
ಬೆಂಗಳೂರು, ಅಕ್ಟೋಬರ್ 14: ಮಳೆಯಿಲ್ಲಿದ ಕಾರಣ ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸವಾಲಿನ ನಡುವೆ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 100 ಅಡಿಗೆ ಕುಸಿದಿದೆ. ಜಲಾಶಯದ ಪ್ರಸ್ತುತ ನೀರಿನ ಮಟ್ಟ 100.88 ಅಡಿಯಷ್ಟಿದ್ದು, ಡ್ಯಾಂನ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿವೆ. ಸದ್ಯ ಜಲಾಶಯದಲ್ಲಿ ಇರುವ ನೀರು ಕೇವಲ 23.507 ಟಿಎಂಸಿ ಮಾತ್ರವಾಗಿದ್ದು, ಅಣೆಕಟ್ಟೆಗ 574 ಕ್ಯೂಸೆಕ್ ಒಳಹರಿವು ಮತ್ತು 2658 ಕ್ಯೂಸೆಕ್ ಹೊರಹರಿವನ್ನು ಹೊಂದಿದೆ. ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿರುವ ಕಾರಣ ಜಲಾಶಯದಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಗರಿಷ್ಠ 19.52 ಟಿಎಂಸಿ ಸಾಮರ್ಥ್ಯ ಹೊಂದಿರುವ ಮೈಸೂರು ಜಿಲ್ಲೆಯ ಹೆಗ್ಗಡೆದೇವನಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯದಲ್ಲಿ ಸದ್ಯ 10.60 ಟಿಎಂಸಿ ನೀರು ಸಂಗ್ರಹವಿದೆ. ಆದರೆ ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ ಕೇವಲ 0.79 ಟಿಎಂಸಿಯಾಗಿದೆ. ಡ್ಯಾಂ 626 ಕ್ಯೂಸೆಕ್ ಒಳಹರಿವು ಮತ್ತು 500 ಕ್ಯೂಸೆಕ್ ಹೊರಹರಿವನ್ನು ಹೊಂದಿದೆ.’
ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂನಲ್ಲಿ ಇಂದು 517.77 ಮೀಟರ್ ನೀರಿನ ಸಂಗ್ರಹವಿದ್ದು, ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್ ಆಗಿದೆ. ಡ್ಯಾಂಗೆ ಒಳಹರಿವು ಶೂನ್ಯವಾಗಿದ್ದರೆ, ಹೊರ ಹರಿವು 12,847 ಕ್ಯೂಸೆಕ್ನಷ್ಟಿದೆ.
105.788 ಟಿಎಂಸಿ ಸಾಮರ್ಥ್ಯ ಹೊಂದಿರುವ ವಿಜಯನಗರ ಜಿಲ್ಲೆಯ ಹೊಸಪೇಟೆ ಸಮೀಪ ತುಂಗಭದ್ರಾ ಜಲಾಶಯದಲ್ಲಿ ಸದ್ಯ 58.901 ಟಿಎಂಸಿ ನೀರಿದೆ. ಜಲಾಶಯದ ಒಳಹರಿವು ಶೂನ್ಯವಾಗಿದ್ದರೆ, 11,850 ಕ್ಯೂಸೆಕ್ ಹೊರ ಹರಿವನ್ನು ಡ್ಯಾಂ ಹೊಂದಿದೆ.
ಹಾಸನ ಜಿಲ್ಲೆಯ ಗೊರೂರು ಗ್ರಾಮದಲ್ಲಿರುವ ಹೇಮಾವತಿ ಜಲಾಶಯದಲ್ಲಿ ಹಾಲಿ 15.605 ಟಿಎಂಸಿ ನೀರಿದ್ದು, ಡ್ಯಾಂನ ಸಾಮರ್ಥ್ಯ 37.103 ಟಿಎಂಸಿಯಾಗಿದೆ. 867 ಕ್ಯೂಸೆಕ್ ಒಳಹರಿವು ಮತ್ತು 300 ಕ್ಯೂಸೆಕ್ಗಳಾಗಿವೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:07 pm, Wed, 14 October 26