ರಾಹುಲ್ ಗಾಂಧಿ ಕಾಲಿಟ್ಟ ಕಡೆಯೆಲ್ಲಾ ಕಾಂಗ್ರೆಸ್ ಸೋತಿದೆ, ಬೆಳಗಾವಿಗೆ ಬಂದ್ರೆ ಸಿಂಹವೋ, ನರಿಯೋ, ಕುರಿಯೋ ಗೊತ್ತಾಗುತ್ತೆ: ಕೆಎಸ್ ಈಶ್ವರಪ್ಪ
ರಾಹುಲ್ ಗಾಂಧಿ ಕಾಲಿಟ್ಟ ಕಡೆಯೆಲ್ಲಾ ಕಾಂಗ್ರೆಸ್ ಸೋತಿದೆ. ರಾಹುಲ್ ಬೆಳಗಾವಿಗೆ ಬಂದರೆ ಸಿಂಹವೋ, ನರಿಯೋ, ಕುರಿಯೋ ಆಮೇಲೆ ಗೊತ್ತಾಗುತ್ತೆ. ಬೇಕಿದ್ದರೆ ಬೆಳಗಾವಿ ಉಪಚುನಾವಣೆಗೆ ಕರೆಯಿಸಲಿ ಆಮೇಲೆ ನೋಡೋಣ ಎಂದು ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಬೆಳಗಾವಿ: ಕರ್ನಾಟಕದಲ್ಲಿ ಉಪಚುನಾವಣೆ ಕಾವು ಜೋರಾಗಿದ್ದು ರಾಜಕೀಯ ಪಕ್ಷಗಳ ನಡುವೆ ವಾಕ್ಸಮರ, ವ್ಯಂಗ್ಯ, ಆರೋಪ, ಪ್ರತ್ಯಾರೋಪಗಳು ಮುಗಿಲುಮುಟ್ಟಿದೆ. ಸದ್ಯ ಬೆಳಗಾವಿಯಲ್ಲಿ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ರಾಹುಲ್ ಗಾಂಧಿ ಕಾಲಿಟ್ಟ ಕಡೆಯೆಲ್ಲಾ ಕಾಂಗ್ರೆಸ್ ಸೋತಿದೆ ಎಂದಿರುವ ಅವರು ರಾಹುಲ್ ಬೆಳಗಾವಿಗೆ ಬಂದರೆ ಸಿಂಹವೋ, ನರಿಯೋ, ಕುರಿಯೋ ಆಮೇಲೆ ಗೊತ್ತಾಗುತ್ತೆ. ಬೇಕಿದ್ದರೆ ಬೆಳಗಾವಿ ಉಪಚುನಾವಣೆಗೆ ಕರೆಯಿಸಲಿ ಆಮೇಲೆ ನೋಡೋಣ ಎಂದು ವ್ಯಂಗ್ಯವಾಡಿದ್ದಾರೆ.
ಉಪಚುನಾವಣೆ ಫಲಿತಾಂಶ ಬಳಿಕ ಬಿಜೆಪಿ ಸರ್ಕಾರ ಕುಸಿಯುತ್ತದೆ ಎಂಬ ರಣದೀಪ್‌ಸಿಂಗ್ ಸುರ್ಜೇವಾಲ ಹೇಳಿಕೆಗೆ ಪ್ರತಿಕ್ರಿಯಿಸಿ ರಣದೀಪ್‌ಸಿಂಗ್ ಸುರ್ಜೇವಾಲಗೆ ಕರ್ನಾಟಕವೇ ಮರೆತು ಹೋಗಿದೆ. ಸುರ್ಜೇವಾಲರಂತ ಭಟ್ಟಂಗಿಗಳು ರಾಹುಲ್ ಗಾಂಧಿನ ಹೊಗಳಿ ಹಾಳು ಮಾಡಿದ್ರು ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೇ, ರಾಜ್ಯ ಸರ್ಕಾರದಲ್ಲಿ ವಿಜಯೇಂದ್ರ ಟ್ಯಾಕ್ಸ್ ಇದೆ ಎಂಬ ಸುರ್ಜೇವಾಲ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಈಶ್ವರಪ್ಪ ಆ ಬಗ್ಗೆ ಏನೂ ಮಾತನಾಡಿಲ್ಲ.
ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಖಾಲಿ ಕೊಡ ಆಗಿದ್ದಾರೆ. ಖಾಲಿ ಕೊಡವನ್ನು ಮೊದಲು ಜನ ನಂಬಿದ್ರು, ಆದ್ರೆ ಅವರು ಜನರಿಗೆ ದ್ರೋಹ ಮಾಡಿದ್ರು. ಈಗ ಇದೇ ಕಾಂಗ್ರೆಸ್ ಪಕ್ಷ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುತ್ತಿದೆ. ಮಂಗಳಾ ಅಂಗಡಿ ಸಂಸತ್‌ಗೆ ಹೋಗಿ ಏನು ಮಾಡ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಏಕೆ ಇಂದಿರಾ ಗಾಂಧಿ, ಸುಷ್ಮಾ ಸ್ವರಾಜ್ ಮಹಿಳೆ ಅಲ್ಲವೇನು? ಅವರು ಕೆಲಸ ಮಾಡಿ ತೋರಿಸಿಲ್ವಾ? ಹೀಗೆಲ್ಲಾ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಹೀಗಾಗಿ ಮಹಿಳೆಯರನ್ನು ಅಪಮಾನ ಮಾಡಿದ ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕಾರ ಮಾಡಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಈಶ್ವರಪ್ಪ ಮನೆಯಲ್ಲಿ 2 ನೋಟ್ ಎಣಿಸೋ ಮೆಷಿನ್ ಸಿಕ್ಕಿತ್ತು, ಅದ್ನ ಆತ ಒಪ್ಕೊಂಡಿದ್ದ: ಸಿದ್ದರಾಮಯ್ಯ
ಮಸ್ಕಿ ವಿಧಾನಸಭಾ ಉಪಚುನಾವಣೆ; ಪ್ರಚಾರದ ವೇಳೆ ಹಣ ಹಂಚಿಕೆ ಆರೋಪ, ಬಿಜೆಪಿ-ಕಾಂಗ್ರೆಸ್ ನಡುವೆ ಮಾರಾಮಾರಿ
Published On - 10:47 am, Mon, 12 April 21