AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: 100 ಅಡಿ ಭರ್ತಿಯಾದ‌ ಕೆ.ಆರ್.ಎಸ್ ಜಲಾಶಯ!

ಕರ್ನಾಟಕದ ಜಲಾಶಯಗಳ (ಆ.03) ನೀರಿನ ಮಟ್ಟ: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಂಡ್ಯದ ಕೆ.ಆರ್.ಎಸ್ ಜಲಾಶಯದ ನೀರಿನ ಮಟ್ಟ 100 ಅಡಿ ದಾಟಿದೆ. ಪ್ರಸ್ತುತ ಡ್ಯಾಂಗೆ 32,048 ಕ್ಯೂಸೆಕ್ ಒಳಹರಿವು ಹರಿದುಬರುತ್ತಿದ್ದು, ಸಂಗ್ರಹ 23 ಟಿಎಂಸಿ ತಲುಪಿದೆ. ಮುಂದಿನ 10-15 ದಿನಗಳಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆಯಿದ್ದು, ಕಾವೇರಿ ಕೊಳ್ಳದ ರೈತರು ಹಾಗೂ ಮೈಸೂರು-ಬೆಂಗಳೂರು ಜನರಲ್ಲಿ ಸಂತಸ ಮೂಡಿದೆ.

Karnataka Dam Water Level: 100 ಅಡಿ ಭರ್ತಿಯಾದ‌ ಕೆ.ಆರ್.ಎಸ್ ಜಲಾಶಯ!
ಕೆ.ಆರ್​.ಎಸ್ ಜಲಾಶಯ
ಭಾವನಾ ಹೆಗಡೆ
|

Updated on:Aug 03, 2026 | 8:33 AM

Share

ಮುಖ್ಯಾಂಶಗಳು

  • ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರಬಲ ಮಳೆ, 100 ಅಡಿ ತಲುಪಿದ ಕೆಆರ್‌ಎಸ್.
  • ಮೂರು ದಿನದಲ್ಲಿ 8 ಅಡಿ ಏರಿಕೆ, ಜಲಾಶಯದಲ್ಲಿ 23 ಟಿಎಂಸಿ ನೀರು ಸಂಗ್ರಹ.
  • ಜಲಾಶಯಕ್ಕೆ ಭಾರಿ ಒಳಹರಿವು, ಇನ್ನು ಹದಿನೈದು ದಿನಗಳಲ್ಲಿ ಕೆಆರ್‌ಎಸ್ ಸಂಪೂರ್ಣ ಭರ್ತಿ.

ಬೆಂಗಳೂರು, ಆಗಸ್ಟ್ 03: ಕಾವೇರಿ ಹಾಗೂ ಮಲೆನಾಡು ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಪ್ರಬಲ ಮುಂಗಾರು ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ಹರಿದುಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕಾವೇರಿ ನಾಡಿನ ಜೀವನಾಡಿ ಕೃಷ್ಣರಾಜಸಾಗರ (ಕೆ.ಆರ್.ಎಸ್) ಜಲಾಶಯದ ನೀರಿನ ಮಟ್ಟ 100 ಅಡಿಯ ಗಡಿ ದಾಟುವ ಮೂಲಕ ಶತಕದ ಸನಿಹಕ್ಕೆ ತಲುಪಿ ಭರ್ತಿಯಾಗುವತ್ತ ಸಾಗಿದೆ.

1. ಕೆ.ಆರ್.ಎಸ್. ಜಲಾಶಯ (ಮಂಡ್ಯ)

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ಮಟ್ಟ: 100.34 ಅಡಿ
  • ಒಳಹರಿವು: 32,048 ಕ್ಯೂಸೆಕ್
  • ಹೊರಹರಿವು: 1,821 ಕ್ಯೂಸೆಕ್
  • ಗರಿಷ್ಠ ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಸಂಗ್ರಹ: 23.079 ಟಿಎಂಸಿ

ಕೇವಲ ಮೂರು ದಿನಗಳ ಅಂತರದಲ್ಲೇ ಕೆ.ಆರ್.ಎಸ್ ಜಲಾಶಯದ ನೀರಿನ ಮಟ್ಟದಲ್ಲಿ ಬರೋಬ್ಬರಿ 8 ಅಡಿ ಏರಿಕೆ ಕಂಡುಬಂದಿದ್ದು, ಪ್ರಸ್ತುತ 23 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ಮುಂದುವರಿದಿದ್ದು, ಇದೇ ವೇಗದಲ್ಲಿ ಇನ್ನು 10 ರಿಂದ 15 ದಿನಗಳ ಕಾಲ ನೀರು ಹರಿದುಬಂದರೆ ಕೆ.ಆರ್.ಎಸ್ ಸಂಪೂರ್ಣ ಭರ್ತಿಯಾಗುವ ನಿರೀಕ್ಷೆಯಿದೆ.

2. ಹೇಮಾವತಿ ಜಲಾಶಯ (ಗೊರೂರು, ಹಾಸನ)

  • ಗರಿಷ್ಠ ಮಟ್ಟ: 2922.00 ಅಡಿ (37 ಟಿಎಂಸಿ)
  • ಇಂದಿನ ಮಟ್ಟ: 2911.75 ಅಡಿ (28.022 ಟಿಎಂಸಿ)
  • ಒಳಹರಿವು: 12,859 ಕ್ಯೂಸೆಕ್
  • ಹೊರಹರಿವು: 500 ಕ್ಯೂಸೆಕ್ (ಕಾಲುವೆಗೆ: 000 ಕ್ಯೂಸೆಕ್)

ಹಾಸನ ತಾಲೂಕಿನ ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲೂ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಳೆದ ವರ್ಷ ಇದೇ ದಿನ 2921.40 ಅಡಿ (36.523 ಟಿಎಂಸಿ) ನೀರಿತ್ತು. ಆಗ 5,252 ಕ್ಯೂಸೆಕ್ ಒಳಹರಿವು, ನದಿಗೆ 2,400 ಕ್ಯೂಸೆಕ್ ಹಾಗೂ ಕಾಲುವೆಗೆ 4,300 ಕ್ಯೂಸೆಕ್ ಹೊರಹರಿವು ಇತ್ತು.

3. ತುಂಗಭದ್ರಾ ಜಲಾಶಯ (ಮುನಿರಾಬಾದ್, ಕೊಪ್ಪಳ)

  • ಗರಿಷ್ಠ ಸಂಗ್ರಹ ಸಾಮರ್ಥ್ಯ: 105 ಟಿಎಂಸಿ
  • ಇಂದಿನ ಸಂಗ್ರಹ: 44 ಟಿಎಂಸಿ (ನಿನ್ನೆ 40 ಟಿಎಂಸಿ ಇತ್ತು – ಒಂದೇ ದಿನದಲ್ಲಿ 4 ಟಿಎಂಸಿ ನೀರು ಸಂಗ್ರಹ)
  • ಒಳಹರಿವು: 30,000ಕ್ಕೂ ಹೆಚ್ಚು ಕ್ಯೂಸೆಕ್

ಮಲೆನಾಡು ಭಾಗದಲ್ಲಿ ಆರ್ಭಟಿಸುತ್ತಿರುವ ಮಳೆಯಿಂದಾಗಿ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಹರಿದುಬರುವ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದೆ. ಒಂದೇ ದಿನದಲ್ಲಿ ಜಲಾಶಯದಲ್ಲಿ 4 ಟಿಎಂಸಿ ನೀರು ಸಂಗ್ರಹಗೊಂಡಿದ್ದು, ಕೊಪ್ಪಳ ಸೇರಿದಂತೆ ನಾಲ್ಕು ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:28 am, Mon, 3 August 26

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ