
ಬೆಂಗಳೂರು, ನವೆಂಬರ್ 04: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು, ಕಾವೇರಿ ಕೊಳ್ಳದ ಜೀವನಾಡಿ ಕೃಷ್ಣರಾಜ ಸಾಗರ ಡ್ಯಾಂ ಮಟ್ಟ ಮತ್ತೆ 100 ಅಡಿಗೆ ತಲುಪಿದೆ. ತಮಿಳುನಾಡಿಗೆ ನಿರಂತರ ನೀರು ಹರಿವು ಹಾಗೂ ಒಳಹರಿವಿನ ಕೊರತೆಯೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಈ ದಿಢೀರ್ ಕುಸಿತದಿಂದ ಬೆಂಗಳೂರಿನ ಕೋಟ್ಯಂತರ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾಗಲಿದೆ. BWSSB ಕಾವೇರಿ ನೀರು ಪೂರೈಕೆಯಲ್ಲಿ ಕಡಿತ ಅಥವಾ ರೇಷನಿಂಗ್ ಜಾರಿಗೆ ತರುವ ಸಾಧ್ಯತೆಯಿದೆ. ಅಂತರ್ಜಲ ಕುಸಿದು ಬೋರ್‌ವೆಲ್‌ಗಳಲ್ಲಿಯೂ ನೀರಿಲ್ಲದಾಗಿದ್ದು, ಖಾಸಗಿ ವಾಟರ್ ಟ್ಯಾಂಕರ್‌ಗಳ ದರ ಹೆಚ್ಚಳದಿಂದ ಸಾರ್ವಜನಿಕರು ಹಾಗೂ ಅಪಾರ್ಟ್‌ಮೆಂಟ್ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯಕ್ಕೆ ಸದ್ಯ 548 ಕ್ಯೂಸೆಕ್ ಮಾತ್ರ ಒಳಹರಿವು ದಾಖಲಾಗುತ್ತಿದೆ. ಆದರೆ ಜಲಾಶಯದಿಂದ 7,871 ಕ್ಯೂಸೆಕ್ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ಸಮಯದಲ್ಲಿ 124.80 ಅಡಿ ನೀರಿತ್ತು. ಒಂದು ವಾರದ ಹಿಂದೆಯಷ್ಟೇ 104 ಅಡಿಯಷ್ಟಿದ್ದ ನೀರಿನ ಮಟ್ಟ, ಇದೀಗ 100.12 ಅಡಿಗೆ ತಲುಪಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯದಲ್ಲಿ ಪ್ರಸ್ತುತ 22.904 ಟಿಎಮ್‌ಸಿ ನೀರು ಮಾತ್ರ ಸಂಗ್ರಹವಾಗಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಜಲಾಶಯದಲ್ಲೂ ನೀರಿನ ಮಟ್ಟ ತಗ್ಗಿದೆ.
ವಿಜಯನಗರ ಜಿಲ್ಲೆಯ ಕೊಪ್ಪಳ-ಹೊಸಪೇಟೆ ಗಡಿಯಲ್ಲಿರುವ ತುಂಗಭದ್ರಾ ಜಲಾಶಯದಲ್ಲೂ ಒಳಹರಿವು ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಕಳೆದ ವರ್ಷ ಇದೇ ದಿನ ತುಂಗಭದ್ರಾ ಜಲಾಶಯದ ಮಟ್ಟ 1,626.04 ಅಡಿ ಇತ್ತು ಹಾಗೂ 79.93 TMC ನೀರು ಸಂಗ್ರಹವಾಗಿತ್ತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ