KPTCL: ವೇತನ ಪರಿಷ್ಕರಣೆ ಭರವಸೆ; ಮುಷ್ಕರ ಹಿಂಪಡೆದ ಕೆಪಿಟಿಸಿಎಲ್

|

Updated on: Mar 15, 2023 | 11:17 PM

ವೇತನ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ಮಾರ್ಚ್ 16ರಂದು ಕರೆ ನೀಡಲಾಗಿರುವ ಮುಷ್ಕರವನ್ನು ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ರದ್ದುಗೊಳಿಸಿದೆ.

KPTCL: ವೇತನ ಪರಿಷ್ಕರಣೆ ಭರವಸೆ; ಮುಷ್ಕರ ಹಿಂಪಡೆದ ಕೆಪಿಟಿಸಿಎಲ್
ಕೆಪಿಟಿಸಿಎಲ್​
Follow us on

ಬೆಂಗಳೂರು: ವೇತನ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ಮಾರ್ಚ್ 16ರಂದು ಕರೆ ನೀಡಲಾಗಿರುವ ಮುಷ್ಕರವನ್ನು ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ರದ್ದುಗೊಳಿಸಿದೆ. ಈ ಕುರಿತು ಕೆಪಿಟಿಸಿಎಲ್ ಒಕ್ಕೂಟದ ಅಧ್ಯಕ್ಷ ಲಕ್ಷ್ಮೀಪತಿ ಬುಧವಾರ ರಾತ್ರಿ ಮಾಹಿತಿ ನೀಡಿದ್ದಾರೆ. ಎರಡನೇ ಬಾರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕೆಪಿಟಿಸಿಎಲ್ ನೌಕರರ ಒಕ್ಕೂಟದ ಪದಾಧಿಕಾರಿಗಳು ಚರ್ಚೆ ನಡೆಸಿದ್ದರು. ಈ ವೇಳೆ, ಗುರುವಾರ ವೇತನ ಪರಿಷ್ಕರಣೆ ಕುರಿತಂತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವ ಭರವಸೆ ದೊರೆತಿದೆ. ಮುಖ್ಯಮಂತ್ರಿಗಳ ಭರವಸೆ ಮೇಲೆ ವಿಶ್ವಾಸವಿದೆ. ಹೀಗಾಗಿ ಮುಷ್ಕರ ವಾಪಸ್ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವೇತನ ಹೆಚ್ಚಿಸುವಂತೆ ಕೆಪಿಟಿಸಿಎಲ್ ನೌಕರರು ರಾಜ್ಯ ಸರ್ಕಾರಕ್ಕೆ ನೀಡಿದ 14 ದಿನಗಳ ಗಡುವು ಬುಧವಾರಕ್ಕೆ ಮುಗಿದಿತ್ತು. ಹೀಗಾಗಿ ಮಾರ್ಚ್ 16ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕೆಪಿಟಿಸಿಎಲ್​ ನೌಕರರ ಸಂಘ ಕರೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ಎಸ್ಕಾಂಗಳು ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲು ನಿರ್ಧರಿಸಿದ್ದರು. ಸುಮಾರು 50 ಸಾವಿರ ನೌಕರರು ನಾಳೆಯ ಮುಷ್ಕರದಲ್ಲಿ ಭಾಗಿಯಾಗಲಿದ್ದರು.

ಕೆಪಿಟಿಸಿಎಲ್​ ನೌಕರರ ಬೇಡಿಕೆಗಳು ಏನೇನಿದ್ದವು?

  • ಪ್ರತಿ 5 ವರ್ಷಕ್ಕೆ ಒಮ್ಮೆ ವೇತನ ಪರಿಷ್ಕರಣೆ ಆಗಬೇಕಿತ್ತು, ಆದರೆ ಅದು ಆಗಿಲ್ಲ, ಹೀಗಾಗಿ ಈ ಕೂಡಲೇ ವೇತನ ಪರಿಷ್ಕರಣೆ ಮಾಡಬೇಕು.
  • ಕೆಪಿಟಿಸಿಎಲ್​ ಹಾಗೂ ಎಸ್ಕಾಂಗಳ ನೌಕರರು ಮತ್ತು ಅಧಿಕಾರಿಗಳ ವೇತನ ಬೇಡಿಕೆ ಪರಿಷ್ಕರಣೆ ಆಗಲೇಬೇಕು. 01-04-2022 ರಿಂದ ಪೂರ್ವಾನ್ವಯ ಆಗುವಂತೆ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:16 pm, Wed, 15 March 23