KPTCL: ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಹುಬ್ಬಳ್ಳಿಯಲ್ಲಿ ಅರೆಸ್ಟ್

| Updated By: Rakesh Nayak Manchi

Updated on: Sep 03, 2022 | 8:48 AM

ಕೆಪಿಟಿಸಿಎಲ್​ ಕಿರಿಯ ಸಹಾಯಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸುವ ಮೂಲಕ ಒಟ್ಟು ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

KPTCL: ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಹುಬ್ಬಳ್ಳಿಯಲ್ಲಿ ಅರೆಸ್ಟ್
ಕೆಪಿಟಿಸಿಎಲ್ ಅಕ್ರಮ ನೇಮಕಾತಿಯಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಅರೆಸ್ಟ್
Follow us on

ಬೆಳಗಾವಿ: ಕೆಪಿಟಿಸಿಎಲ್​ ಕಿರಿಯ ಸಹಾಯಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸುವ ಮೂಲಕ ಒಟ್ಟು ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿ ಸಂಜೀವ್ ಭಂಡಾರಿ ಎಂಬಾತನನ್ನು ಗೋಕಾಕ್​​ ಪೊಲೀರು ಹುಬ್ಬಳ್ಳಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.

ಅಕ್ರಮದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಸಂಜೀವ್ ಭಂಡಾರಿ, ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದನು. ಈ ವಿಚಾರ ತಿಳಿದ ಗೋಕಾಕ್ ಠಾಣಾ ಪೊಲೀಸರು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರಿಗೆ ಮಾಹಿತಿ ನೀಡಿ ನೆರವು ಕೋರಿದ್ದಾರೆ. ಅದರಂತೆ ಬೆಂಡಿಗೇರಿ ಠಾಣಾ ಪೊಲೀಸರ ಸಹಾಯದಿಂದ ಗೋಕಾಕ್ ಪೊಲೀಸರು, ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ. ಬಂಧನ ನಂತರ ಆರೋಪಿಯನ್ನು ಪೊಲೀಸರು ಗೋಕಾಕ್​​ನ ಪ್ರಧಾನ ಸಿವಿಲ್​ ಮತ್ತು ಜೆಎಂಎಫ್​ಸಿ ಕೋರ್ಟ್​ಗೆ ಹಾಜರು ಮಾಡಿ 7 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸ್ ನೇಮಕಾತಿಯ ಅಕ್ರಮದಲ್ಲೂ ಭಾಗಿ

ಬಂಧಿತ ಸಂಜೀವ್ ಭಂಡಾರಿ ಈ ಹಿಂದೆ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ನಡೆದ ಅಕ್ರಮದಲ್ಲಿ ಭಾಗಿಯಾಗಿ ಜೈಲು ಸೇರಿದ್ದನು. ಅಲ್ಲದೆ ಜಾಮೀನಿನ ಮೇಲೆ ಹೊರಬಂದಿದ್ದನು. ನಂತರ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಅಕ್ರಮದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದನು.

ಏನಿದು ಪ್ರಕರಣ?

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಪರೀಕ್ಷೆ ಆ.7ರಂದು ಗೋಕಾಕ್​ನಲ್ಲಿ ನಡೆದಿತ್ತು. ಈ ಪರೀಕ್ಷೆಯಲ್ಲಿ ಸಿದ್ದಪ್ಪ ಎಂಬ ವ್ಯಕ್ತಿ ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಹೊರಗೆ ಕಳುಹಿಸಿದ್ದನು. ಈ ವಿಚಾರ ತಿಳಿದ ಅಭ್ಯರ್ಥಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅಕ್ರಮ ಎಸಗಿರುವುದು ಖಚಿತವಾಗಿತ್ತು. ಅದರಂತೆ ಅ.22ರಂದು 9 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಅ.24ರಂದು ಮೂವರನ್ನು ಬಂಧಿಸಿದ್ದರು. ಇದೀಗ ಶುಕ್ರವಾರ (ಸೆ.2) ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 am, Sat, 3 September 22