Karnataka Dam Water Level: ಫೆ.09ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Feb 09, 2024 | 7:11 AM

ಕರ್ನಾಟಕದ ಜಲಾಶಯಗಳ ಫೆಬ್ರವರಿ 09ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಫೆ.09ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಡ್ಯಾಂ
Follow us on

ಬೆಂಗಳೂರು, ಫೆ.09: ರಾಜ್ಯಾದ್ಯಂತ ಮುಂದಿನ 48 ಗಂಟೆಗಳು ಒಣಹವೆ ಬೀಸಲಿದೆ. ಭಾರಿ ಮಳೆ ಮತ್ತು ಗುಡುಗು ಮುನ್ನೆಚ್ಚರಿಕೆ ಇಲ್ಲ. ಮುಂದಿನ 48 ಗಂಟೆಗಳು ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಕೆರೆ, ಹಳ್ಳ ಮತ್ತು ನದಿಗಳು ಬರಿದಾಗುತ್ತಿವೆ. ಜಲಾಯಶಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಫೆಬ್ರವರಿ 09ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 51.34 68.05 0 1260
ತುಂಗಭದ್ರಾ ಜಲಾಶಯ (Tungabhadra Dam) 497.71 105.79 9.48 45.43 0 269
ಮಲಪ್ರಭಾ ಜಲಾಶಯ (Malaprabha Dam) 633.80 37.73 12.77 18.87 0 194
ಕೆ.ಆರ್.ಎಸ್ (KRS Dam) 38.04 49.45 16.98 34.53 329 819
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 45.59 80.11 0 3064
ಕಬಿನಿ ಜಲಾಶಯ (Kabini Dam) 696.13 19.52 12.65 12.21 78 900
ಭದ್ರಾ ಜಲಾಶಯ (Bhadra Dam) 657.73 71.54 31.65 12.21 78 900
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.62 27.46 0 126
ಹೇಮಾವತಿ ಜಲಾಶಯ (Hemavathi Dam) 890.58 37.10 14.66 22.18 102 1030
ವರಾಹಿ ಜಲಾಶಯ (Varahi Dam) 594.36 31.10 8.80 12.09 0 572
ಹಾರಂಗಿ ಜಲಾಶಯ (Harangi Dam)​​ 871.38 8.50 3.42 3.29 212 200
ಸೂಫಾ (Supa Dam) 564.00 145.33 63.20 81.56 224 3505

ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವಯ ಕಡೆಗಳಲ್ಲಿ ಬೆಳಗಿನ ಜಾವ ಮುಂಜು/ ದಟ್ಟನೆಯ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್​ ಇರುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ