AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC ನೇಮಕಾತಿ ಹಗರಣ: ಇಡಿ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಿಗೆ

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆ ಮುಂದುವರಿದಿದ್ದು, ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಬಿ.ವಿ. ಗೀತಾ ಡೀಲಿಂಗ್ ಬಯಲಾಗಿದೆ. ಈ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಇಬ್ಬರ ಬಂಧನ ಹಾಗೂ ತನಿಖೆಯಲ್ಲಿ ಏನೇನು ಮಾಹಿತಿ ಸಿಕ್ಕಿದೆ ಎನ್ನುವುದನ್ನು ಮಾಹಿತಿ ಹಂಚಿಕೊಂಡಿದೆ.

KPSC ನೇಮಕಾತಿ ಹಗರಣ: ಇಡಿ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಿಗೆ
Kpsc Scam
ರಾಚಪ್ಪಾಜಿ ನಾಯ್ಕ್
| Edited By: |

Updated on:Oct 08, 2026 | 2:49 PM

Share

ಬೆಂಗಳೂರು, (ಅಕ್ಟೋಬರ್ 08): ಕೆಪಿಎಸ್‌ಸಿಯಿಂದ ಪಶುವೈದ್ಯಕೀಯ ನೇಮಕಾತಿ ಹಗರಣ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಅಂದು ಕೆಪಿಎಸ್ ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಡೆಯಿಂದ ಅಂದಿನ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ, ಪರೀಕ್ಷೆ ಮುಂಚಿತವಾಗಿಯೇ 80 ಪ್ರಶ್ನೆಗಳ ಉತ್ತರಗಳನ್ನು ಪಡೆದುಕೊಂಡು ನೇರವಾಗಿ ಅಭ್ಯರ್ಥಿಗಳ ಜೊತೆ ಡೀಲ್​​ಗೆ ಇಳಿದಿರುವುದು ತನಿಖೆ ವೇಳೆ ಬಯಲಾಗಿದೆ. ಈ ಸಂಬಂಧ ಸ್ವತಃ ಇಡಿ ಮಾಧ್ಯಮ ಪ್ರಕರಣೆ ಮೂಲಕ ಸ್ಪಷ್ಟಪಡಿಸಿದೆ.

ಶಿವಶಂಕರಪ್ಪ ಸಾಹುಕರ್ ಹಾಗೂ ಗೀತಾ ಬಂಧನದ ಬಳಿಕ ಇಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಪ್ರಶ್ನೆಪತ್ರಿಕೆ,‌ ಕೀ ಉತ್ತರನ್ನು ಸೋರಿಕೆ, 1:3 ಮೆರಿಟ್ ನಲ್ಲಿ ಸೋರಿಕೆ ಮಾಡಿ ಹಣ ಪಡೆದಿದ್ದಾರೆ. ಕೆಲವು ಅಭ್ಯರ್ಥಿಗಳಿಗೆ ಪರೀಕ್ಷೆ ಒಂದು ದಿನ ಮುಂಚಿತವಾಗಿ ಕೀ ಉತ್ತರ ನೀಡಲಾಗಿತ್ತು. ಇದಕ್ಕಾಗಿ ಪ್ರತಿ ಅಭ್ಯರ್ಥಿಯಿಂದ 20 ಲಕ್ಷದಿಂದ 40 ಲಕ್ಷದವರೆಗೆ ಲಂಚ ಪಡೆಯಲಾಗಿದೆ ಎನ್ನುವ ಅಂಶ ತನಿಖೆಯನ್ನು ಗೊತ್ತಾಗಿದೆ.

ಇದನ್ನೂ ಓದಿ: ಕೆಪಿಎಸ್​​ಸಿ ಹಗರಣದಲ್ಲಿ ಶಿವಶಂಕರಪ್ಪ ಸಾಹುಕಾರ್​​, ಬಿ.ವಿ.ಗೀತಾ ಪಾತ್ರವೇನು? ಇಲ್ಲಿದೆ ಮಾಹಿತಿ

ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಕಡೆಯಿಂದ ಬಿ.ವಿ ಗೀತಾ ಮೊದಲ 80 ಪ್ರಶ್ನೆಗಳ ಸರಿಯಾದ ಉತ್ತರಗಳನ್ನ ಪಡೆದುಕೊಂಡಿದ್ದಾರೆ. ಬಳಿಕ ಗೀತಾ ಒಬ್ಬ ಅಭ್ಯರ್ಥಿಯಿಂದ ಡೀಲ್ ಮಾಡಿಕೊಂಡಿದ್ದರು. 40 ಲಕ್ಷದಲ್ಲಿ 20 ಲಕ್ಷವನ್ನು ಮುಂಗಡವಾಗಿ ನಗದು ರೂಪದಲ್ಲಿ ಪಡೆದಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಸಹ ಅಭ್ಯರ್ಥಿ ಜೊತೆ 20 ಲಕ್ಷಕ್ಕೆ ಡೀಲ್ ಮಾಡಿಕೊಂಡು ಮುಂಗಡವಾಗಿ 10 ಲಕ್ಷ ರೂ. ಪಡೆದಿದ್ದಾರೆ. ಹೀಗೆ ಒಟ್ಟು 6 ಅಭ್ಯರ್ಥಿಗಳ ಜೊತೆ ಇಬ್ಬರು ಡೀಲ್ ಮಾಡಿಕೊಂಡಿರೋದು ತನಿಖೆಯಲ್ಲಿ ಪತ್ತೆಯಾಗಿದೆ. ಇನ್ನು ಡೀಲ್ ಆದ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ರ್ಯಾಂಕ್ ಪಡೆದಿದ್ದಾರೆ. ಈ ಆಧಾರದಲ್ಲಿ ಸೆಪ್ಟೆಂಬರ್ 06 ರಂದು ಶಿವಶಂಕರಪ್ಪ ಸಾಹುಕಾರ್ ಮತ್ತು ಗೀತಾರನ್ನ ಬಂಧಿಸಲಾಗಿದೆ. ಇವರಿಬ್ಬರನ್ನ PMLA ಪ್ರಕರಣಗಳ ವಿಶೇಷ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ED ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಮಾಡಲಾಗ್ತಿದೆ ಎಂದು ಇಡಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Thu, 8 October 26

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ