KPTCL ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದು: ಮರುಪರೀಕ್ಷೆಗೆ ಹೈಕೋರ್ಟ್ ಆದೇಶ
ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್)ನ ಎಸಿ ಮತ್ತು ಜೆಇ ಹುದ್ದೆಗಳಿಗೆ ನಡೆದ ಪರೀಕ್ಷೆಯ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. 2024ರ ಫೆಬ್ರವರಿ 18ರ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಕೋರ್ಟ್ ಆದೇಶಿಸಿದೆ. ನೆಗೆಟಿವ್ ಮಾರ್ಕಿಂಗ್ ಬಗ್ಗೆ ಸೂಕ್ತ ಮಾಹಿತಿ ನೀಡದಿರುವುದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಕೋರ್ಟ್ ಪರಿಗಣಿಸಿದೆ.

ಬೆಂಗಳೂರು, ಮೇ 28: 2024 ಮೇ 8ರ ಕೆಪಿಸಿಎಲ್ನ (KPCL) ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದುಪಡಿಸಿ ಮರುಪರೀಕ್ಷೆಗೆ ಹೈಕೋರ್ಟ್ (High Court) ಬುಧವಾರ ಆದೇಶ ಹೊರಡಿಸಿದೆ. 2024 ಫೆ.18ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ನೆಗೆಟಿವ್ ಮಾರ್ಕಿಂಗ್ ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು. ಇಂದು ವಿಚಾರಣೆ ಮಾಡಿದ ಹೈಕೋಟ್ ಮರುಪರೀಕ್ಷೆಗೆ ಆದೇಶಿಸಿದೆ. ಜೊತೆಗೆ ನೆಗೆಟಿವ್ ಮಾರ್ಕಿಂಗ್ ಬಗ್ಗೆ ಪೂರ್ವ ಮಾಹಿತಿ ನೀಡಲು ಸಿಜೆ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೆ.ವಿ.ಅರವಿಂದ್ರಿದ್ದ ಪೀಠ ಸೂಚನೆ ನೀಡಿದೆ.
ಇದನ್ನೂ ಓದಿ: ಪ್ರತಿ ತಾಲೂಕಿನಲ್ಲೂ ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಇ ಮತ್ತು ಜೆಇ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ 2022ರ ಫೆ. 21ರಂದು ಅಧಿಸೂಚನೆ ಹೊರಡಿಸಿತ್ತು. ಬಳಿಕ ಆಗಸ್ಟ್ 17ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಹೀಗಿರುವಾಗ 2023ರ ಫೆ. 1ರಂದು, ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡುವಾಗ ಪಾಲಿಸಬೇಕಾದ ನಿಯಮಗಳ ಕುರಿತು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆ ಸುತ್ತೋಲೆಯಂತೆ ಕೆಪಿಎಸ್‌ಸಿ ತಾತ್ಕಾಲಿಕ ಆಯ್ಕೆ ಪಟ್ಟಿ ತಯಾರಿಸಿತ್ತು.
ಇದನ್ನೂ ಓದಿ: ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾದ ಹೆಂಡತಿಯನ್ನು ಗಂಡನೇ ಇರಿದು ಕೊಂದಿರುವ ಆರೋಪ, ಅರೋಪಿ ನಾಪತ್ತೆ
ಕೆಪಿಸಿಎಲ್ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜೆಇ, ಎಇ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ಆಗಸ್ಟ್ 17 ರಂದೇ ಪ್ರಕಟಿಸಿತ್ತು. ಆದರೆ, ಕೆಪಿಎಸ್‌ಸಿಯ ವಿಳಂಬ ನೀತಿಯಿಂದಾಗಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿರಲಿಲ್ಲ. ಕೆಎಟಿ ಆದೇಶದಿಂದಾಗಿ ಅಂತಿಮ ಆಯ್ಕೆ ಪಟ್ಟಿ ಮತ್ತಷ್ಟು ವಿಳಂಬವಾಗಲಿದೆ’ ಎಂದು ಹುದ್ದೆ ಆಕಾಂಕ್ಷಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.