Shivamogga Airport: ಕಮಲ ವಿನ್ಯಾಸ ಆರೋಪ; ಮಹಾಲಕ್ಷ್ಮೀಯ ಸಂಕೇತವಾಗಿದೆ ಎಂದ ಸಚಿವ ಈಶ್ವರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದ್ದು, ಇದರ ವಿನ್ಯಾಸ ಕಮಲದ ಆಕಾರದಲ್ಲಿದೆ. ಕಮಲ ಯಾವ ಪಕ್ಷದ ಚಿಹ್ನೆ ಎಂದು ಎಲ್ಲರಿಗೂ ಗೊತ್ತಿದೆ. ಪಕ್ಷದ ಚಿಹ್ನೆಗೆ ಪ್ರಚಾರ ನೀಡಲು ಸರ್ಕಾರದ ಹಣ ಬಳಕೆ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಆಗ್ರಹಿಸಿತ್ತು.

Shivamogga Airport: ಕಮಲ ವಿನ್ಯಾಸ ಆರೋಪ; ಮಹಾಲಕ್ಷ್ಮೀಯ ಸಂಕೇತವಾಗಿದೆ ಎಂದ ಸಚಿವ ಈಶ್ವರಪ್ಪ
ಕಲಾವಿದರ ಕಲ್ಪನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸ
Follow us
TV9 Web
| Updated By: sandhya thejappa

Updated on: Jun 24, 2021 | 1:02 PM

ಶಿವಮೊಗ್ಗ: ಏರ್​ಪೋರ್ಟ್​ ಕಮಲ ವಿನ್ಯಾಸದಲ್ಲಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ, ಏರ್​ಪೋರ್ಟ್ ಕಮಲ ಚಿಹ್ನೆಯ ಹೋಲಿಕೆಯಂತೆ ಕಾಣುತ್ತದೆ. ಅದು ಮಹಾಲಕ್ಷ್ಮೀಯ ಸಂಕೇತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನು ಕಾಂಗ್ರೆಸ್ ವಿರೋಧ ಮಾಡುತ್ತಿರುವುದರಲ್ಲಿ ಅರ್ಥವಿಲ್ಲ. ಕಾಂಗ್ರೆಸ್​ನವರು ಹೇಳಿಕೆ ಕೇವಲ ಟೀಕೆಗೆ ಮಾತ್ರ ಸೀಮಿತವಾಗಿದೆ. ಕಾಂಗ್ರೆಸ್ನ ಚಿಹ್ನೆ ‘ಕೈ’ ಹಾಗಂತ ಕೈ ಕಟ್ ಮಾಡಲು ಆಗುತ್ತಾ? ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಆರೋಪ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದ್ದು, ಇದರ ವಿನ್ಯಾಸ ಕಮಲದ ಆಕಾರದಲ್ಲಿದೆ. ಕಮಲ ಯಾವ ಪಕ್ಷದ ಚಿಹ್ನೆ ಎಂದು ಎಲ್ಲರಿಗೂ ಗೊತ್ತಿದೆ. ಪಕ್ಷದ ಚಿಹ್ನೆಗೆ ಪ್ರಚಾರ ನೀಡಲು ಸರ್ಕಾರದ ಹಣ ಬಳಕೆ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಆಗ್ರಹಿಸಿತ್ತು. ರಾಜಕೀಯ ಪಕ್ಷದ ಚಿಹ್ನೆಯ ಪ್ರಚಾರಕ್ಕೆ ಸಾರ್ವಜನಿಕ ಹಣ ಮತ್ತು ಜಾಗ ಬಳಕೆ ಮಾಡುವುದು ಸರಿಯಲ್ಲ. ಈ ಹಿಂದಿನ ಪ್ರಕರಣಗಳಲ್ಲಿ ಹೈಕೋರ್ಟ್ ಹಾಗೂ ಚುನಾವಣಾ ಆಯೋಗ ಇದನ್ನು ವಿರೋಧಿಸಿವೆ. ಹೀಗಾಗಿ ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸವನ್ನು ಬದಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತ್ತು.

ಕೈಗಾರಿಕೆಗಳ ಅಭಿವೃದ್ಧಿ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಆಗುವುದರಿಂದ ಕೈಗಾರಿಕೆಗಳ ಅಭಿವೃದ್ಧಿ ಆಗಲಿದೆ. 384 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ನಡೆಯುತ್ತಿದೆ. ಕೈಗಾರಿಕಾ ಕ್ಷೇತ್ರ ಬೆಳೆದರೆ ಯುವಕರಿಗೆ ಉದ್ಯೋಗ ಸಿಗಲಿದೆ. ಮಧ್ಯ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ. 2022ರ ಜೂನ್ ಅಂತ್ಯದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ. ನಮಗೂ ಆದಷ್ಟು ಬೇಗ ವಿಮಾನಯಾನ ಆರಂಭಿಸಬೇಕೆಂಬ ಅಪೇಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿಂದೆ ತಿಳಿಸಿದ್ದಾರೆ.

ಇದನ್ನೂ ಓದಿ

Shivamogga Airport: ಕಮಲದ ವಿನ್ಯಾಸದಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಡಿಸೈನ್ ಬದಲಿಸಿ: ಕಾಂಗ್ರೆಸ್ ಆಗ್ರಹ

ಶಿವಮೊಗ್ಗದಲ್ಲಿ ಆದಷ್ಟು ಬೇಗ ವಿಮಾನಯಾನ ಆರಂಭಿಸುವ ಅಪೇಕ್ಷೆಯಿದೆ, ಹಾಸನದಲ್ಲೂ ಏರ್​ಪೋರ್ಟ್ ಕಾಮಗಾರಿ ಆರಂಭವಾಗಲಿದೆ: ಸಿಎಂ ಯಡಿಯೂರಪ್ಪ