KPTCL Jobs: 404 ಕೆಪಿಟಿಸಿಎಲ್​ ಸಹಾಯಕ ಇಂಜಿನಿಯರ್​ಗಳ ನೇಮಕಕ್ಕೆ ಹೈಕೋರ್ಟ್ ಅನುಮತಿ

KPTCL: ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಕಥಾನಕ, ಒಂದೊಂದಾಗಿ ಬಿಚ್ಚಿಕೊಂಡಿತ್ತು. ಸದ್ಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ​ಗೆ 404 ಸಹಾಯಕ ಇಂಜಿನಿಯರ್​ಗಳ ನೇಮಕಕ್ಕೆ ಷರತ್ತಿನ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ. ನೇಮಕಾತಿ ಹೈಕೋರ್ಟ್​​ನ‌ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕು ಎಂದು ತಿಳಿಸಿದೆ.

KPTCL Jobs: 404 ಕೆಪಿಟಿಸಿಎಲ್​ ಸಹಾಯಕ ಇಂಜಿನಿಯರ್​ಗಳ ನೇಮಕಕ್ಕೆ ಹೈಕೋರ್ಟ್ ಅನುಮತಿ
ಕರ್ನಾಟಕ ಹೈಕೋರ್ಟ್
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on: Feb 07, 2024 | 3:10 PM

ಬೆಂಗಳೂರು, ಫೆಬ್ರವರಿ 7: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ​ಗೆ 404 ಸಹಾಯಕ ಇಂಜಿನಿಯರ್​ಗಳ ನೇಮಕಕ್ಕೆ ಷರತ್ತಿನ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ. ನೇಮಕಾತಿ ಹೈಕೋರ್ಟ್​​ನ‌ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕು. ಹೈಕೋರ್ಟ್​​ನ ತೀರ್ಪಿಗನುಗುಣವಾಗಿ ಸೇವಾ ಜೇಷ್ಠತೆ ಕಾಯ್ದುಕೊಳ್ಳಬೇಕು ಎಂದು ಸಿಜೆ ಪಿ.ಎಸ್.ದಿನೇಶ್ ಕುಮಾರ್,‌ ನ್ಯಾ.ಟಿ.ಜಿ.ಶಿವಶಂಕರೇಗೌಡರಿದ್ದ ಪೀಠ ಆದೇಶ ನೀಡಿದೆ. ಆಯ್ಕೆ ಪರೀಕ್ಷೆ ಪ್ರಕ್ರಿಯೆಯಲ್ಲಿ ಲೋಪವೆಂದು ಕೆಲ ಅಭ್ಯರ್ಥಿಗಳಿಂದ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಆನ್​ಲೈನ್ ಅಪ್ಲಿಕೇಶನ್ ಸಂದರ್ಭದಲ್ಲಿ ಅಭ್ಯರ್ಥಿಗಳ ಫೋಟೋ ಸಿಗ್ನೇಚರ್ ಟೆಕ್ನಿಕಲ್ ಸಮಸ್ಯೆ ಇತ್ತು. ಹೀಗಾಗಿ ನೇಮಕಾತಿ ಪ್ರಕ್ರಿಯೆ ಕೋರ್ಟ್​ನಲ್ಲಿ ಇತ್ತು. ಈಗಾಗಲೇ ಟೆಕ್ನಿಕಲ್ ಸಮಸ್ಯೆಗಳನ್ನ ಸರಿಪಡಿಸಿ ಡಿಸೆಂಬರ್ ಅಂತ್ಯದೊಳಗಡೆ ಲಿಸ್ಟ್ ಬಿಡುವಂತೆ ಕೋರ್ಟ್ ಆದೇಶ ಮಾಡಿತ್ತು.

ಉಗ್ರ ಹೋರಾಟದ ಎಚ್ಚರಿಕೆ 

ಕೋರ್ಟ್ ಆದೇಶ ಇದ್ದರೂ ಯಾವುದೇ ಪ್ರಕ್ರಿಯೆ ನೀಡಿದ ಕೆಪಿಟಿಸಿಎಲ್ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದರು. ಡಿಸೆಂಬರ್ ಅಂತ್ಯದೊಳಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ 2024ರ ಫೆಬ್ರವರಿ 15 ರಂದು ಆಯ್ಕೆ ಮಾಡುವುದಾಗಿ ಭರವಸೆ ನೀಡಿದ್ದು, ಒಂದು ವೇಳೆ ಹೇಳಿದ ಹಾಗೆ ಕೆಪಿಟಿಸಿಎಲ್ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಕಷ್ಟಪಟ್ಟು ಓದಿದ್ದ ವಿದ್ಯಾರ್ಥಿಗಳು ಮರುಪರೀಕ್ಷೆಗೆ ಒತ್ತಾಯಿಸಿದ್ದರು.

ಇದನ್ನೂ ಓದಿ: KPTCL Recruitment Scam: ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿ ಅರೆಸ್ಟ್: ಬಂಧಿತರ ಸಂಖ್ಯೆ 17ಕ್ಕೆ ಏರಿಕೆ

ಕೆಪಿಟಿಸಿಎಲ್​ನ ಕಿರಿಯ ಸಹಾಯಕ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲೂ ಭಾರಿ ಅಕ್ರಮ ನಡೆದಿತ್ತು. ಕಿಂಗ್ ಪಿನ್ ಸೇರಿದಂತೆ ನಕಲು ಮಾಡಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಕೂಡ ಜೈಲು ಪಾಲಾಗಿದ್ದರು. ಆಗಸ್ಟ್ 7, 2022 ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಳಿಗೆ ಪರೀಕ್ಷೆ ನಡೆದಿತ್ತು. ಈ ವೇಳೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಖಾಸಗಿ ಕಾಲೇಜೊಂದರಲ್ಲಿ ಪರೀಕ್ಷಾರ್ಥಿ ನಕಲು ಮಾಡಿದ ವಿಚಾರ ಬಹಿರಂಗವಾಗಿತ್ತು.

ಇದನ್ನೂ ಓದಿ: KPTCL: ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಹುಬ್ಬಳ್ಳಿಯಲ್ಲಿ ಅರೆಸ್ಟ್

ನಕಲು ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬಳಿಕ ಗೋಕಾಕ್​ ಶಹರ ಠಾಣೆಯಲ್ಲಿ ಕೇಸ್​ ದಾಖಲಾಗಿ, ಕಳೆದ ಆಗಸ್ಟ್​ 8ರಿಂದ ಈವರೆಗೂ ಬರೋಬ್ಬರಿ 51 ಆರೋಪಿಗಳು ಲಾಕ್​ ಆಗಿದ್ದರು. ಅರೆಸ್ಟ್ ಆದ ಎಲ್ಲರೂ ಬೆಳಗಾವಿ, ಕಲಬುರಗಿ ಹಾಗೂ ಗದಗ ಮೂಲದವರಾಗಿದ್ದು, ಇಲೆಕ್ಟ್ರಾನಿಕ್ ಡಿವೈಸ್ ಬಳಿಸಿ ಪರೀಕ್ಷೆ ಬರೆದಿರುವುದು ಗೊತ್ತಾಗಿತ್ತು. ಇನ್ನೂ ನಕಲು ಮಾಡಲು ಬಳಸಿದ್ದ ಡಿವೈಸ್​ಗಳನ್ನ ಪರೀಕ್ಷಾರ್ಥಿಗಳಿಂದ ಜಪ್ತಿ ಮಾಡಿಕೊಳ್ಳಲಾಗಿತ್ತು. ನಕಲು ಮಾಡಿ ಪರೀಕ್ಷೆ ಬರೆದಿದ್ದಾರೆ ಅವರನ್ನ ಬಂಧಿಸುವುದಾಗಿ ಎಸ್.ಪಿ ಡಾ.ಸಂಜೀವ್ ಪಾಟೀಲ್ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ