AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಅಡಿಗೆ ಕುಸಿದ ಕೆಆರ್​​ಎಸ್​​ ನೀರಿನ ಮಟ್ಟ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನಿ ಸ್ಥಿತಿಗತಿ ಇಲ್ಲಿದೆ

ಮಳೆಯಿಲ್ಲದ ನಡುವೆಯೂ ತಮಿಳುನಾಡಿಗೆ ನೀರು ಹರಿಸುತ್ತಿರುವ ಕಾರಣ ಮಂಡ್ಯದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 100 ಅಡಿಗೆ ಕುಸಿದಿದ್ದು, ನೀರಿನ ತೀವ್ರ ಅಭಾವದ ಆತಂಕ ಸೃಷ್ಟಿಯಾಗಿದೆ. ಉಳಿದಂತೆ ರಾಜ್ಯದ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹದ ಇತ್ತೀಚಿನ ಸ್ಥಿತಿಗತಿ ಕುರಿತು ಅಂಕಿ-ಅಂಶ ಸಮೇತ ಸಂಪೂರ್ಣ ಮಾಹಿತಿ ಇಲ್ಲಿದೆ.

100 ಅಡಿಗೆ ಕುಸಿದ ಕೆಆರ್​​ಎಸ್​​ ನೀರಿನ ಮಟ್ಟ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನಿ ಸ್ಥಿತಿಗತಿ ಇಲ್ಲಿದೆ
ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನಿ ಸ್ಥಿತಿಗತಿImage Credit source: PTI
ಪ್ರಸನ್ನ ಹೆಗಡೆ
|

Updated on:Oct 14, 2026 | 1:11 PM

Share

ಬೆಂಗಳೂರು, ಅಕ್ಟೋಬರ್​​ 14: ಮಳೆಯಿಲ್ಲಿದ ಕಾರಣ ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸವಾಲಿನ ನಡುವೆ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​​ ಜಲಾಶಯದ ನೀರಿನ ಮಟ್ಟ 100 ಅಡಿಗೆ ಕುಸಿದಿದೆ. ಜಲಾಶಯದ ಪ್ರಸ್ತುತ ನೀರಿನ ಮಟ್ಟ 100.88 ಅಡಿಯಷ್ಟಿದ್ದು, ಡ್ಯಾಂನ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿವೆ. ಸದ್ಯ ಜಲಾಶಯದಲ್ಲಿ ಇರುವ ನೀರು ಕೇವಲ 23.507 ಟಿಎಂಸಿ ಮಾತ್ರವಾಗಿದ್ದು, ಅಣೆಕಟ್ಟೆಗ 574 ಕ್ಯೂಸೆಕ್ ಒಳಹರಿವು ಮತ್ತು 2658 ಕ್ಯೂಸೆಕ್ ಹೊರಹರಿವನ್ನು ಹೊಂದಿದೆ. ತಮಿಳುನಾಡಿಗೆ ‌ನಿರಂತರವಾಗಿ ನೀರು ಹರಿಸುತ್ತಿರುವ ಕಾರಣ ಜಲಾಶಯದಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕಬಿನಿ ಜಲಾಶಯ

ಗರಿಷ್ಠ 19.52 ಟಿಎಂಸಿ ಸಾಮರ್ಥ್ಯ ಹೊಂದಿರುವ ಮೈಸೂರು ಜಿಲ್ಲೆಯ ಹೆಗ್ಗಡೆದೇವನಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯದಲ್ಲಿ ಸದ್ಯ 10.60 ಟಿಎಂಸಿ ನೀರು ಸಂಗ್ರಹವಿದೆ. ಆದರೆ ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ ಕೇವಲ 0.79 ಟಿಎಂಸಿಯಾಗಿದೆ. ಡ್ಯಾಂ 626 ಕ್ಯೂಸೆಕ್ ಒಳಹರಿವು ಮತ್ತು 500 ಕ್ಯೂಸೆಕ್​​ ಹೊರಹರಿವನ್ನು ಹೊಂದಿದೆ.’

LIVE TV

ಇದನ್ನೂ ಓದಿ: ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿತ, ಒಳಹರಿವು ಸ್ಥಗಿತ: ಭತ್ತ ಬೆಳೆ ಕೈ ತಪ್ಪುವ ಆತಂಕದಲ್ಲಿ 4 ಜಿಲ್ಲೆಗಳ ರೈತರು

ಆಲಮಟ್ಟಿ ಡ್ಯಾಂ

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂನಲ್ಲಿ ಇಂದು 517.77 ಮೀಟರ್ ನೀರಿನ ಸಂಗ್ರಹವಿದ್ದು, ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್ ಆಗಿದೆ. ಡ್ಯಾಂಗೆ ಒಳಹರಿವು ಶೂನ್ಯವಾಗಿದ್ದರೆ, ಹೊರ ಹರಿವು 12,847 ಕ್ಯೂಸೆಕ್​​ನಷ್ಟಿದೆ.

ತುಂಗಭದ್ರಾ ಅಣೆಕಟ್ಟೆ

105.788 ಟಿಎಂಸಿ ಸಾಮರ್ಥ್ಯ ಹೊಂದಿರುವ ವಿಜಯನಗರ ಜಿಲ್ಲೆಯ ಹೊಸಪೇಟೆ ಸಮೀಪ ತುಂಗಭದ್ರಾ ಜಲಾಶಯದಲ್ಲಿ ಸದ್ಯ 58.901 ಟಿಎಂಸಿ ನೀರಿದೆ. ಜಲಾಶಯದ ಒಳಹರಿವು ಶೂನ್ಯವಾಗಿದ್ದರೆ, 11,850 ಕ್ಯೂಸೆಕ್​​ ಹೊರ ಹರಿವನ್ನು ಡ್ಯಾಂ ಹೊಂದಿದೆ.

ಹೇಮಾವತಿ ಜಲಾಶಯ

ಹಾಸನ ಜಿಲ್ಲೆಯ ಗೊರೂರು ಗ್ರಾಮದಲ್ಲಿರುವ ಹೇಮಾವತಿ ಜಲಾಶಯದಲ್ಲಿ ಹಾಲಿ 15.605 ಟಿಎಂಸಿ ನೀರಿದ್ದು, ಡ್ಯಾಂನ ಸಾಮರ್ಥ್ಯ 37.103 ಟಿಎಂಸಿಯಾಗಿದೆ. 867 ಕ್ಯೂಸೆಕ್​​ ಒಳಹರಿವು ಮತ್ತು 300 ಕ್ಯೂಸೆಕ್​​ಗಳಾಗಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:07 pm, Wed, 14 October 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಬಳಿ ಭಾರೀ ಅವಘಡ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಬಳಿ ಭಾರೀ ಅವಘಡ
ನಿರ್ಬಂಧದ ನಡುವೆಯೂ ದಸರಾ ಆನೆಗಳ ಜೊತೆ ಶಾಸಕರ ಮಕ್ಕಳ ವಿಶೇಷ ಫೋಟೋಶೂಟ್!
ನಿರ್ಬಂಧದ ನಡುವೆಯೂ ದಸರಾ ಆನೆಗಳ ಜೊತೆ ಶಾಸಕರ ಮಕ್ಕಳ ವಿಶೇಷ ಫೋಟೋಶೂಟ್!
ಬಿಗ್ ಬಾಸ್ ಮನೆಯಲ್ಲಿ ಟಫ್ ಟಾಸ್ಕ್; ಹೈರಾಣಾದ ಸ್ಪರ್ಧಿಗಳು
ಬಿಗ್ ಬಾಸ್ ಮನೆಯಲ್ಲಿ ಟಫ್ ಟಾಸ್ಕ್; ಹೈರಾಣಾದ ಸ್ಪರ್ಧಿಗಳು
ದೇವನಹಳ್ಳಿ ಬಳಿ ಕಾರಿಗೆ ಲಾರಿ ಡಿಕ್ಕಿ; ಬಿಜೆಪಿ ಮುಖಂಡ ಶಿವಕುಮಾರ್ ಸಾವು!
ದೇವನಹಳ್ಳಿ ಬಳಿ ಕಾರಿಗೆ ಲಾರಿ ಡಿಕ್ಕಿ; ಬಿಜೆಪಿ ಮುಖಂಡ ಶಿವಕುಮಾರ್ ಸಾವು!
ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಊಟ-ನಿದ್ದೆ!
ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ: ಹೆದ್ದಾರಿಯಲ್ಲೇ ಊಟ-ನಿದ್ದೆ!
ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ
ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ