AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ವಿದ್ಯಾರ್ಥಿನಿಯರಿಗೆ ಸ್ಕರ್ಟ್​​​ ಬದಲು ಪ್ಯಾಂಟ್ ಅಥವಾ ಚೂಡಿದಾರ ಸಮವಸ್ತ್ರ: ಕೆಎಸ್​​ಸಿಪಿಸಿಆರ್​ ಪ್ರಸ್ತಾವನೆ

ಭದ್ರತೆ ಮತ್ತು ಹಿತದೃಷ್ಟಿಯಿಂದ​ 1 ರಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿನಿಯರಿಗೆ ಸ್ಕರ್ಟ್​​​ ಬದಲು ಪ್ಯಾಂಟ್ ಅಥವಾ ಚೂಡಿದಾರ (ಸಲ್ವಾರ್ ಸೂಟ್‌) ಸಮವಸ್ತ್ರ ಕಡ್ಡಾಯಗೊಳಿಸಿ ನೀಡಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿದೆ.

ಶಾಲಾ ವಿದ್ಯಾರ್ಥಿನಿಯರಿಗೆ ಸ್ಕರ್ಟ್​​​ ಬದಲು ಪ್ಯಾಂಟ್ ಅಥವಾ ಚೂಡಿದಾರ ಸಮವಸ್ತ್ರ: ಕೆಎಸ್​​ಸಿಪಿಸಿಆರ್​ ಪ್ರಸ್ತಾವನೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Jun 07, 2023 | 3:43 PM

ಬೆಂಗಳೂರು: ಭದ್ರತೆ ಮತ್ತು ಹಿತದೃಷ್ಟಿಯಿಂದ​ 1 ರಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿನಿಯರಿಗೆ ಸ್ಕರ್ಟ್​​​ ಬದಲು ಪ್ಯಾಂಟ್ ಅಥವಾ ಚೂಡಿದಾರ (ಸಲ್ವಾರ್ ಸೂಟ್‌) ಸಮವಸ್ತ್ರ ಕಡ್ಡಾಯಗೊಳಿಸಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಸಾಧ್ಯವಾದರೆ ಶಾಲೆಗಳಲ್ಲಿ ಸೂಚಿಸಲಾದ ಸಮವಸ್ತ್ರದ ನಿಯಮಗಳು ಮತ್ತು ನಿಬಂಧನೆಗಳನ್ನು ಮರುಪರಿಶೀಲಿಸಿ ಮತ್ತು ಬಾಲಕಿಯರ ಒಟ್ಟಾರೆ ಅಭಿವೃದ್ಧಿಗಾಗಿ ಸಮವಸ್ತ್ರದ ನಿಯಮಗಳಲ್ಲಿ ಮಾರ್ಪಾಡು ಮಾಡಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಹೇಳಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ, 1983 ರ ಪ್ರಕಾರ, ಶೈಕ್ಷಣಿಕ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಶಿಫಾರಸು ಮಾಡಲು ಸ್ವತಂತ್ರವಾಗಿವೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಗಂಡುಮಕ್ಕಳಿಗೆ ಶರ್ಟ್, ಚಡ್ಡಿ (ಶಾರ್ಟ್ಸ್) ಅಥವಾ ಪ್ಯಾಂಟ್‌ಗಳನ್ನು ಸೂಚಿಸಿದರೆ, ಹೆಚ್ಚಿನ ಖಾಸಗಿ ಶಾಲಾ ಆಡಳಿತಗಳು ಹುಡುಗಿಯರಿಗೆ ಸ್ಕರ್ಟ್‌ಗಳನ್ನು ಸೂಚಿಸಿದೆ.

ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಚೂಡಿದಾರಗಳನ್ನು ಧರಿಸುವುದು ಕಡ್ಡಾಯವಾಗಿದೆ. ಎಲ್ಲಾ ಸರಕಾರಿ, ಅನುದಾನಿತ ಮತ್ತು ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಧರಿಸುವುದು ಸಮವಸ್ತ್ರದ ಒಂದು ಭಾಗವಾಗಿದೆ. ಆದರೆ ಅವರು ಬಸ್‌ಗಳಲ್ಲಿ ಪ್ರಯಾಣಿಸುವಾಗ, ಜನಸಂದಣಿಯಲ್ಲಿ ನಡೆಯುವಾಗ, ಸೈಕಲ್ ತುಳಿಯುವಾಗ ಮತ್ತು ಮೈದಾನದಲ್ಲಿ ಆಟವಾಡುವಾಗ ಅನಾನುಕೂಲತೆಯನ್ನು ಅನುಭವಿಸುತ್ತಾರೆ. ಈ ಬಗ್ಗೆ ಅವರು ನಮಗೆ ದೂರು ನೀಡಿದ್ದಾರೆ. ಹುಡುಗಿಯರ ಮೇಲೆ ಹಲವಾರು ರೀತಿಯ ಲೈಂಗಿಕ ಕಿರುಕುಳ ಪ್ರಕರಣಗಳನ್ನು ನಾವು ನೋಡಬಹುದು. ಆದ್ದರಿಂದ, ಭದ್ರತೆ ಮತ್ತು ಹಿತದೃಷ್ಟಿಯಿಂದ ವಿದ್ಯಾರ್ಥಿನಿಯರು ಸ್ಕರ್ಟ್‌ಗಳ ಬದಲಿಗೆ ಪ್ಯಾಂಟ್ ಮತ್ತು ಚೂಡಿದಾರಗಳನ್ನು ಧರಿಸುವುದು ಉತ್ತಮ. ಇದು ಸಾರ್ವಜನಿಕ ಅಭಿಪ್ರಾಯವೂ ಹೌದು ಎಂದು ಕಲಬುರಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಕೆಎಸ್‌ಸಿಪಿಸಿಆರ್‌ಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Chitradurga Anganwadi Centre: ಚಿಣ್ಣರನ್ನು ಸೆಳೆಯುತ್ತಿದೆ ಮಾದರಿ ಅಂಗನವಾಡಿ ಕೇಂದ್ರ, ಖಾಸಗಿ ಶಾಲೆಗಳಿಗೇ ಸೆಡ್ಡು

ಇದೇ ಪ್ರಸ್ತಾವನೆಯನ್ನು ಕೆಎಸ್‌ಸಿಪಿಸಿಆರ್‌ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಡಿಎಸ್‌ಇಎಲ್‌ಗೆ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ವಿದ್ಯಾರ್ಥಿನಿಯರು ಕುಳಿತುಕೊಳ್ಳುವಾಗ, ಆಡುವಾಗ, ಸೈಕಲ್ ತುಳಿಯುವಾಗ ಮತ್ತು ಇತರ ಚಟುವಟಿಕೆಗಳಲ್ಲಿ ಸ್ಕರ್ಟ್ ಅಹಿತಕರವಾಗಿರುತ್ತದೆ. ಹದಿಹರೆಯದ ಗರ್ಭಧಾರಣೆ, ಹೆಣ್ಣುಮಕ್ಕಳ ಲೈಂಗಿಕ ಕಿರುಕುಳದ ವಿವಿಧ ಪ್ರಕರಣಗಳನ್ನು ನಾವು ಶಾಲೆಯಲ್ಲಿ ಮತ್ತು ಅದರ ಹೊರಗೆ ನೋಡಬಹುದು. ಆದ್ದರಿಂದ, ನಾವು ಈ ವಿಷಯದ ಬಗ್ಗೆ ವಿದ್ಯಾರ್ಥಿನಿಯರ ಅಭಿಪ್ರಾಯವನ್ನು ಸಂಗ್ರಹಿಸಿದ್ದೇವೆ. ಸ್ಕರ್ಟ್​​​​ಗಿಂತ ಪ್ಯಾಂಟ್ ಅಥವಾ ಚೂಡಿದಾರ ಧರಿಸುವುದು ಉತ್ತಮ ಎಂಬ ಅಭಿಪ್ರಾಯವನ್ನು ಹೆಚ್ಚಿನ ವಿದ್ಯಾರ್ಥಿನಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದ್ದರಿಂದ, ನಾವು ಡಿಎಸ್‌ಇಎಲ್‌ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ ಮತ್ತು ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ ಎಂದು ಕೆಎಸ್‌ಸಿಪಿಸಿಆರ್‌ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದ್ದಾರೆ.

ಬೆಂಗಳೂರಿನ ಎಲೈಟ್ ಖಾಸಗಿ ಶಾಲೆಯ ವಿದ್ಯಾರ್ಥಿಯೊಬ್ಬರು ಮಾತನಾಡಿ ಶಾಲೆಯಲ್ಲಿ ಸ್ಕರ್ಟ್ ಧರಿಸಲು ನಮಗೆ ಯಾವುದೇ ತೊಂದರೆ ಇಲ್ಲ. ಇದು ಅಹಿತಕರವೆಂದು ನಾವು ಎಂದಿಗೂ ಯೋಚಿಸುವುದಿಲ್ಲ. ನಾವು ಆಡುವಾಗ, ನಾವು ಕ್ರೀಡಾ ಉಡುಗೆ ಧರಿಸುತ್ತೇವೆ. ಹುಡುಗಿಯರಿಗೆ ಕಿರುಕುಳ ನೀಡಲು ಸ್ಕರ್ಟ್ ಧರಿಸುವುದು ಮಾತ್ರ ಕಾರಣ ಎಂದು ನಾನು ಭಾವಿಸುವುದಿಲ್ಲ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಾಲೆಯ ಬಾಲಕಿಯೊಬ್ಬರು ಮಾತನಾಡಿ ಸರ್ಕಾರವು ನಮಗೆ ಸಮವಸ್ತ್ರವಾಗಿ ಚೂಡಿದಾರಗಳನ್ನು ನೀಡುತ್ತಿದೆ ಮತ್ತು ಧರಿಸಲು ತುಂಬಾ ಆರಾಮದಾಯಕವಾಗಿದೆ. ಹದಿಹರೆಯದ ಹುಡುಗಿಯಾಗಿ, ಸುರಕ್ಷತೆ ಮತ್ತು ರಕ್ಷಣೆ ಪ್ರಮುಖ ಅಂಶಗಳಾಗಿವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Wed, 7 June 23

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ