ಈಶ್ವರಪ್ಪ ಹಿರಿಯ ಸಚಿವರು, ಏನೇ ಮನಸ್ತಾಪವಿದ್ದರೂ ಸಿಎಂ ಜೊತೆ ಚರ್ಚಿಸಬೇಕಿತ್ತು: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ

ಈಶ್ವರಪ್ಪನವರು ಹಿರಿಯ ಸಚಿವರು. ಹೀಗೆ ಬಹಿರಂಗವಾಗಿ ಪತ್ರ ಬರೆಯಬಾರದಿತ್ತು. ಏನೇ ಮನಸ್ತಾಪವಿದ್ದರೂ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೆ ಚರ್ಚಿಸಬೇಕು. ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪ ಮಾಡಬೇಕು. ಅದುಬಿಟ್ಟು ಹೀಗೆ ರಾಜ್ಯಪಾಲರಿಗೆ ಪತ್ರ ಬರೆಯಬಾರದಿತ್ತು.

ಈಶ್ವರಪ್ಪ ಹಿರಿಯ ಸಚಿವರು, ಏನೇ ಮನಸ್ತಾಪವಿದ್ದರೂ ಸಿಎಂ ಜೊತೆ ಚರ್ಚಿಸಬೇಕಿತ್ತು: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ
ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (ಸಂಗ್ರಹ ಚಿತ್ರ)
Follow us
ಸಾಧು ಶ್ರೀನಾಥ್​
| Updated By: Digi Tech Desk

Updated on:Apr 01, 2021 | 12:22 PM

ನವದೆಹಲಿ: ತಮ್ಮ ಇಲಾಖೆಯಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿರುವ ಬಗ್ಗೆ ಖುದ್ದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ವಿರುದ್ಧವೇ ರಾಜ್ಯಪಾಲರಿಗೆ ಪತ್ರ ಬರೆದು ದೂರು ನೀಡಿದ್ದರು. ಹೀಗೆ ಸಿಎಂ ಯಡಿಯೂರಪ್ಪ ವಿರುದ್ಧ ಕೆ.ಎಸ್. ಈಶ್ವರಪ್ಪ ದೂರು ನೀಡಿರುವ ವಿಚಾರದ ಬಗ್ಗೆ ದೆಹಲಿಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಕೆ.ಎಸ್. ಈಶ್ವರಪ್ಪನವರು ಹಿರಿಯ ಸಚಿವರು. ಹೀಗೆ ಬಹಿರಂಗವಾಗಿ ಪತ್ರ ಬರೆಯಬಾರದಿತ್ತು. ಏನೇ ಮನಸ್ತಾಪವಿದ್ದರೂ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೆ ಚರ್ಚಿಸಬೇಕು. ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪ ಮಾಡಬೇಕು. ಅದುಬಿಟ್ಟು ಹೀಗೆ ರಾಜ್ಯಪಾಲರಿಗೆ ಪತ್ರ ಬರೆಯಬಾರದಿತ್ತು. ಸದ್ಯ ಚುನಾವಣೆ ಮೇಲೆ ಗಮನ ಹರಿಸಿದ್ದೇವೆ. ಮೂರು ಉಪ ಚುನಾವಣೆ ಗೆಲ್ಲಲಿದ್ದೇವೆ. ಬಳಿಕ ನಾವು ಪತ್ರದ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೂಕ್ಷ್ಮವಾಗಿ ಹೇಳಿದ್ದಾರೆ.

ಪತ್ರ ಬರೆದಿರುವುದರಲ್ಲಿ ವಿಶೇಷ ಏನಿಲ್ಲ; ಅದಕ್ಕೆ ಅಷ್ಟೊಂದು ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ

ರಾಜ್ಯಪಾಲರ ಜತೆ ಇಲಾಖೆ ಕುರಿತು ಆಡಳಿತಾತ್ಮಕ ಚರ್ಚೆ ನಡೆದಿದೆ. ರಾಜ್ಯಪಾಲರಿಗೆ ಪತ್ರ ಬರೆದಿರುವುದರಲ್ಲಿ ವಿಶೇಷ ಏನಿಲ್ಲ. ಇದಕ್ಕೆ ಅಷ್ಟೊಂದು ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಈ ವಿಚಾರವನ್ನು ಅವರು ಪ್ರಾಮುಖ್ಯತೆ ಮಾಡಿದ್ದಾರೆ. ಅವರು ಮಾಡಿರುವುದನ್ನು ನಾನು ತಪ್ಪು ಎಂದು ಹೇಳಲಾ? ನನ್ನ ಇಲಾಖೆ ವಿಚಾರ ರಾಜ್ಯಪಾಲರ ಗಮನಕ್ಕೆ ತರಬೇಕಿತ್ತು. ಹೀಗಾಗಿ ನಾನು ಅವರನ್ನ ಭೇಟಿಯಾಗಿ ಗಮನಕ್ಕೆ ತಂದಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ K.S.ಈಶ್ವರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ತಳಮಳ: ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯವೈಖರಿ ವಿರುದ್ಧ ರಾಜ್ಯಪಾಲರು, ಹೈಕಮಾಂಡ್​ಗೆ ಈಶ್ವರಪ್ಪ ದೂರು

Published On - 10:44 am, Thu, 1 April 21

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ