AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ವರೆಗೂ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆ ನಡೆಯಲ್ಲ; ಸಚಿವ ಕೆ.ಎಸ್.ಈಶ್ವರಪ್ಪ

ಕೇವಲ ನಾಯಕತ್ವದ ಬದಲಾವಣೆ ಮಾತ್ರವಲ್ಲ. ಕೊರೊನಾ ನಿರ್ವಹಣೆ ಕ್ರಮಗಳ ಬಗ್ಗೆಯೂ ಚರ್ಚೆ ಆಗಿದೆ. ಸದ್ಯಕ್ಕೆ ಕೊರೊನಾ ಬಗ್ಗೆ ಮಾತ್ರ ಚರ್ಚೆ ಮಾಡಬೇಕು. ಈಗ ನಾಯಕತ್ವ ಬದಲಾವಣೆ ಮುಗಿದ ವಿಚಾರ. ಮೇಲಾಗಿ ಜಲಸಂಪನ್ಮೂಲ ಇಲಾಖೆ ಟೆಂಡರ್ ಬಗ್ಗೆ ಸಿಎಂ ಹಾಗೂ ಆ ಇಲಾಖೆ ಕಾರ್ಯದರ್ಶಿ ಉತ್ತರ ನೀಡಿದ್ದಾರೆ.

ಡಿಸೆಂಬರ್​ವರೆಗೂ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆ ನಡೆಯಲ್ಲ; ಸಚಿವ ಕೆ.ಎಸ್.ಈಶ್ವರಪ್ಪ
ಸಚಿವ ಕೆ.ಎಸ್. ಈಶ್ವರಪ್ಪ
TV9 Web
| Edited By: |

Updated on: Jun 19, 2021 | 10:34 AM

Share

ದಾವಣಗೆರೆ: ಸದ್ಯಕ್ಕೆ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಯುವುದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಡಿಸೆಂಬರ್ವರೆಗೂ ಚುನಾವಣೆ ನಡೆಯಲ್ಲ. ಕೊರೊನಾ ಮೂರನೇ ಅಲೆ ಭೀತಿಯಿರುವ ಹಿನ್ನೆಲೆ ಸದ್ಯಕ್ಕೆ ಚುನಾವಣೆ ಬೇಡವೆಂದು ನಿರ್ಧರಿಸಲಾಗಿದೆ ಎಂದು ದಾವಣಗೆರೆಯಲ್ಲಿ ಸಚಿವರು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಬಿಜೆಪಿ ಒಂದು ಕುಟುಂಬ. ನಮ್ಮ ಅಭಿಪ್ರಾಯ ತಿಳಿಸುವುದಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವಕಾಶ ನೀಡಿದ್ದರು ಎಂದು ತಿಳಿಸಿದ ಅವರು ಇದೊಂದು ವಿಶೇಷ ಪದ್ಧತಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇವಲ ನಾಯಕತ್ವದ ಬದಲಾವಣೆ ಮಾತ್ರವಲ್ಲ. ಕೊರೊನಾ ನಿರ್ವಹಣೆ ಕ್ರಮಗಳ ಬಗ್ಗೆಯೂ ಚರ್ಚೆ ಆಗಿದೆ. ಸದ್ಯಕ್ಕೆ ಕೊರೊನಾ ಬಗ್ಗೆ ಮಾತ್ರ ಚರ್ಚೆ ಮಾಡಬೇಕು. ಈಗ ನಾಯಕತ್ವ ಬದಲಾವಣೆ ಮುಗಿದ ವಿಚಾರ. ಮೇಲಾಗಿ ಜಲಸಂಪನ್ಮೂಲ ಇಲಾಖೆ ಟೆಂಡರ್ ಬಗ್ಗೆ ಸಿಎಂ ಹಾಗೂ ಆ ಇಲಾಖೆ ಕಾರ್ಯದರ್ಶಿ ಉತ್ತರ ನೀಡಿದ್ದಾರೆ. ಇದರ ಬಗ್ಗೆ ಚರ್ಚೆಯೇ ಬೇಡ ಎಂದು ಸಚಿವರು ಅಭಿಪ್ರಾಯಪಟ್ಟರು. ಮೆಚ್ಚುಗೆ ವ್ಯಕ್ತಪಡಿಸಿದ ಈಶ್ವರಪ್ಪ ನಗರದ ಎಸ್ ಎಸ್ ಕಲ್ಯಾಣ ಮಂಟಪದಲ್ಲಿ ನಡೆದ ಕೊರೊನಾ ಸೋಂಕಿತರಿಗೆ ಉಚಿತ ಊಟ ತಿಂಡಿ ವಿತರಣೆ ವೀಕ್ಷಿಸಿದ ಈಶ್ವರಪ್ಪ ಮೆಚ್ಚುಗೆ ವ್ಯಕ್ತ ಪಡಿಸಿದರು. ಸಿರಿಗೆರೆ ತರಳುಬಾಳು ಗುರುಪೀಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾಧನೆ ಶ್ಲಾಘನೀಯ. 50 ದಿನಗಳಿಂದ ನಿತ್ಯ ಎರಡು ಸಾವಿರ ಜನರಿಗೆ ಊಟ ತಿಂಡಿ ನೀಡುತ್ತಿರುವುದು ಇತರ ಸ್ವಾಮೀಜಿಗೆ ಮಾದರಿ ಎಂದರು.

ಇದನ್ನೂ ಓದಿ

‘ಸಂಚಾರಿ ವಿಜಯ್ ರೀತಿ ನನಗೂ ಅವಮಾನ ಆಗಿದೆ‘; ‘ಜೊತೆ ಜೊತೆಯಲಿ’ ಅನಿರುದ್ಧ ಹೇಳಿದ ಕಹಿ ಸತ್ಯ

ಬೆಂಗಳೂರಿನಲ್ಲಿ ಕೆರೆ ಅಭಿವೃದ್ಧಿಗಾಗಿ 6,316 ಮರಗಳ ತೆರವಿಗೆ ಆಲೋಚನೆ; ಪರಿಸರ ಪ್ರೇಮಿಗಳ ಆಕ್ರೋಶ

(KS Eshwarappa says there will be no Taluk And Zilla Panchayat Election till December)

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ