KSEEB Result 2022: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ಸಂಪೂರ್ಣ ವಿವರ
KSEEB Result 2022: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ ಮೇ 19 ಗುರುವಾರ ಪ್ರಕಟವಾಗಿದೆ. ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದಾರೆ.
2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ ಮೇ 19 ಗುರುವಾರ ಪ್ರಕಟವಾಗಿದೆ. ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.85.63 ರಷ್ಟು ಫಲಿತಾಂಶ ಬಂದಿದೆ. ವಾಡಿಕೆಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇ. 90.29ರಷ್ಟು ಹೆಣ್ಣುಮಕ್ಕಳು ಉತ್ತೀರ್ಣರಾಗಿದ್ದಾರೆ.
8,20,900 ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ನಗರಕ್ಕಿಂತ ಗ್ರಾಮೀಣ ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.ಎಂದಿನಂತೆ ಗ್ರಾಮೀಣ ವಿದ್ಯಾರ್ಥಿಗಳೇ ಉತ್ತಮ ಸಾಧನೆ ಮಾಡಿದ್ದಾರೆ. ನಗರ ಭಾಗದಲ್ಲಿ ಶೇ.86.64 ಫಲಿತಾಂಶ ದಾಖಲಾದರೆ ಗ್ರಾಮೀಣ ಭಾಗದಲ್ಲಿ ಶೇ.91.32 ರಷ್ಟು ಫಲಿತಾಂಶ ಪ್ರಕಟವಾಗಿದೆ.
Out of Out ಅಂಕ ಪಡೆದ ವಿದ್ಯಾರ್ಥಿಗಳು: * ಪ್ರಥಮ ಭಾಷೆ ಕನ್ನಡ- 125ಕ್ಕೆ 125 ಅಂಕ ಪಡೆದಿದ್ದ ವಿದ್ಯಾರ್ಥಿಗಳು 19,125 * ದ್ವಿತೀಯ ಭಾಷೆ 100ಕ್ಕೆ 100 ಮಾರ್ಕ್ಸ್ ಅನ್ನು- 13,425 ವಿದ್ಯಾರ್ಥಿಗಳು ಪಡೆದುಕೊಂಡಿದ್ದರು. * ತೃತೀಯ ಭಾಷೆ100ಕ್ಕೆ 100 ಅಂಕ ಪಡೆದಿದ್ದವರು 43,126 ವಿದ್ಯಾರ್ಥಿಗಳು * ಗಣಿತದಲ್ಲಿ 100ಕ್ಕೆ ನೂರು ಅಂಕವನ್ನು 13,683 ವಿದ್ಯಾರ್ಥಿಗಳು ಪಡೆದಿದ್ದರು * ವಿಜ್ಞಾನ- 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆ 6,592 * ಸಮಾಜ ವಿಜ್ಞಾನ100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆ 50,782
ವಿದ್ಯಾರ್ಥಿನಿಯರೇ ಮೇಲುಗೈ ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ.625ಕ್ಕೆ 625 ಅಂಕಗಳನ್ನು 125 ಮಕ್ಕಳು ಗಳಿಸಿದ್ದಾರೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಫಲಿತಾಂಶ ವಿದ್ಯಾರ್ಥಿಗಳಿಗೆ ಸಿಕ್ಕಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಗ್ರೇಡ್ ಮಾದರಿ: ಇದುವರೆಗೆ ಎಸ್ ಎಸ್ ಎಲ್ ಸಿಯಲ್ಲಿ ಮೊದಲ, ದ್ವಿತೀಯ ಮತ್ತು ತೃತೀಯ ಜಿಲ್ಲೆಗಳೆಂದು ಫಲಿತಾಂಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಪ್ರೌಢ ಶಿಕ್ಷಣ ಇಲಾಖೆ ಗ್ರೇಡ್ ಮಾದರಿಯಲ್ಲಿ ಫಲಿತಾಂಶ ನೀಡಿದೆ.
ಎಷ್ಟು ಶಾಲೆಗಳಲ್ಲಿ ಶೂನ್ಯ ಫಲಿತಾಂಶ 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದ್ದು, 3,920 ಶಾಲೆಗಳು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ. ರ‍್ಯಾಂಕ್ ಪದ್ದತಿ ಕೈ ಬಿಟ್ಟ ಇಲಾಖೆ ಈ ಬಾರಿ ಗ್ರೇಡ್ ವ್ಯವಸ್ಥೆಯಲ್ಲಿ ಫಲಿತಾಂಶ ಘೋಷಣೆ ಮಾಡಿದೆ. ಬೆಂಗಳೂರು ದಕ್ಷಿಣ ಮತ್ತು ಯಾದಗಿರಿ ಜಿಲ್ಲೆಗೆ ಬಿ ಗ್ರೇಡ್ ಸಿಕ್ಕಿದರೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಎ ಗ್ರೇಡ್ ಸಿಕ್ಕಿದೆ.
ಪರೀಕ್ಷೆ ಬರೆದ ವಿದ್ಯಾರ್ಥಿಗಳೆಷ್ಟು? ರಾಜ್ಯದ ಒಟ್ಟು 15,387 ಶಾಲೆಗಳ 8,53,436 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು 8,73,884 ವಿಧ್ಯಾರ್ಥಿಗಳಲ್ಲಿ 7,30,881 ಲಕ್ಷ ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 3,72,279 ಲಕ್ಷ ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದು, 3,58,602 ಲಕ್ಷ ಗಂಡು ಮಕ್ಕಳು ಉತ್ತೀರ್ಣರಾಗಿದ್ದಾರೆ. 40,061 ಮಕ್ಕಳು ಗ್ರೇಸ್ ಮಾರ್ಕ್ಸ್ ಪಡೆದು ಪಾಸ್ ಆಗಿದ್ದಾರೆ.
ಪೂರಕ ಪರೀಕ್ಷೆ: ಜೂನ್ 27 ರಿಂದ ಜುಲೈ 4 ವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಪಡೆಯಲು ಮೇ 30ರವರೆಗೆ ಅವಕಾಶವಿದೆ. ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನಾಂಕವಾಗಿದೆ.
ಫಲಿತಾಂಶ ವೀಕ್ಷಿಸುವುದು ಹೇಗೆ?: ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ಲಭ್ಯವಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. 2021ರಲ್ಲಿ ಶೇ. 99.9 ಫಲಿತಾಂಶ ಬಂದಿತ್ತು: ಕಳೆದ ವರ್ಷ (2021ರಲ್ಲಿ) ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರಾಜ್ಯದ ಇತಿಹಾಸದಲ್ಲಿಯೇ ಹೊಸ ರೀತಿಯದ್ದಾಗಿತ್ತು. ಕೋವಿಡ್ ಸವಾಲಿನ ಸಮಯದಲ್ಲಿ ಸರಳ ಮಾದರಿಯ ಪರೀಕ್ಷೆ ನಡೆಸಲಾಗಿತ್ತು. ಕೇವಲ ಎರಡೇ ದಿನ ಪರೀಕ್ಷೆ ನಡೆದಿತ್ತು.
ಪರೀಕ್ಷೆ ಬರೆದ ಎಲ್ಲರನ್ನೂ ಪಾಸ್ ಮಾಡುವುದಾಗಿ ಮೊದಲೇ ಸರ್ಕಾರ ತೀರ್ಮಾನ ಕೂಡ ಮಾಡಿತ್ತು. ಅದರಂತೆ, ಒಬ್ಬ ವಿದ್ಯಾರ್ಥಿ ಹೊರತು ಪಡಿಸಿ ಎಲ್ಲರನ್ನು ಪಾಸ್ ಮಾಡಲಾಗಿತ್ತು. ಶೇ. 99.9 ಫಲಿತಾಂಶ ಕೂಡ ಬಂದಿತ್ತು. ತಾನು ಪರೀಕ್ಷೆ ಬರೆಯುವ ಬದಲು ಬೇರೆಯುವರು ಪರೀಕ್ಷೆ ಬರೆದ ಕಾರಣ ಒಬ್ಬ ವಿದ್ಯಾರ್ಥಿಯನ್ನು ಫೇಲು ಮಾಡಲಾಗಿತ್ತು.
ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ರಾಜ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ