AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಯುತ್ತಿದೆ. ಒಂದೆಡೆ ಸಿಐಡಿ ತನಿಖೆ ನಡೆಸುತ್ತಿದ್ದರೆ ಮತ್ತೊಂದು ಸಿಐಡಿ ಸಹ ತನಿಖೆ ಮಾಡುತ್ತಿದೆ. ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಎರಡು ದಿನಗಳ ಕಾಲ ಸುದೀರ್ಘ ವಿಚಾರಣೆಗೊಳಪಡಿಸಿದ ಸಿಐಡಿ, ಇದೀಗ ಅವರನ್ನ ವಶಕ್ಕೆ ಪಡೆದುಕೊಂಡಿದೆ.

KPSC ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ
Ias Officer Gyanendra Kumar
ಶಿವಪ್ರಸಾದ್​ ಬಿ.
| Edited By: |

Updated on: Aug 29, 2026 | 10:15 PM

Share

ಬೆಂಗಳೂರು, (ಆಗಸ್ಟ್ 29): ಕೆಪಿಎಸ್​ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಹಗರಣ (KPSC Scam) ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಂದೆಡೆ ಇಡಿ ಅಧಿಕಾರಿಗಳು, ಕೆಪಿಎಎಸ್ ಮಾಜಿ ಅಧ್ಯಕ್ಷ, ಸದಸ್ಯರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಮತ್ತೊಂದಡೆ ಸಿಐಡಿ ಸಹ ಕೆಪಿಎಸ್​​ಸಿ ಕಚೇರಿ ಮೇಲೆ ದಾಳಿ ಮಾಡಿ ಇದೀಗ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ (IAS officer Gyanendra Kumar) ಅವರನ್ನು ವಶಕ್ಕೆ ಪಡೆದುಕೊಂಡಿದೆ. ಪಶು ವೈದ್ಯಾಧಿಕಾರಿಗಳ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರನ್ನ ಸಿಐಡಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದ್ದು, ಎರಡು ದಿನಗಳ ಬಳಿಕ ಅವರನ್ನ ವಶಕ್ಕೆ ಪಡೆದಿದೆ.

ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ (Controller of Examinations) ಅವಧಿಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ, ಅಂಕ ತಿದ್ದುಪಡಿ ಹಾಗೂ ನೇಮಕಾತಿಯಲ್ಲಿನ ಅಕ್ರಮಗಳ ಕುರಿತಂತೆ ಸಿಐಡಿ ವಿಶೇಷ ತನಿಖಾ ತಂಡ ತೀವ್ರ ತನಿಖೆ ನಡೆಸುತ್ತಿದೆ. ಪ್ರಕರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳು ನಿನ್ನೆ (ಆ.28) ಸತತ 11 ಗಂಟೆಗಳ ಕಾಲ ಜ್ಞಾನೇಂದ್ರ ಕುಮಾರ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಇಂದು (ಆಗಸ್ಟ್ 29) ಮಧ್ಯಾಹ್ನ 12 ಗಂಟೆಯಿಂದ ಮತ್ತೆ ವಿಚಾರಣೆ ಮುಂದುವರಿಸಿದ ತನಿಖಾಧಿಕಾರಿಗಳು, ಅವರು ನೀಡಿದ ಹೇಳಿಕೆಗಳಲ್ಲಿನ ಅಸಮಂಜಸತೆ ಹಾಗೂ ತನಿಖಾ ಪ್ರಕ್ರಿಯೆಗೆ ಸರಿಯಾಗಿ ಸ್ಪಂದಿಸದ ಕಾರಣ ಅಂತಿಮವಾಗಿ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಪ್ರಕರಣದ ಮತ್ತಷ್ಟು ಆಳವಾದ ಮಾಹಿತಿ ಹಾಗೂ ಇತರ ಪ್ರಭಾವಿಗಳ ಪಾತ್ರವನ್ನು ಬಯಲಿಗೆಳೆಯಲು ಹೆಚ್ಚಿನ ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆಯಲು ಸಿಐಡಿ ಸಿದ್ಧತೆ ನಡೆಸಿದೆ.

ಇದೇ ಅಧಿಕಾರಿಯ ಮನೆ ಮೇಲೆ ದಾಳಿ ಮಾಡಿದ್ದ ಇಡಿ

ಹೌದು…ಸಿಐಡಿ ತನಿಖೆಗೂ ಮೊದಲೇ ಇಡಿ ಸಹ ಈ ಹಗರಣದಲ್ಲಿ ಪ್ರವೇಶಿಸಿದ್ದು, ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್  ನಿವಾಸದ ಮೇಲೆ ದಾಳಿ ಮಾಡಿತ್ತು. ಆದ್ರೆ ಅಂದು ಜ್ಞಾನೇಂದ್ರ ಕುಮಾರ್  ಮನೆಯಲ್ಲಿ ಇರಲಿಲ್ಲ. ಬದಲಿಗೆ ತಮ್ಮ ರಾಜ್ಯ ಉತ್ತರ ಪ್ರದೇಶಕ್ಕೆ ತೆರಳಿದ್ದರು. ಹೀಗಾಗಿ ಅನಿವಾರ್ಯವಾಗಿ ಇಡಿ ಅಧಿಕಾರಿಗಳು ನಕಲಿ ಕೀ ಮಾಡಿಸಿ ಮನೆ ಬಾಗಿಲು ತೆರೆದು ಪರಿಶೀಲನೆ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ