AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್‌ಸಿ ನೇಮಕಾತಿ ಅಕ್ರಮ: ರಾಜ್ಯ ಸರ್ಕಾರ, ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ನಡೆಸಿದೆ. ಇದೇ ವೇಳೆ, ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆ ಜುಲೈ 29ರಂದು ನಡೆಯಲಿದೆ.

ಕೆಪಿಎಸ್‌ಸಿ ನೇಮಕಾತಿ ಅಕ್ರಮ: ರಾಜ್ಯ ಸರ್ಕಾರ, ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್
ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ)Image Credit source: tv9
ಗಣಪತಿ ಶರ್ಮಾ
|

Updated on: Jul 22, 2026 | 8:12 AM

Share

ಮುಖ್ಯಾಂಶಗಳು

  • ಕೆಪಿಎಸ್‌ಸಿ ಅಕ್ರಮಕ್ಕೆ ಸಿಬಿಐ ತನಿಖೆ ಕೋರಿದ ಅರ್ಜಿಯ ವಿಚಾರಣೆ
  • ರಾಜ್ಯ ಸರ್ಕಾರ, ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್
  • ಜುಲೈ 29ಕ್ಕೆ ಮುಂದಿನ ವಿಚಾರಣೆ

ಬೆಂಗಳೂರು, ಜುಲೈ 22: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಬಿಐಗೆ (CBI) ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಅಮಾನತುಗೊಂಡ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರ ಪುತ್ರಿಯರ ಆಯ್ಕೆ ಸೇರಿದಂತೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘದ ಪರವಾಗಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಜುಲೈ 29ರೊಳಗೆ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸುವಂತೆ ಸೂಚಿಸಿದ್ದಾರೆ. ಈ ನಡುವೆ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ ಪ್ರಕರಣವನ್ನು ವರ್ಗಾಯಿಸಲು ಮುಂದಾದರೆ, ಅರ್ಜಿದಾರರು ಮತ್ತೆ ನ್ಯಾಯಾಲಯದ ಮೊರೆ ಹೋಗಲು ಅವಕಾಶವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಅರ್ಜಿದಾರರ ವಾದವೇನು?

ಜುಲೈ 3ರಂದು ಸಲ್ಲಿಸಿದ್ದ ದೂರಿನ ಆಧಾರದಲ್ಲಿ ವಿಧಾನದೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಅದು ಕೇವಲ ಮೇಲ್ನೋಟದ ಕ್ರಮವಾಗಿದೆ. ಮೂಲ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆದಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು. ಸಾರ್ವಜನಿಕರ ಆಕ್ರೋಶ ತಣಿಸಲು ಸರ್ಕಾರ ಎಸ್‌ಐಟಿ ರಚಿಸುವ ಸಾಧ್ಯತೆಯೂ ಇದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.

ಕೆಪಿಎಸ್​ಸಿ ವಿರುದ್ಧದ ಆರೋಪಗಳೇನು?

ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರು ನೇಮಕಾತಿ ಪ್ರಕ್ರಿಯೆಯಲ್ಲಿ ಹಿತಾಸಕ್ತಿ ಸಂಘರ್ಷ ಉಂಟುಮಾಡುವ ರೀತಿಯಲ್ಲಿ ವರ್ತಿಸಿ, ತಮ್ಮ ಇಬ್ಬರು ಪುತ್ರಿಯರ ಆಯ್ಕೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಅಲ್ಲದೆ, 3ಬಿ ಮೀಸಲಾತಿ ಪಡೆಯಲು ಅಗತ್ಯವಾಗಿರುವ ಆದಾಯ ಪ್ರಮಾಣಪತ್ರದಲ್ಲಿ ಅವರ ವಾರ್ಷಿಕ ಆದಾಯವನ್ನು ಕೇವಲ 40 ಸಾವಿರ ರೂಪಾಯಿ ಎಂದು ತೋರಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಉಲ್ಲೇಖಿಸಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಜುಲೈ 29ಕ್ಕೆ ನಿಗದಿಯಾಗಿದೆ.

ಇದನ್ನೂ ಓದಿ: ಮಗಳ ಸರ್ಕಾರಿ ನೌಕರಿಗಾಗಿ ಸಾಹುಕಾರ್ ಅಕ್ರಮ ಎಸಗಿರೋದು ಅಕ್ಷಮ್ಯ ಅಪರಾಧ; ಕೆಪಿಎಸ್‌ಸಿ ಹಗರಣದ ತನಿಖೆ ಸಿಬಿಐಗೆ ಒಪ್ಪಿಸಲು ಯತ್ನಾಳ್ ಆಗ್ರಹ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!