ವಾಹನ ಸೀಜ್ ಆದ್ರೆ 14 ದಿನ ಸಿಗಲ್ಲ: ಸಚಿವ ಕೆ.ಎಸ್ ಈಶ್ವರಪ್ಪ
ನಾಳೆಯಿಂದ 14 ದಿನಗಳವರೆಗೆ ಲಾಕ್‌ಡೌನ್ ಜಾರಿಯಲ್ಲಿರಲಿದ್ದು ಸರ್ಕಾರದ ಈ ಆದೇಶವನ್ನು ಎಲ್ಲರೂ ಪಾಲಿಸಬೇಕು. ಲಾಕ್‌ಡೌನ್ ವೇಳೆ ಕಾರು, ಆಟೋ, ಬೈಕ್ಗಳನ್ನು ಓಡಿಸಿದರೆ ಜಪ್ತಿ ಮಾಡಲಾಗುವುದು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗ: ನಾಳೆಯಿಂದ 14 ದಿನಗಳವರೆಗೆ ಲಾಕ್‌ಡೌನ್ ಜಾರಿಯಲ್ಲಿರಲಿದ್ದು ಸರ್ಕಾರದ ಈ ಆದೇಶವನ್ನು ಎಲ್ಲರೂ ಪಾಲಿಸಬೇಕು. ಲಾಕ್‌ಡೌನ್ ವೇಳೆ ಕಾರು, ಆಟೋ, ಬೈಕ್ಗಳನ್ನು ಓಡಿಸಿದರೆ ಜಪ್ತಿ ಮಾಡಲಾಗುವುದು. ಜಪ್ತಿ ಮಾಡಿದ ವಾಹನಗಳು 14 ದಿನಗಳ ಕಾಲ ಸಿಗುವುದಿಲ್ಲ ಎಂದು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.
ನಾಳೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬಿಗಿ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ಬೈಕ್, ಕಾರುಗಳನ್ನು ರಸ್ತೆಗಿಳಿಸಿದರೆ ಪೊಲೀಸರು ಜಪ್ತಿ ಮಾಡಲಿದ್ದಾರೆ. ಜಪ್ತಿಯಾದ ವಾಹನಗಳು 14 ದಿನಗಳ ಕಾಲ ಸಿಗುವುದಿಲ್ಲ. ಸರ್ಕಾರದ ಲಾಕ್‌ಡೌನ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ಅದಕ್ಕೆ ತಕ್ಕಂತೆ ಎಲ್ಲರೂ ಹೊಂದಿಕೊಳ್ಳುವಂತೆ ಸಚಿವ ಕೆ.ಎಸ್ ಈಶ್ವರಪ್ಪ ಮನವಿ ಮಾಡಿದ್ದಾರೆ.
ಮೇ 10ರಿಂದ 24ರವರೆಗೆ ಇನ್ನಷ್ಟು ಬಿಗಿ ಕ್ರಮ ಕರ್ನಾಟದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಹೆಚ್ಚಾಗಿರುವ ಕಾರಣ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಲಾಕ್‌ಡೌನ್ ಮೊರೆ ಹೋಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಮೇ 10ರಿಂದ ಮೇ 24ರ ತನಕ ಲಾಕ್‌ಡೌನ್ ಮಾಡಲಾಗುವುದು ಎಂದು ತಿಳಿಸಿದೆ. ರಾಜ್ಯದಲ್ಲಿ ಸಾವು-ನೋವುಗಳನ್ನು ತಡೆಗಟ್ಟಬೇಕೆಂದರೆ ಲಾಕ್‌ಡೌನ್ ಮಾಡಲೇಬೇಕೆಂದು ತಜ್ಞರು ಕೂಡಾ ಮೇಲಿಂದ ಮೇಲೆ ಎಚ್ಚರಿಕೆ ನೀಡಿದ್ದಾರೆ.
ಲಾಕ್‌ಡೌನ್ ವೇಳೆಯಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, 10 ಗಂಟೆಯ ಬಳಿಕ ಯಾರೂ ಹೊರಗೆ ಓಡಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಅಗತ್ಯ ವಸ್ತುಗಳ ಸರಬರಾಜಿಗೆ ಗೂಡ್ಸ್ ವಾಹನಗಳ ಓಡಾಟ ಇರಲಿದ್ದು, ಆನ್‌ಲೈನ್ ಡೆಲಿವರಿ ಸರ್ವಿಸ್‌ಗೂ ಅವಕಾಶ ನೀಡಲಾಗಿದೆ. 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್‌ಡೌನ್ ಮಾಡಿರುವುದರಿಂದ ಪ್ಯಾಕೇಜ್, ನೆರವು ನೀಡುವ ಬಗ್ಗೆ ಹಂತ ಹಂತವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂಬುದನ್ನೂ ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
Karnataka Lockdown: ಕರ್ನಾಟಕ ಲಾಕ್‌ಡೌನ್; ಕೊರೊನಾ ತಡೆಗೆ ಮೇ 10ರಿಂದ 24ರವರೆಗೆ ಇನ್ನಷ್ಟು ಬಿಗಿ ಕ್ರಮ