ನವದೆಹಲಿ: ತಮ್ಮ ಇಲಾಖೆಯಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿರುವ ಬಗ್ಗೆ ಖುದ್ದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧವೇ ರಾಜ್ಯಪಾಲರಿಗೆ ಪತ್ರ ಬರೆದು ದೂರು ನೀಡಿದ್ದರು. ಹೀಗೆ ಸಿಎಂ ಯಡಿಯೂರಪ್ಪ ವಿರುದ್ಧ ಕೆ.ಎಸ್. ಈಶ್ವರಪ್ಪ ದೂರು ನೀಡಿರುವ ವಿಚಾರದ ಬಗ್ಗೆ ದೆಹಲಿಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಕೆ.ಎಸ್. ಈಶ್ವರಪ್ಪನವರು ಹಿರಿಯ ಸಚಿವರು. ಹೀಗೆ ಬಹಿರಂಗವಾಗಿ ಪತ್ರ ಬರೆಯಬಾರದಿತ್ತು. ಏನೇ ಮನಸ್ತಾಪವಿದ್ದರೂ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೆ ಚರ್ಚಿಸಬೇಕು. ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪ ಮಾಡಬೇಕು. ಅದುಬಿಟ್ಟು ಹೀಗೆ ರಾಜ್ಯಪಾಲರಿಗೆ ಪತ್ರ ಬರೆಯಬಾರದಿತ್ತು. ಸದ್ಯ ಚುನಾವಣೆ ಮೇಲೆ ಗಮನ ಹರಿಸಿದ್ದೇವೆ. ಮೂರು ಉಪ ಚುನಾವಣೆ ಗೆಲ್ಲಲಿದ್ದೇವೆ. ಬಳಿಕ ನಾವು ಪತ್ರದ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೂಕ್ಷ್ಮವಾಗಿ ಹೇಳಿದ್ದಾರೆ.
ಪತ್ರ ಬರೆದಿರುವುದರಲ್ಲಿ ವಿಶೇಷ ಏನಿಲ್ಲ; ಅದಕ್ಕೆ ಅಷ್ಟೊಂದು ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ
ರಾಜ್ಯಪಾಲರ ಜತೆ ಇಲಾಖೆ ಕುರಿತು ಆಡಳಿತಾತ್ಮಕ ಚರ್ಚೆ ನಡೆದಿದೆ. ರಾಜ್ಯಪಾಲರಿಗೆ ಪತ್ರ ಬರೆದಿರುವುದರಲ್ಲಿ ವಿಶೇಷ ಏನಿಲ್ಲ. ಇದಕ್ಕೆ ಅಷ್ಟೊಂದು ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.
ಈ ವಿಚಾರವನ್ನು ಅವರು ಪ್ರಾಮುಖ್ಯತೆ ಮಾಡಿದ್ದಾರೆ. ಅವರು ಮಾಡಿರುವುದನ್ನು ನಾನು ತಪ್ಪು ಎಂದು ಹೇಳಲಾ? ನನ್ನ ಇಲಾಖೆ ವಿಚಾರ ರಾಜ್ಯಪಾಲರ ಗಮನಕ್ಕೆ ತರಬೇಕಿತ್ತು. ಹೀಗಾಗಿ ನಾನು ಅವರನ್ನ ಭೇಟಿಯಾಗಿ ಗಮನಕ್ಕೆ ತಂದಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ K.S.ಈಶ್ವರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿಯಲ್ಲಿ ತಳಮಳ: ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯವೈಖರಿ ವಿರುದ್ಧ ರಾಜ್ಯಪಾಲರು, ಹೈಕಮಾಂಡ್ಗೆ ಈಶ್ವರಪ್ಪ ದೂರು
Published On - 10:44 am, Thu, 1 April 21