AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಮತ್ತೆ 100 ಅಡಿಗೆ ಕುಸಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ! ಬೆಂಗಳೂರಿಗರಿಗೆ ಎದುರಾಗಲಿದ್ಯಾ ಸಮಸ್ಯೆ?

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ ಕಂಡಿದ್ದು, ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ ಮತ್ತೆ 100 ಅಡಿಗೆ ಇಳಿಕೆಯಾಗಿದೆ. ತಮಿಳುನಾಡಿಗೆ ನಿರಂತರ ನೀರು ಹರಿವು ಹಾಗೂ ಒಳಹರಿವಿನ ಅಭಾವದಿಂದ ರಾಜಧಾನಿ ಬೆಂಗಳೂರಿಗರಿಗೆ ಕುಡಿಯುವ ನೀರಿನ ತೊಂದರೆ ಎದುರಾಗುವ ಭೀತಿ ಎದುರಾಗಿದೆ. ಇತ್ತ ಆಲಮಟ್ಟಿ ಹಾಗೂ ತುಂಗಭದ್ರಾ ಜಲಾಶಯಗಳಲ್ಲೂ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿದ್ದು, ಕೃಷಿ ಮತ್ತು ಕುಡಿಯುವ ನೀರಿಗೆ ಕಂಟಕ ಎದುರಾಗಿದೆ.

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಮತ್ತೆ 100 ಅಡಿಗೆ ಕುಸಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ! ಬೆಂಗಳೂರಿಗರಿಗೆ ಎದುರಾಗಲಿದ್ಯಾ ಸಮಸ್ಯೆ?
ಮತ್ತೆ 100 ಅಡಿಗೆ ಕುಸಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ!
ಭಾವನಾ ಹೆಗಡೆ
|

Updated on: Nov 04, 2026 | 11:57 AM

Share

ಮುಖ್ಯಾಂಶಗಳು

  • ಮತ್ತೆ ನೂರು ಅಡಿಗೆ ಕುಸಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ.
  • ಬೆಂಗಳೂರಿನ ಕೋಟ್ಯಂತರ ಜನರಿಗೆ ಕುಡಿಯುವ ನೀರಿನ ಅಭಾವದ ಆತಂಕ.
  • ಆಲಮಟ್ಟಿ ಮತ್ತು ತುಂಗಭದ್ರಾ ಜಲಾಶಯಗಳಲ್ಲೂ ಒಳಹರಿವು ಸಂಪೂರ್ಣವಾಗಿ ಸ್ಥಗಿತ.

ಬೆಂಗಳೂರು, ನವೆಂಬರ್ 04: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು, ಕಾವೇರಿ ಕೊಳ್ಳದ ಜೀವನಾಡಿ ಕೃಷ್ಣರಾಜ ಸಾಗರ ಡ್ಯಾಂ ಮಟ್ಟ ಮತ್ತೆ 100 ಅಡಿಗೆ ತಲುಪಿದೆ. ತಮಿಳುನಾಡಿಗೆ ನಿರಂತರ ನೀರು ಹರಿವು ಹಾಗೂ ಒಳಹರಿವಿನ ಕೊರತೆಯೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಈ ದಿಢೀರ್ ಕುಸಿತದಿಂದ ಬೆಂಗಳೂರಿನ ಕೋಟ್ಯಂತರ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾಗಲಿದೆ. BWSSB ಕಾವೇರಿ ನೀರು ಪೂರೈಕೆಯಲ್ಲಿ ಕಡಿತ ಅಥವಾ ರೇಷನಿಂಗ್ ಜಾರಿಗೆ ತರುವ ಸಾಧ್ಯತೆಯಿದೆ. ಅಂತರ್ಜಲ ಕುಸಿದು ಬೋರ್‌ವೆಲ್‌ಗಳಲ್ಲಿಯೂ ನೀರಿಲ್ಲದಾಗಿದ್ದು, ಖಾಸಗಿ ವಾಟರ್ ಟ್ಯಾಂಕರ್‌ಗಳ ದರ ಹೆಚ್ಚಳದಿಂದ ಸಾರ್ವಜನಿಕರು ಹಾಗೂ ಅಪಾರ್ಟ್‌ಮೆಂಟ್ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ತಮಿಳುನಾಡಿಗೆ ನೀರು ಹರಿವು, ಕುಸಿದ ಕೆಆರ್‌ಎಸ್ ಮಟ್ಟ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯಕ್ಕೆ ಸದ್ಯ 548 ಕ್ಯೂಸೆಕ್ ಮಾತ್ರ ಒಳಹರಿವು ದಾಖಲಾಗುತ್ತಿದೆ. ಆದರೆ ಜಲಾಶಯದಿಂದ 7,871 ಕ್ಯೂಸೆಕ್ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ಸಮಯದಲ್ಲಿ 124.80 ಅಡಿ ನೀರಿತ್ತು. ಒಂದು ವಾರದ ಹಿಂದೆಯಷ್ಟೇ 104 ಅಡಿಯಷ್ಟಿದ್ದ ನೀರಿನ ಮಟ್ಟ, ಇದೀಗ 100.12 ಅಡಿಗೆ ತಲುಪಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯದಲ್ಲಿ ಪ್ರಸ್ತುತ 22.904 ಟಿಎಮ್‌ಸಿ ನೀರು ಮಾತ್ರ ಸಂಗ್ರಹವಾಗಿದೆ.

ಆಲಮಟ್ಟಿ ಜಲಾಶಯಕ್ಕೆ ಇಲ್ಲ ಒಳಹರಿವು

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಜಲಾಶಯದಲ್ಲೂ ನೀರಿನ ಮಟ್ಟ ತಗ್ಗಿದೆ.

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ಮಟ್ಟ: 515.45 ಮೀಟರ್
  • ಒಳಹರಿವು: ಸಂಪೂರ್ಣ ಶೂನ್ಯ (ಇಲ್ಲ)
  • ಹೊರಹರಿವು: 27,124 ಕ್ಯೂಸೆಕ್

ತುಂಗಭದ್ರಾ ಜಲಾಶಯದ ಇಂದಿನ ವರದಿ

ವಿಜಯನಗರ ಜಿಲ್ಲೆಯ ಕೊಪ್ಪಳ-ಹೊಸಪೇಟೆ ಗಡಿಯಲ್ಲಿರುವ ತುಂಗಭದ್ರಾ ಜಲಾಶಯದಲ್ಲೂ ಒಳಹರಿವು ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

  • ಗರಿಷ್ಠ ಮಟ್ಟ: 1,633.00 ಅಡಿ
  • ಇಂದಿನ ಮಟ್ಟ: 1,610.58 ಅಡಿ
  • ಒಟ್ಟು ಸಂಗ್ರಹ ಸಾಮರ್ಥ್ಯ: 105.78 TMC
  • ಪ್ರಸ್ತುತ ನೀರು ಸಂಗ್ರಹ: 38.74 TMC
  • ಒಳಹರಿವು: ಶೂನ್ಯ (Nil)
  • ಹೊರಹರಿವು (ಕಾಲುವೆಗೆ): 9,041 ಕ್ಯೂಸೆಕ್

ಕಳೆದ ವರ್ಷ ಇದೇ ದಿನ ತುಂಗಭದ್ರಾ ಜಲಾಶಯದ ಮಟ್ಟ 1,626.04 ಅಡಿ ಇತ್ತು ಹಾಗೂ 79.93 TMC ನೀರು ಸಂಗ್ರಹವಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ