ಅದರಲ್ಲೇನೂ ವಿಶೇಷವಿಲ್ಲ: ಯಡಿಯೂರಪ್ಪ ವಿರುದ್ಧ ಹೈಕಮಾಂಡ್​​ಗೆ ದೂರು ನೀಡಿದ್ದನ್ನು ಸಮರ್ಥಿಸಿಕೊಂಡ ಈಶ್ವರಪ್ಪ

ನಮ್ಮ ಇಲಾಖೆ ವಿಚಾರ ರಾಜ್ಯಪಾಲರ ಬಳಿ ಚರ್ಚಿಸಬೇಕಿತ್ತು. ಅದಕ್ಕಾಗಿ ಮಾತಾಡಿಕೊಂಡು ಬಂದಿದ್ದೇನೆ, ಅದರಲ್ಲೇನೂ ವಿಶೇಷವಿಲ್ಲ. ನಮ್ಮ ಇಲಾಖೆ ವಿಚಾರ ಚರ್ಚೆ ಮಾಡಲು ಅವಕಾಶ ಇತ್ತು. ಇದರಲ್ಲಿ ಅಸಮಾಧಾನ ಎಂಬ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಅದರಲ್ಲೇನೂ ವಿಶೇಷವಿಲ್ಲ: ಯಡಿಯೂರಪ್ಪ ವಿರುದ್ಧ ಹೈಕಮಾಂಡ್​​ಗೆ ದೂರು ನೀಡಿದ್ದನ್ನು ಸಮರ್ಥಿಸಿಕೊಂಡ ಈಶ್ವರಪ್ಪ
ಸಚಿವ ಕೆ.ಎಸ್. ಈಶ್ವರಪ್ಪ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 31, 2021 | 9:46 PM

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಿಜೆಪಿಯ ಉನ್ನತ ನಾಯಕರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ ಮತ್ತು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಲಿಖಿತ ದೂರು ಸಲ್ಲಿಸಿದ್ದನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ. ‘ಅದರಲ್ಲೇನೂ ವಿಶೇಷವಿಲ್ಲ’ ಎನ್ನುವುದು ಅವರ ಸಮರ್ಥನೆಯಾಗಿತ್ತು.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ನಮ್ಮ ಇಲಾಖೆ ವಿಚಾರ ರಾಜ್ಯಪಾಲರ ಬಳಿ ಚರ್ಚಿಸಬೇಕಿತ್ತು. ಅದಕ್ಕಾಗಿ ಮಾತಾಡಿಕೊಂಡು ಬಂದಿದ್ದೇನೆ, ಅದರಲ್ಲೇನೂ ವಿಶೇಷವಿಲ್ಲ. ನಮ್ಮ ಇಲಾಖೆ ವಿಚಾರ ಚರ್ಚೆ ಮಾಡಲು ಅವಕಾಶ ಇತ್ತು. ಇದರಲ್ಲಿ ಅಸಮಾಧಾನ ಎಂಬ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಇಲಾಖೆ ವಿಚಾರಗಳ ಬಗ್ಗೆ ಚರ್ಚಿಸಲು ಆಗಾಗ ಹೋಗಬೇಕಿರುತ್ತದೆ, ಅದಕ್ಕಾಗಿ ಹೋಗ್ತಿರ್ತೇನೆ. ಇಲ್ಲೂ ರಾಜ್ಯಪಾಲರ ಬಳಿಗೆ ಹೋಗ್ತೀನಿ, ದೆಹಲಿಗೂ ಕೇಂದ್ರ ಸರ್ಕಾರದ ಅಧಿಕಾರಿಗಳು, ಸಚಿವರನ್ನು ಭೇಟಿಯಾಗಲು ಹೋಗ್ತೀನಿ. ರಾಷ್ಟ್ರೀಯ ನಾಯಕರು, ನಮ್ಮ ಪಕ್ಷದ ನಾಯಕರು ಹಾಗೂ ಇಲಾಖೆಗೆ ಸಂಬಂಧಿಸಿದ ಕೇಂದ್ರದ ಮಂತ್ರಿಗಳ ಜೊತೆಗೆ ಇಲಾಖೆ ಅಭಿವೃದ್ಧಿ ದೃಷ್ಟಿಯಿಂದ ಚರ್ಚಿಸೋದು ಇರುತ್ತೆ ಎಂದು ವಿವರಿಸಿದರು.

ಈ ಪತ್ರದ ಬಗ್ಗೆ ಕೆಲವು ಆಂತರಿಕ ವಿಚಾರಗಳು ಇವೆ ಎಂದ ಕೆ.ಎಸ್.ಈಶ್ವರಪ್ಪ, ಅದನ್ನೆಲ್ಲಾ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಆಂತರಿಕ ವಿಚಾರಗಳನ್ನ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

KS-Eshwarappa-Letter

ಕೆ.ಎಸ್​.ಈಶ್ವರಪ್ಪ ಬರೆದಿರುವ ಪತ್ರ

ಈಶ್ವರಪ್ಪ ಬರೆದ ಪತ್ರದಲ್ಲೇನಿದೆ? ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನನ್ನ ಗಮನಕ್ಕೆ ಬಾರದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಿಡುಗಡೆಯಾಗಬೇಕಾಗಿದ್ದ ಹಣವನ್ನು ಶಾಸಕರಿಗೆ ಬಿಡುಗಡೆ ಮಾಡಿದ್ದಾರೆ. ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡಿದ್ದಾರೆ ಎಂದು ಈಶ್ವರಪ್ಪ ತಮ್ಮ ಎರಡು ಪುಟಗಳ ದೂರಿನಲ್ಲಿ ಹೇಳಿದ್ದಾರೆ.

ರಾಜ್ಯದ ಸದ್ಯದ ಆಡಳಿತ ಶೈಲಿಯನ್ನು ಬದಲಿಸಬೇಕೆಂದು ಬಿಜೆಪಿ ಹೈಕಮಾಂಡ್‌ಗೆ ಈಶ್ವರಪ್ಪ ಮನವಿ ಮಾಡಿದ್ದಾರೆ. ಪತ್ರವನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ರವಾನಿಸಿದ್ದಾರೆ. ರಾಜ್ಯಪಾಲರಿಗೂ ಈ ಕುರಿತು ದೂರು ನೀಡಿದ್ದಾರೆ. ಸಂಪುಟ ಸಹೋದ್ಯೋಗಿಗಳ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡದಂತೆ ಸಿಎಂಗೆ ನಿರ್ದೇಶನ ನೀಡುವಂತೆ ಪತ್ರ ರಾಜ್ಯಪಾಲರಿಗೆ ಸಲ್ಲಿಸಿರುವ ಲಿಖಿತ ದೂರಿನಲ್ಲಿ ಈಶ್ವರಪ್ಪ ಒತ್ತಾಯಿಸಿದ್ದಾರೆ.

ತಮ್ಮ ಇಲಾಖೆಗೆ ಸಂಬಂಧಿಸಿದ ನಿಧಿ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಲವು ಬಾರಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅನುದಾನ ಹಂಚಿಕೆ ವಿಚಾರದ ಬಗ್ಗೆ ಯಡಿಯೂರಪ್ಪ ಅವರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸಲು ಯತ್ನಿಸಿದೆ. ಆದರೆ ದೂರುಗಳ ಬಗ್ಗೆ ಗಮನ ನೀಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು. ನಿಯಮಗಳನ್ನು ಪಾಲಿಸುವಂತೆ ಹಾಗೂ ನನ್ನ ಸಂವಿಧಾನಾತ್ಮಕ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡದಿರುವುದಂತೆ ಯಡಿಯೂರಪ್ಪ ಅವರಿಗೆ ಸೂಚಿಸಬೇಕೆಂದು ಈಶ್ವರಪ್ಪ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿಯಿಂದ ಆಗಿರುವ ಈ ಲೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಗಮನ ಸೆಳೆಯಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಬಿಜೆಪಿಯಲ್ಲಿ ತಳಮಳ: ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯವೈಖರಿ ವಿರುದ್ಧ ರಾಜ್ಯಪಾಲರು, ಹೈಕಮಾಂಡ್​ಗೆ ಈಶ್ವರಪ್ಪ ದೂರು

ಇದನ್ನೂ ಓದಿ: ವಿಶ್ಲೇಷಣೆ | ಪಶ್ಚಿಮ ಬಂಗಾಳ ಕದನ ಕಣ; ಮೊದಲ ಹಂತದಲ್ಲಿ ಬಿಜೆಪಿಗೆ ಅನುಕೂಲಕರ ಪರಿಸ್ಥಿತಿ

Published On - 9:43 pm, Wed, 31 March 21

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ