Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌ ಹಾಕಲು ಕಾಯ್ದೆ ತಿದ್ದುಪಡಿಗೆ ಸರ್ಕಾರ ನಿರ್ಧಾರ: ಏನೇನು ಬದಲಾವಣೆ? ಇಲ್ಲಿದೆ ವಿವರ

ಕರ್ನಾಟಕ ಸರ್ಕಾರವು ಲೋಕಸೇವಾ ಆಯೋಗದಲ್ಲಿನ ಅವ್ಯವಹಾರಗಳನ್ನು ತಡೆಯಲು ಕಾಯ್ದೆ ತಿದ್ದುಪಡಿ ಮಾಡಲು ನಿರ್ಧರಿಸಿದೆ. ಈ ತಿದ್ದುಪಡಿಯಿಂದ ಸಂದರ್ಶನ ಪ್ರಕ್ರಿಯೆ ಪಾರದರ್ಶಕವಾಗಲಿದೆ ಮತ್ತು ಸ್ವಜನಪಕ್ಷಪಾತ ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದರ ಜೊತೆಗೆ, ಪಶು ಆಹಾರ ನಿಯಂತ್ರಣಕ್ಕೆ ಹೊಸ ಕಾಯ್ದೆ ಮತ್ತು ಬೆಂಗಳೂರು ಅರಮನೆ ಮೈದಾನದ ಟಿಡಿಆರ್ ಪ್ರಮಾಣಪತ್ರ ಠೇವಣಿ ಸೇರಿದಂತೆ ಇತರ ಪ್ರಮುಖ ನಿರ್ಣಯಗಳನ್ನು ಸಚಿವ ಸಂಪುಟ ಅನುಮೋದಿಸಿದೆ. ವಿವರಗಳು ಇಲ್ಲಿವೆ.

ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌ ಹಾಕಲು ಕಾಯ್ದೆ ತಿದ್ದುಪಡಿಗೆ ಸರ್ಕಾರ ನಿರ್ಧಾರ: ಏನೇನು ಬದಲಾವಣೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Mar 06, 2025 | 7:57 AM

ಬೆಂಗಳೂರು, ಮಾರ್ಚ್ 6: ಕರ್ನಾಟಕ ಲೋಕಸೇವಾ ಆಯೋಗದ (KPSC) ಅವ್ಯವಹಾರ, ಭ್ರಷ್ಟಾಚಾರ ಮತ್ತು ಒಂದರ ಮೇಲೊಂದು ಎಡವಟ್ಟುಗಳಿಂದ ಪ್ರಾಮಾಣಿಕ ಅಭ್ಯರ್ಥಿಗಳು ಬೇಸತ್ತು ಹೋಗಿದ್ದಾರೆ. ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತಿರುವ ರಾಜ್ಯಸರ್ಕಾರ (Karnataka Govt) ಇದೀಗ ಕೆಪಿಎಸ್ಸಿಗೆ ಕಾಯಕಲ್ಪ ನೀಡಲು ಮುಂದಾಗಿದೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕೆಪಿಎಸ್ಸಿ ಕಾಯ್ದೆ 1959’ಕ್ಕೆ (KPSC Act) ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ನಿರ್ಧರಿಸಿದೆ.

ಕೆಪಿಎಸ್ಸಿ ತಿದ್ದುಪಡಿ ಕಾಯ್ದೆಯಲ್ಲೇನಿದೆ?

ಈ ತಿದ್ದುಪಡಿ ಮಸೂದೆ ಪ್ರಕಾರ ನೇಮಕಾತಿ ಸಂದರ್ಶನ ಮಂಡಳಿಯಲ್ಲಿ ಆಯೋಗ ನಿಯೋಜಿಸಬಹುದಾದ ಒಬ್ಬ ಸದಸ್ಯ ಮಾತ್ರ ಇರಲಿದ್ದಾರೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮದಲ್ಲಿ ಇರುವಂತೆ ಸಂದರ್ಶನ ನಡೆಸಬೇಕು ಎಂದು ತಿದ್ದುಪಡಿ ಮಾಡಲಾಗುತ್ತದೆ. ಪ್ರಸ್ತುತ ನಿಯಮದಲ್ಲಿ ಆಯೋಗ ನಿಯೋಜಿಸಿದ ಇಬ್ಬರು ಅಥವಾ ಹೆಚ್ಚು ಸದಸ್ಯರು ಅಭ್ಯರ್ಥಿಗಳ ಸಂದರ್ಶನ ನಡೆಸಬಹುದಾಗಿದೆ. ಈ ಸಂದರ್ಶನದ ಫಲಿತಾಂಶಗಳನ್ನು ಆಯೋಗದ ಮುಂದೆ ಮಂಡಿಸಿ, ಅಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂಬ ಅಂಶ ಇದೆ. ಇದು ಸ್ವಜನ ಪಕ್ಷಪಾತ, ಅಕ್ರಮಕ್ಕೆ ಎಡೆ ಮಾಡಿ ಕೊಟ್ಟಿದೆ ಎಂಬ ಆರೋಪವಿತ್ತು. ಅದನ್ನು ಬದಲಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ತಿದ್ದುಪಡಿಯಂತೆ ಆಯೋಗದ ಸಭೆಗೆ ಅಧ್ಯಕ್ಷರನ್ನು ಸೇರಿಸಿ ಒಟ್ಟು ಸದಸ್ಯರ ಪೈಕಿ ಶೇ 50ರಷ್ಟು ಕೋರಂ ಅಗತ್ಯ ಇದೆ ಎಂದು ಬದಲಾಯಿಸಲಾಗುವುದು‌. ಈ ಹಿಂದೆ ಅಧ್ಯಕ್ಷರು ಇಲ್ಲದಿದ್ದರೂ ಶೇ 50ರಷ್ಟು ಎಂದಿತ್ತು. ಆಯೋಗದ ಎಲ್ಲ ನಿರ್ಣಯಗಳು ಎಲ್ಲ ಸದಸ್ಯರಿಗೂ ಮುಕ್ತ ಆಗಿರಬೇಕು. ಒಂದು ವೇಳೆ ಆಯೋಗದ ನಿರ್ಣಯಗಳ ಸಂಬಂಧ ಸದಸ್ಯ ಭಿನ್ನಾಭಿಪ್ರಾಯ ಹೊಂದಿದ್ದರೆ, ಅದಕ್ಕೆ ಕಾರಣದೊಂದಿಗೆ ದಾಖಲಿಸಬೇಕು.

ಸಂಪುಟ ಸಭೆ ಪ್ರಮುಖ ನಿರ್ಣಯಗಳು

  • ಪಶು ಆಹಾರ ನಿಯಂತ್ರಣಕ್ಕೆ ಕಾಯ್ದೆ ತಿದ್ದುಪಡಿಗೆ ಅಸ್ತು.
  • ಪರವಾನಗಿ ಇಲ್ಲದೆ ಪಶು ಆಹಾರ ಉತ್ಪಾದಿಸಿ, ಮಾರುವಂತಿಲ್ಲ.
  • ನಿಯಮ ಉಲ್ಲಂಘಿಸಿದ್ರೆ 3 ವರ್ಷ ಜೈಲುಶಿಕ್ಷೆ ಮತ್ತು 5ಲಕ್ಷ ರೂ. ದಂಡ.
  • ಬೆಂಗಳೂರು ಅರಮನೆ ಮೈದಾನ ಟಿಡಿಆರ್ ಪ್ರಮಾಣ ಪತ್ರ ಠೇವಣಿ.
  • ವೃತ್ತಿಪರ ತೆರಿಗೆ 300 ರೂ.ಗೆ ಏರಿಕೆ ಮಾಡಲು ಒಪ್ಪಿಗೆ. ಪ್ರಸ್ತುತ ವೇತನದಲ್ಲಿ 200 ರೂ. ಕಡಿತವಾಗುತ್ತಿದ್ದು, ಇನ್ಮುಂದೆ 300 ರೂ. ಕಡಿತವಾಗಲಿದೆ.

ಪರವಾನಗಿ ಇಲ್ಲದೆ ಪಶು ಆಹಾರ ಉತ್ಪಾದಿಸಿ, ಮಾರಾಟ ಮಾಡಿದ್ರೆ ಜೈಲು, ದಂಡ

ರಾಜ್ಯದಲ್ಲಿ ಪಶು ಆಹಾರ ಉತ್ಪಾದನೆ, ಪೂರೈಕೆ ಮತ್ತು ಮಾರಾಟವನ್ನು ನಿಯಂತ್ರಿಸಲು ಕರ್ನಾಟಕ ಪಶು ಆಹಾರ ಮತ್ತು ಪೂರಕ ಮೇವು ವಿಧೇಯಕ, 2025ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಪರವಾನಗಿ ಇಲ್ಲದೆ ಪಶು ಆಹಾರ ಉತ್ಪಾದಿಸಿ, ಮಾರಾಟ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ವರೆಗೆ ದಂಡ ವಿಧಿಸಲು ಅವಕಾಶವಿರಲಿದೆ. ಬೆಂಗಳೂರು ಅರಮನೆ ಮೈದಾನ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಆದೇಶದಂತೆ ಟಿಡಿಆರ್ ಪ್ರಮಾಣ ಪತ್ರವನ್ನು ಠೇವಣಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದನ್ನೂ ಓದಿ
Image
ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಚಲುವರಾಯಸ್ವಾಮಿ ಮತ್ತು ಭೈರತಿ ಸುರೇಶ್
Image
ಮಹದೇವಪ್ಪ ಅಸಹಾಯಕರಾಗಿದ್ದರೆ ಸದನದ ಗಮನಕ್ಕೆ ತರಲಿ: ಸುನೀಲ ಕುಮಾರ್
Image
ಹಾಲು ಉತ್ಪಾದಕರ 656 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಸರ್ಕಾರ
Image
ಅಧಿಕಾರಿಯಿಂದ ಭಾರೀ ಪ್ರಮಾದ ಜರುಗಿದ್ದರೂ ಸರ್ಕಾರ ಯಾಕೆ ಮೌನ? ಅಶೋಕ

ಇದನ್ನೂ ಓದಿ: ಹಾಲು ಉತ್ಪಾದಕರ 656 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಸರ್ಕಾರ

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಗೆ ಕೂಡ ಸರ್ಕಾರ ಮುಂದಾಗಿದ್ದು, ಆದರೆ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬಂದಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!