ಏ 12ರಂದು ನಾಮಪತ್ರ: ಚುನಾವಣೆಗೆ ಸ್ಪರ್ಧಿಸಲು ದೆಹಲಿ ಯಾತ್ರೆ ಭಗವಂತ ಕೊಟ್ಟ ವರ ಎಂದ ಈಶ್ವರಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ, ಏಪ್ರಿಲ್​ 12 ರಂದು ನಾನು ನಾಮಪತ್ರವನ್ನ ಸಲ್ಲಿಕೆ ಮಾಡುತ್ತೇನೆ ಶಿವಮೊಗ್ಗದಲ್ಲಿ ರಾಮಣ್ಣ ಶೆಟ್ಟಿ ಪಾರ್ಕ್​ನಿಂದ ಬೃಹತ ಮೆರವಣಿಗೆ ಮೂಲಕ ಹೋಗಿ ನಾಮಪತ್ರ ಸಲ್ಲಿಸುತ್ತೇನೆ. ಜ‌ನರ ಅಪಾರ ಬೆಂಬಲ ಶಕ್ತಿ ನನಗೆ ಸಿಕ್ಕಿದೆ. ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದಲೂ ನನಗೆ ಬೆಂಬಲ ಸಿಗುತ್ತಿದೆ ಎಂದು ಹೇಳಿದ್ದಾರೆ.

ಏ 12ರಂದು ನಾಮಪತ್ರ: ಚುನಾವಣೆಗೆ ಸ್ಪರ್ಧಿಸಲು ದೆಹಲಿ ಯಾತ್ರೆ ಭಗವಂತ ಕೊಟ್ಟ ವರ ಎಂದ ಈಶ್ವರಪ್ಪ
K.S.ಈಶ್ವರಪ್ಪ
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on: Apr 04, 2024 | 9:30 PM

ದೇವನಹಳ್ಳಿ, ಏಪ್ರಿಲ್​ 04: ಏಪ್ರಿಲ್​ 12ರಂದು ಶಿವಮೊಗ್ಗ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ (KS Eshwarappa) ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸಲು ದೆಹಲಿ ಯಾತ್ರೆ ಭಗವಂತ ಕೊಟ್ಟ ವರ. ಏ.12ರಂದು ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದಲೂ ನನಗೆ ಬೆಂಬಲ ಸಿಗುತ್ತಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಕೊಟ್ಟಿಲ್ಲ. ಬೇಡಿಕೆಯಿಟ್ಟಿದ್ದ ಪ್ರಶ್ನೆಗೆ ಉತ್ತರಿಸಲಾಗದೆ ಭೇಟಿಗೆ ಅವಕಾಶ ನೀಡಿಲ್ಲ. ದೇಶದಲ್ಲಿ ಕಾಂಗ್ರೆಸ್​ನಿಂದ ಕುಟುಂಬ ರಾಜಕಾರಣ ನಡೆಯುತ್ತಿದೆ. ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣ ನಡೆಯುತ್ತಿದೆ. ಹೀಗಾಗಿ ಅವರ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡ್ತಿದ್ದೀನಿ ಎಂದು ಹೇಳಿದ್ದಾರೆ.

ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ: ಕೆ.ಎಸ್​ ಈಶ್ವರಪ್ಪ

ಸುಮಲತಾ ಬಿಜೆಪಿಗೆ ಬಂದಿರುವುದು ಸ್ವಾಗತ. ಬಿಜೆಪಿಗೆ ಯಾರೆಲ್ಲ ಬರುತ್ತಾರೋ ಅವರಿಗೆಲ್ಲಾ ಸ್ವಾಗತ. ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗಬೇಕು. ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ. ಮೋದಿಗೆ ಬೆಂಬಲ ಕೊಡದಿದ್ರೆ ನನ್ನ ಕೈಕಟ್ ಆಗಿಬಿಡುತ್ತೆ. ಚುನಾವಣೆಯಲ್ಲಿ ಗೆದ್ದ ಮೇಲೆ ಮೋದಿ ಬಳಿ ಹೋಗುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮೇರೆಗೆ ದೆಹಲಿಗೆ ತೆರಳಿದ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ

ರಾಜ್ಯದ, ದೇಶದ ಜನ ಮೋದಿ ಕೈ ಎತ್ತಬೇಕು ಎನ್ನುವ ಅಪೇಕ್ಷೆಯಿದೆ. ನನ್ನ ಜೊತೆ ಗೂಳಿಹಟ್ಟಿಶೇಖರ್ ಸೇರಿದಂತೆ ಅನೇಕರು ಇದ್ದಾರೆ. ಎಲ್ಲರೂ ನನ್ನ ಜೊತೆ ಸೇರುತ್ತಾರೆ ನನಗೆ ಬೆಂಬಲ ನೀಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ಎತ್ತಿರುವ ಪ್ರಶ್ನೆಗಳನ್ನು ವರಿಷ್ಠರು ಗಂಭೀರವಾಗಿ ಪರಿಗಣಿಸಿ ಬಗೆಹರಿಸುವ ಕೆಲಸಕ್ಕೆ ಮುಂದಾಗಬೇಕು: ಬಸನಗೌಡ ಯತ್ನಾಳ್

ಕಾರವಾದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​, ಈಶ್ವರಪ್ಪ ಆಡುತ್ತಿರುವ ಮಾತುಗಳನ್ನು ಮತ್ತು ಅವರು ಎತ್ತಿರುವ ಪ್ರಶ್ನೆಗಳನ್ನು ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಬೇಕು ಮತ್ತು ಅವುಗಳ ಇತ್ಯರ್ಥಕ್ಕೆ ಮುಂದಾಗಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ