AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ಲೂಟಿ ವ್ಯವಹಾರ ಬಯಲು’: ಕಮಿಷನ್ ಸರ್ಕಾರಕ್ಕೆ ಲಂಚದ ಬಗ್ಗೆ ಮಾತನಾಡೋ ನೈತಿಕತೆ ಇಲ್ಲವೆಂದ ಅಶೋಕ್

ಮಂಗಳೂರು KRIDL ವಿಭಾಗದಲ್ಲಿ ಸಚಿವರ ಹೆಸರಿನಲ್ಲಿ ಶೇ 7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಅಶೋಕ್ ರೈ ಆರೋಪಿಸಿ ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರವನ್ನೇ ಇಟ್ಟುಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಆರೋಪದ ಕುರಿತ ತನಿಖೆಗೆ ಆಗ್ರಹಿಸಿದ್ದಾರೆ.

‘ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ಲೂಟಿ ವ್ಯವಹಾರ ಬಯಲು’: ಕಮಿಷನ್ ಸರ್ಕಾರಕ್ಕೆ ಲಂಚದ ಬಗ್ಗೆ ಮಾತನಾಡೋ ನೈತಿಕತೆ ಇಲ್ಲವೆಂದ ಅಶೋಕ್
ಆರ್. ಅಶೋಕ್Image Credit source: PTI
ಅನಿಲ್​ ಕಲ್ಕೆರೆ
| Edited By: |

Updated on: Aug 31, 2026 | 1:39 PM

Share

ಮುಖ್ಯಾಂಶಗಳು

  • ಕಾಂಗ್ರೆಸ್ ಶಾಸಕರ ಆರೋಪಕ್ಕೆ ಆರ್ ಅಶೋಕ್ ತಿರುಗೇಟು
  • KRIDLನಲ್ಲಿ ಶೇ 7 ಕಮಿಷನ್ ವಸೂಲಿ ಆರೋಪ
  • ಸಚಿವರ ಪಾತ್ರ ತನಿಖೆಗೆ ಪ್ರತಿಪಕ್ಷ ನಾಯಕ ಆಗ್ರಹ

ಬೆಂಗಳೂರು, ಆಗಸ್ಟ್ 31: ಮಂಗಳೂರು ಕೆಆರ್‌ಐಡಿಎಲ್‌ (KRIDL) ವಿಭಾಗದ ಎಂಜಿನಿಯರ್‌ಗಳು ಉಸ್ತುವಾರಿ ಸಚಿವರು ಹಾಗೂ ಇಲಾಖೆ ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ 7ರಷ್ಟು ‘ಶುಲ್ಕ’ ವಸೂಲಿ ಮಾಡುತ್ತಿದ್ದಾರೆ ಎಂಬ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರ ಆರೋಪ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashoka) ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಲಿಖಿತ ದೂರು ನೀಡಿದ್ದರು. ಮಂಗಳೂರು ಕೆಆರ್‌ಐಡಿಎಲ್ ವಿಭಾಗದಲ್ಲಿ ಕಾಮಗಾರಿ ನಡೆಸುವ ಗುತ್ತಿಗೆದಾರರ ಮೇಲೆ ಒತ್ತಡ ಹೇರಿ, ಸಚಿವರ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ಈ ವಿಚಾರವನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರಸ್ತಾಪಿಸಿರುವ ಆರ್. ಅಶೋಕ್, ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದಾಗ ಅದನ್ನು ರಾಜಕೀಯ ಎಂದು ಹೇಳಲಾಗುತ್ತಿತ್ತು. ಆದರೆ, ಇದೀಗ ಆಡಳಿತಾರೂಢ ಕಾಂಗ್ರೆಸ್‌ನ ಶಾಸಕರೇ ಸರ್ಕಾರದ ವ್ಯವಸ್ಥೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಅಧಿಕಾರಿಗಳು ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರನ್ನು ಬಳಸಿಕೊಂಡು ಶೇ 7ರಷ್ಟು ‘ಪರ್ಸಂಟೇಜ್’ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಈ ಆರೋಪದ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.

‘ಕಮಿಷನ್ ದಂಧೆ’ ತನಿಖೆಗೆ ಆರ್. ಅಶೋಕ್ ಆಗ್ರಹ

ಕೆಆರ್‌ಐಡಿಎಲ್‌ನಲ್ಲಿ ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆರ್. ಅಶೋಕ್ ಒತ್ತಾಯಿಸಿದ್ದಾರೆ. ಅಲ್ಲದೆ, ಸಚಿವರ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಇರುವುದರಿಂದ ಸಂಬಂಧಪಟ್ಟ ಇಲಾಖೆ ಸಚಿವರು ಹಾಗೂ ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರದ ಬಗ್ಗೆಯೂ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಆರ್ ಅಶೋಕ್ ಎಕ್ಸ್ ಸಂದೇಶ

ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಕಮಿಷನ್ ದಂಧೆಗೆ ಬಲಿಯಾಗುತ್ತಿವೆ ಎಂದು ಆರೋಪಿಸಿರುವ ಆರ್. ಅಶೋಕ್, ಇದರಿಂದ ಕಳಪೆ ಕಾಮಗಾರಿಗಳಿಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ. ತಮ್ಮದೇ ಪಕ್ಷದ ಶಾಸಕ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಆರೋಪಿಸಿರುವಾಗಲೂ ಸರ್ಕಾರ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ