AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ PDO ಅಮಾನತು: ಆದೇಶಕ್ಕೆ ಕೆಎಸ್‌ಎಟಿ ತಡೆ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾನೂನು ಹೋರಾಟದಲ್ಲಿ ನೆರವಾಗಿದ್ದು, ಈ ಆದೇಶದಿಂದ ಸರ್ಕಾರದ ನಿರ್ಧಾರಕ್ಕೆ ತೀವ್ರ ಹಿನ್ನಡೆಯಾಗಿದೆ.

RSS ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ PDO ಅಮಾನತು: ಆದೇಶಕ್ಕೆ ಕೆಎಸ್‌ಎಟಿ ತಡೆ
PDO ಅಮಾನತು ಆದೇಶಕ್ಕೆ ತಡೆ
ಪ್ರಸನ್ನ ಹೆಗಡೆ
|

Updated on:Oct 30, 2025 | 2:16 PM

Share

ಬೆಂಗಳೂರು, ಅಕ್ಟೋಬರ್​ 30: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ (ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ) ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರವೀಣ್​ ಅವರ ಮೇಲೆ ಹೇರಲಾಗಿದ್ದ ಏಕಪಕ್ಷೀಯ ಅಮಾನತು ಆದೇಶವನ್ನು ನಾವು ಪ್ರಶ್ನಿಸಿದ್ದೆವು. ಈಗ ಅದಕ್ಕೆ ತಡೆ ಸಿಕ್ಕಿದೆ. ಯಾವುದೇ ರೀತಿಯ ಬೆದರಿಕೆ ಆರ್‌ಎಸ್‌ಎಸ್‌ನ ರಾಷ್ಟ್ರ ನಿರ್ಮಾಣದ ಆದರ್ಶಗಳನ್ನು ತಡೆಯಲು ಸಾಧ್ಯವಿಲ್ಲ. ಈ ಆದೇಶದಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ ಎಂದಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಮಾಹಿತಿ

ಆರೆಸ್ಸೆಸ್​ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್​ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಸಂಘದ ಸಮವಸ್ತ್ರ ಧರಿಸಿ, ಕೈನಲ್ಲಿ ದೊಣ್ಣೆ ಹಿಡಿದ ಗಣವೇಷಧಾರಿಯಾಗಿ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓ ಪ್ರವೀಣ್​ ಭಾಗವಹಿಸಿದ್ದರು. ಇದರಿಂದಾಗಿ ಪ್ರವೀಣ್​, ಕರ್ನಾಟಕ ಸಿವಿಲ್ ಸೇವಾ (ನಡತೆ) ನಿಯಮಗಳು 2021ರ ನಿಯಮ 3ರ ಅನ್ವಯ ಪ್ರತಿಯೊಬ್ಬ ಸರ್ಕಾರಿ ನೌಕರನು ಎಲ್ಲಾ ಕಾಲದಲ್ಲಿಯೂ ಸಂಪೂರ್ಣ ನೀತಿ ನಿಷ್ಠೆಯನ್ನು ಹೊಂದಿರತಕ್ಕದ್ದು ಮತ್ತು ಕರ್ತವ್ಯ ಶ್ರದ್ಧೆಯನ್ನು ಹೊಂದಿರತಕ್ಕದ್ದು ಹಾಗೂ ಸರ್ಕಾರಿ ನೌಕರನಿಗೆ ತಕ್ಕದಲ್ಲದನ್ನು ಮಾಡಬಾರದೆಂಬುದನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೇ ಕಾರಣಕ್ಕೆ ಅವರನ್ನು ಅಮಾನತು ಮಾಡಿ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಆದೇಶಿಸಿದ್ದರು.

ಇದನ್ನೂ ಓದಿ: RSS ಪಥಸಂಚಲನದಲ್ಲಿ ಭಾಗಿ: ರಾಯಚೂರಿನ ರೋಡಲಬಂಡಾ ಪಿಡಿಓ ಅಮಾನತು

ಅಮಾನತು ಬೆನ್ನಲ್ಲೇ ಪ್ರವೀಣ್​ ಜೊತೆ ಈ ಬಗ್ಗೆ ಚರ್ಚಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಕಾನೂನುಬಾಹಿರ ಮತ್ತು ಅಕ್ರಮ ಅಮಾನತನ್ನು ಪ್ರಶ್ನಿಸಲು ನಾನು ವೈಯಕ್ತಿಕವಾಗಿ ಸಂಬಂಧಪಟ್ಟ ನ್ಯಾಯಾಧಿಕರಣ ಮತ್ತು ನ್ಯಾಯಾಲಯಗಳ ಮುಂದೆ ಹಾಜರಾಗುತ್ತೇನೆ ಎಂದು ಅವರಿಗೆ ಭರವಸೆ ನೀಡಿದ್ದರು.  ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸರ್ಕಾರಿ ನೌಕರರ ಹಕ್ಕನ್ನು ಎತ್ತಿಹಿಡಿದಿರುವ ಹೈಕೋರ್ಟ್‌ಗಳ ಅನೇಕ ತೀರ್ಪುಗಳಿವೆ. ಈ ಅಕ್ರಮ ಅಮಾನತು ರದ್ದಾಗುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಅಂದು ಕೊಟ್ಟ ಮಾತಿನಂತೆ ಸಂಸದರು ಪ್ರವೀಣ್​ಗೆ ಕಾನೂನುಹೋರಾಟದಲ್ಲಿ ನೆರವಾಗಿದ್ದು, ಸರ್ಕಾರದ ಆದೇಶಕ್ಕೀಗ ಕೆಎಸ್‌ಎಟಿ ತಡೆ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:15 pm, Thu, 30 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ