ಸುಪ್ರೀಂ ಸೂಚಿಸಿದ ಸ್ಥಳದಲ್ಲಿ ರಾಮಮಂದಿರ ಕಟ್ಟಿಲ್ಲ: ಸಂತೋಷ್ ಲಾಡ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು

ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ ಆದರೆ ಸುಪ್ರೀಂಕೋರ್ಟ್​ ಸೂಚಿಸಿದ ಜಾಗದಲ್ಲಿ ಮಂದಿರ ಕಟ್ಟಿಲ್ಲ ಎಂಬ ಸಚಿವ ಸಂತೋಷ್ ಲಾಡ್​​ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಬಿಜೆಪಿ ನಾಕಯರು ಸಂತೋಷ್ ಲಾಡ್​​ ವಿರುದ್ಧ ಕಿಡಿಕಾರುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ ಬಳಿಕ ಕಾಂಗ್ರೆಸ್‌ನವರು ಏನೇನೋ ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಸುಪ್ರೀಂ ಸೂಚಿಸಿದ ಸ್ಥಳದಲ್ಲಿ ರಾಮಮಂದಿರ ಕಟ್ಟಿಲ್ಲ: ಸಂತೋಷ್ ಲಾಡ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು
ಸಂತೋಷ್ ಲಾಡ್, K.S.ಈಶ್ವರಪ್ಪ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 18, 2024 | 5:23 PM

ನವದೆಹಲಿ, ಫೆಬ್ರವರಿ 18: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ ಬಳಿಕ ಕಾಂಗ್ರೆಸ್‌ನವರು ಏನೇನೋ ಹೇಳುತ್ತಿದ್ದಾರೆ. ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರ ಹೆಸರು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಇವರಿಗೆ ಕಾಂಗ್ರೆಸ್ ಸರ್ಕಾರದಿಂದ ನ್ಯಾಯ ಸಿಕ್ಕಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ (KS Eshwarappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸುಪ್ರೀಂ’ ಸೂಚಿಸಿದ ಸ್ಥಳದಲ್ಲಿ ರಾಮಮಂದಿರ ಕಟ್ಟಿಲ್ಲವೆಂಬ ಸಂತೋಷ್ ಲಾಡ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. 140 ಕೋಟಿ ಜನರನ್ನು ಒಗ್ಗೂಡಿಸುವ ಮಂದಿರ ಅದು. ಇದೊಂದು ರಾಷ್ಟ್ರೀಯ ಮಂದಿರ ಎಂದು ಹೇಳಿದ್ದಾರೆ.

ಮೋದಿ ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತ ಮೂರು ವರ್ಗಕ್ಕೆ ನ್ಯಾಯ ಸಿಗುತ್ತಿದೆ. ಮುಂದಿನ ದಿನಗಳಲ್ಲಿ ಅಲ್ಪಸಂಖ್ಯಾತರು ಕೂಡ ಬಿಜೆಪಿಗೆ ಓಟು ಹಾಕುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣದಿಂದ ಬಡತನ ನಿರ್ಮೂಲನೆ ಆಗಲ್ಲ: ಸಂತೋಷ್ ಲಾಡ್

ಇದೊಂದು ಐತಿಹಾಸಿಕ ಬಿಜೆಪಿ ಅಧಿವೇಶನ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿಯವರ ಭಾಷಣ ಕಾರ್ಯಕರ್ತರಿಗೆ ಪ್ರೇರಣೆ ಕೊಟ್ಟಿದೆ. 10 ವರ್ಷದಲ್ಲಿ ಸಂಘಟನೆ ಅಭಿವೃದ್ಧಿ, ಬಿಜೆಪಿ ಗೆಲುವು, ಕೇಂದ್ರ ಸರ್ಕಾರದ ಕೆಲಸಗಳು ಅವರ ಭಾಷಣಗಳಲ್ಲಿ ಇತ್ತು. ಈ ಬಾರಿ ಕರ್ನಾಟಕ 28ಕ್ಕೆ 28 ಸ್ಥಾನ ಗೆಲ್ಲಲು ನಮಗೆ ಸ್ಪೂತಿ ಕೊಟ್ಟಿದೆ ಎಂದು ಹೇಳಿದ್ದಾರೆ.

ಸಂತೋಷ್ ಲಾಡ್ ಹೇಳಿಕೆಗೆ ವಿಪಕ್ಷ ನಾಯಕ ಅಶೋಕ್ ತಿರುಗೇಟು

ಸಂತೋಷ್ ಲಾಡ್ ಹೇಳಿಕೆಗೆ ವಿಪಕ್ಷ ನಾಯಕ ಆರ್​. ಅಶೋಕ್ ಪ್ರತಿಕ್ರಿಯಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸೋಲಿನ ಭೀತಿ ಎದುರಾಗಿದೆ. ಇಂಡಿಯಾ ಮೈತ್ರಿಕೂಟದಲ್ಲಿ ಈಗ ‘ಐ’ ಒಂದೇ ಉಳಿದಿದೆ.

ಇದನ್ನೂ ಓದಿ: ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಅವಕಾಶವಿತ್ತು, ಆದರೆ ಹಾಲಿ ಸರ್ಕಾರದ ಆ ನೀತಿ ಹೊಡೆತ ಕೊಟ್ಟಿದೆ!

ಇಂದಿರಾ ಗಾಂಧಿ ಕಾಂಗ್ರೆಸ್ ಮಾತ್ರ ಈಗ ಉಳಿದಿದೆ. ಕಾಂಗ್ರೆಸ್​ ಪಕ್ಷದವರು ಜೋಡೋ ಅಂತಾ ಅಭಿಯಾನ ಆರಂಭಿಸಿದ್ದರು. ಆದರೆ ಈಗ ಕಾಂಗ್ರೆಸ್ ಛೋಡೋ ಅಂತಾ ಎಲ್ಲರೂ ಓಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಅಯೋಧ್ಯೆಕ್ಕೆ ಹೋಗಿ ದರ್ಶನ ಮಾಡಲಿ ಆಗಲಾದರೂ ಕಾಂಗ್ರೆಸ್‌ನವರಿಗೆ ಒಳ್ಳೆ ಬುದ್ಧಿ ಬರುತ್ತೆ: ಕೋಟ ಶ್ರೀನಿವಾಸ ಪೂಜಾರಿ

ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದ್ದು, ಶಿಲಾನ್ಯಾಸದ ಸಂದರ್ಭದಲ್ಲಿ ಕಪ್ಪುಪಟ್ಟಿ ಧರಿಸಿ ಸಂಸತ್‌ಗೆ ಬಂದಿದ್ದರು. ಶ್ರೀರಾಮ ಅನ್ನೋದೆ ಕಾಲ್ಪನಿಕ ಎಂದು ಸುಪ್ರೀಂಕೋರ್ಟ್‌ಗೆ ಹೇಳಿದ್ದರು. ಒಮ್ಮೆ ಅಯೋಧ್ಯೆ ರಾಮಮಂದಿರಕ್ಕೆ ಹೋಗಿ ದರ್ಶನ ಪಡೆದುಕೊಳ್ಳಲಿ ಆಗಲಾದರೂ ಕಾಂಗ್ರೆಸ್‌ನವರಿಗೆ ಒಳ್ಳೆ ಬುದ್ಧಿ ಬರುತ್ತೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:22 pm, Sun, 18 February 24

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ