ಸಿಐಡಿ ತನಿಖೆಯಲ್ಲಿನ ಪ್ರಗತಿಯನ್ನು ರಾಜ್ಯ ಸರ್ಕಾರವು ಆಕ್ಷೇಪಿಸಿದೆ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರಕ್ಕೆ ಬಂದಿದೆ.

ಕೆಪಿಎಸ್​ಸಿ ನೇಮಕಾತಿ ಅಕ್ರಮ: ಎಸ್​ಐಟಿ ರಚನೆಯ ಹೈಕೋರ್ಟ್ ಆದೇಶಕ್ಕೆ ಸರ್ಕಾರ ಠಕ್ಕರ್, ಸುಪ್ರೀಂನಲ್ಲಿ ಪ್ರಶ್ನಿಸಲು ತೀರ್ಮಾನ
ಎಸ್​ಐಟಿ ರಚನೆಯ ಹೈಕೋರ್ಟ್ ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಸರ್ಕಾರ ತೀರ್ಮಾನImage Credit source: tv9
ಕಿರಣ ಹೆಚ್​. ವಿ.
| Edited By: |

Updated on: Sep 23, 2026 | 10:57 AM

Share

ಬೆಂಗಳೂರು, ಸೆಪ್ಟೆಂಬರ್ 23: ಕೆಪಿಎಸ್ಸಿ ನೇಮಕಾತಿ ಹಗರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಆದೇಶಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಯನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಿದೆ. ಈ ವಿಚಾರದಲ್ಲಿ ಕಾನೂನು ತಜ್ಞರ ಸಲಹೆ ಪಡೆದಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ. ಹೈಕೋರ್ಟ್ ಆದೇಶದ ಪ್ರಕಾರ, ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಐವರು ಅಧಿಕಾರಿಗಳ (ಅನೂಪ್ ಶೆಟ್ಟಿ, ದಿವ್ಯ ಗೋಪಿನಾಥ್ ಸೇರಿದಂತೆ) ಎಸ್‌ಐಟಿ ತಂಡವನ್ನು ರಚಿಸಲಾಗಿದೆ. ಈ ತಂಡವು 100 ದಿನಗಳ ಒಳಗಾಗಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಿದೆ.

ಸರ್ಕಾರದ ಆಕ್ಷೇಪ ಯಾಕೆ? ಸರ್ಕಾರ ಹೇಳುವುದೇನು?

ಈ ನಿರ್ದಿಷ್ಟ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ರಚನೆಗೆ ನಿರ್ದೇಶನ ನೀಡಿರುವುದನ್ನು ರಾಜ್ಯ ಸರ್ಕಾರ ಆಕ್ಷೇಪಿಸಿದೆ. ಈಗಾಗಲೇ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್‌ಮೆಂಟ್ (ಸಿಐಡಿ) ಈ ಹಗರಣದ ತನಿಖೆಯನ್ನು ಶೇ 80ರಷ್ಟು ಪೂರ್ಣಗೊಳಿಸಿದೆ. ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ, ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ, ಹಣವನ್ನು ಸೀಜ್ ಮಾಡಲಾಗಿದೆ ಮತ್ತು ತಾಂತ್ರಿಕ ಸಾಕ್ಷ್ಯಗಳು, ದಾಖಲೆಗಳು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಇಂತಹ ಸಂದರ್ಭದಲ್ಲಿ ಹೊಸ ಎಸ್‌ಐಟಿ ರಚನೆ ಮಾಡುವ ಅಗತ್ಯವೇನು ಮತ್ತು ನಿರ್ದಿಷ್ಟ ಅಧಿಕಾರಿಗಳನ್ನು ನೇಮಿಸಿ ಎಂದು ಕೋರ್ಟ್ ಹೇಗೆ ಆದೇಶಿಸಬಹುದು ಎಂಬುದು ರಾಜ್ಯ ಸರ್ಕಾರದ ಪ್ರಶ್ನೆಯಾಗಿದೆ.

ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ಎಸ್​ಐಟಿ ರಚನೆ ಆದೇಶದ ಬಗ್ಗೆ ಮುಖ್ಯಮಂತ್ರಿಗಳು ಸಹ ಪ್ರತಿಕ್ರಿಯಿಸಿದ್ದು, ‘ನಮ್ಮ ಅಧಿಕಾರಿಗಳು ದಕ್ಷವಾಗಿ ಕೆಲಸ ಮಾಡುತ್ತಿದ್ದಾರೆ. ಎಸ್‌ಐಟಿ ರಚನೆಗೆ ನಮ್ಮ ಅಭ್ಯಂತರವಿಲ್ಲ, ಆದರೆ ಇಂತಹ ಅಧಿಕಾರಿಗಳನ್ನೇ ನೇಮಿಸಿ ಎನ್ನುವುದು ತಪ್ಪು ಸಂದೇಶ ರವಾನೆ ಮಾಡುತ್ತದೆ’ ಎಂದು ಹೇಳಿದ್ದಾರೆ.

ಸರ್ಕಾರದ ಆತಂಕಕ್ಕೆ ಕಾರಣವೇನು?

ಹೈಕೋರ್ಟ್ ಆದೇಶವು ಕೇವಲ ಪಶುವೈದ್ಯಕೀಯ ಅಧಿಕಾರಿಗಳ ನೇಮಕಾತಿ ಹಗರಣಕ್ಕೆ ಮಾತ್ರ ಸೀಮಿತವಾಗಿಲ್ಲದೆ, ಜ್ಞಾನೇಂದ್ರ ಕುಮಾರ್ ಅವರು ಕಂಟ್ರೋಲರ್ ಆಗಿದ್ದ ಸಮಯದಲ್ಲಿ ನಡೆದ ಕೆಪಿಎಸ್‌ಸಿ, ಕೆಎಎಸ್, ಎಇ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ನಡೆದ ಹಗರಣಗಳನ್ನೂ ತನಿಖೆ ಮಾಡಲು ವ್ಯಾಪ್ತಿ ಹೊಂದಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ನಡೆದ ಹಲವು ನೇಮಕಾತಿಗಳು ಈ ತನಿಖೆಯ ವ್ಯಾಪ್ತಿಗೆ ಬರಲಿದ್ದು, ಇದು ಸರ್ಕಾರದ ಮಟ್ಟದಲ್ಲಿ ಆತಂಕ ಮೂಡಿಸಿದೆ. ಪ್ರಭಾವಿಗಳು, ಶಾಸಕರು ಅಥವಾ ಸಚಿವರು ಸಹ ಈ ಹಗರಣದಲ್ಲಿ ಭಾಗಿಯಾಗಿದ್ದರೆ, ತನಿಖೆಯಿಂದ ಸರ್ಕಾರಕ್ಕೆ ಮುಜುಗರ ಎದುರಾಗುವ ಭಯವಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

LIVE TV

ಒಂದು ಕಡೆ ಎಸ್‌ಐಟಿ ಮುಖ್ಯಸ್ಥ ಅಲೋಕ್ ಕುಮಾರ್ ತಂಡದೊಂದಿಗೆ ತನಿಖೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನೊಂದೆಡೆ, ರಾಜ್ಯ ಸರ್ಕಾರವು ಕಾನೂನು ಅಭಿಪ್ರಾಯಗಳನ್ನು ಪಡೆದು ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಿದೆ. ಸದ್ಯಕ್ಕೆ, ಅಲೋಕ್ ಕುಮಾರ್ ಅವರಿಗೆ ಸರ್ಕಾರದಿಂದ ಯಾವುದೇ ಅಧಿಕೃತ ಸಂವಹನ ನಡೆದಿಲ್ಲ ಎಂದು ತಿಳಿದುಬಂದಿದೆ. ಈ ಬೆಳವಣಿಗೆಗಳು ಕೆಪಿಎಸ್ಸಿ ಹಗರಣದ ತನಿಖೆಯಲ್ಲಿ ಹೊಸ ತಿರುವನ್ನು ತಂದಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ದಿಕ್ಕಿಗೆ ಸಾಗಲಿದೆ, ಯಾರ್ಯಾರ ಮೇಲೆ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಒಂದೇ ತಿಂಗಳಲ್ಲಿ ಮಾದಪ್ಪನ ಹುಂಡಿಯಲ್ಲಿ ಜಮೆಯಾಯ್ತು 2 ಕೋಟಿ ರೂ. ಕಾಣಿಕೆ!
ಒಂದೇ ತಿಂಗಳಲ್ಲಿ ಮಾದಪ್ಪನ ಹುಂಡಿಯಲ್ಲಿ ಜಮೆಯಾಯ್ತು 2 ಕೋಟಿ ರೂ. ಕಾಣಿಕೆ!
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು