AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPTCL ಸಹಾಯಕ ಇಂಜಿನಿಯರ್ ನೇಮಕಾತಿ ವಿಳಂಬ, ಖನ್ನಿತೆಗೆ ಒಳಗಾಗಿ ಇಬ್ಬರು ಸಾವು, ಕಚೇರಿಗೆ ಮುತ್ತಿಗೆ ಹಾಕಿದ ಹುದ್ದೆ ಆಕಾಂಕ್ಷಿಗಳು

2021-22 ರಲ್ಲಿ ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾದರೂ ನೇಮಕಾರಿ ಪ್ರಕ್ರಿಯೆ ನಡೆದಿಲ್ಲ. ಇದರಿಂದ ಖಿನ್ನತೆಗೆ ಒಳಗಾಗಿ ಯುವಕ ಸಾವನ್ನಪ್ಪಿದ್ದು, ಇಂದು ಪರೀಕ್ಷೆ ಬರೆದ ಯುವಕ, ಯುವತಿಯರಿಂದ ಕೆಪಿಟಿಸಿಎಲ್ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಲಾಯಿತು. ಅಲ್ಲದೆ, ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

KPTCL ಸಹಾಯಕ ಇಂಜಿನಿಯರ್ ನೇಮಕಾತಿ ವಿಳಂಬ, ಖನ್ನಿತೆಗೆ ಒಳಗಾಗಿ ಇಬ್ಬರು ಸಾವು, ಕಚೇರಿಗೆ ಮುತ್ತಿಗೆ ಹಾಕಿದ ಹುದ್ದೆ ಆಕಾಂಕ್ಷಿಗಳು
ಕೆಪಿಟಿಸಿಎಲ್ ಕಚೇರಿಗೆ ಮುತ್ತಿಗೆ ಹಾಕಿದ ಸಹಾಯಕ ಇಂಜಿನಿಯರ್ ಹುದ್ದೆ ಆಕಾಂಕ್ಷಿಗಳು
Vinayak Hanamant Gurav
| Updated By: Rakesh Nayak Manchi|

Updated on:Nov 20, 2023 | 4:35 PM

Share

ಬೆಂಗಳೂರು, ನ.20: 2021-22 ರಲ್ಲಿ ಕೆಪಿಟಿಸಿಎಲ್​ (KPTCL) 1500 ಸಹಾಯಕ ಇಂಜಿನಿಯರ್ ನೇಮಕಾತಿ (Assistant Engineer Recruitment) ಪರೀಕ್ಷೆಯಲ್ಲಿ ಆಯ್ಕೆಯಾದರೂ ನೇಮಕಾರಿ ಪ್ರಕ್ರಿಯೆ ನಡೆದಿಲ್ಲ. ನೇಮಕಾತಿ ವಿಳಂಬದಿಂದಾಗಿ ಖಿನ್ನತೆಗೆ ಒಳಗಾದ ಹರ್ಷವರ್ಧನ್, ಉಮಾಪತಿ ಎಂಬ ಇಬ್ಬರು ಆಕಾಂಕ್ಷಿಗಳು ಸಾವನ್ನಪ್ಪಿದ್ದು, ಇದರಿಂದ ಕೆರಳಿದ ಪರೀಕ್ಷೆ ಬರೆದ ಯುವಕ, ಯುವತಿಯರು ಇಂದು ಕೆಪಿಟಿಸಿಎಲ್ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು. ಅಲ್ಲದೆ, ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದರು.

ಆನ್​ಲೈನ್ ಅಪ್ಲಿಕೇಶನ್ ಸಂದರ್ಭದಲ್ಲಿ ಅಭ್ಯರ್ಥಿಗಳ ಫೋಟೋ ಸಿಗ್ನೇಚರ್ ಟೆಕ್ನಿಕಲ್ ಸಮಸ್ಯೆ ಇತ್ತು. ಹೀಗಾಗಿ ನೇಮಕಾತಿ ಪ್ರಕ್ರಿಯೆ ಕೋರ್ಟ್​ನಲ್ಲಿ ಇತ್ತು. ಈಗಾಗಲೇ ಟೆಕ್ನಿಕಲ್ ಸಮಸ್ಯೆಗಳನ್ನ ಸರಿಪಡಿಸಿ ಡಿಸೆಂಬರ್ ಅಂತ್ಯದೊಳಗಡೆ ಲಿಸ್ಟ್ ಬಿಡುವಂತೆ ಕೋರ್ಟ್ ಆದೇಶ ಮಾಡಿದೆ.

ಇದನ್ನೂ ಓದಿ: ಕೆಇಎ ನೇಮಕಾತಿ ಪರೀಕ್ಷೆ ಅಕ್ರಮ: ಪ್ರಕರಣ ಕೈ ಸೇರುತ್ತಿದ್ದಂತೆ ಮೂವರನ್ನು ವಶಕ್ಕೆ ಪಡೆದ ಸಿಐಡಿ

ಕೋರ್ಟ್ ಆದೇಶ ಇದ್ದರೂ ಯಾವುದೇ ಪ್ರಕ್ರಿಯೆಗೆ ಕೆಪಿಟಿಸಿಎಲ್ ಮುಂದಾಗುತ್ತಿಲ್ಲ ಅಂತ ಕೆಪಿಟಿಸಿಎಲ್ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಕೆಪಿಟಿಸಿಎಲ್ ಎಂಡಿ ಪಂಕಜಕುಮಾರ್ ಪಾಂಡೆ ಭೇಟಿ ನೀಡಿ ಮಾತುಕತೆ ನಡೆಸಿದ್ದು, ಡಿಸಿಂಬರ್ ಅಂತ್ಯದೊಳಗೆ ಭರ್ತಿ ಪ್ರಕ್ರಿಯೆ ಮುಗಿಸುವುದಾಗಿ ಭರವಸೆ ನೀಡಿದರು.

ಸದ್ಯ, ಪ್ರತಿಭಟನಾ ನಿರತ ಅಭ್ಯರ್ಥಿಗಳು ಪ್ರತಿಭಟನೆ ಹಿಂಪಡೆದಿದ್ದಾರೆ. ಡಿಸೆಂಬರ್ ಅಂತ್ಯದೊಳಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ 2024ರ ಫೆಬ್ರವರಿ 15 ರಂದು ಆಯ್ಕೆ ಮಾಡುವುದಾಗಿ ಭರವಸೆ ನೀಡಿದ್ದು, ಒಂದು ವೇಳೆ ಹೇಳಿದ ಹಾಗೆ ಕೆಪಿಟಿಸಿಎಲ್ ಮಾಡದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Mon, 20 November 23

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು