AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯಕ ಪ್ರಾದ್ಯಪಕ ಹುದ್ದೆಯ ಪರೀಕ್ಷೆ ಕಲಬುರಗಿಯಿಂದ ಬೆಂಗಳೂರಿಗೆ ಸ್ಥಳಾಂತರ: ಸರಣಿ ಅಕ್ರಮವೇ ಕಾರಣ

ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ ಕಲಬುರಗಿಯ ಬದಲು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕೆಇಎ ತಿಳಿಸಿದೆ. ಕಲಬುರಗಿ ಮಾತ್ರವಲ್ಲದೆ, ವಿಜಯಪುರ ಜಿಲ್ಲೆಯಲ್ಲಿ ನಡೆಯಬೇಕಿರುವ ಪರೀಕ್ಷೆಗಳನ್ನೂ ಸ್ಥಳಾಂತರಿಸಲಾಗಿದೆ.

ಸಹಾಯಕ ಪ್ರಾದ್ಯಪಕ ಹುದ್ದೆಯ ಪರೀಕ್ಷೆ ಕಲಬುರಗಿಯಿಂದ ಬೆಂಗಳೂರಿಗೆ ಸ್ಥಳಾಂತರ: ಸರಣಿ ಅಕ್ರಮವೇ ಕಾರಣ
ಪ್ರಾತಿನಿಧಿಕ ಚಿತ್ರ
TV9 Web
| Updated By: Ganapathi Sharma|

Updated on: Dec 14, 2023 | 1:09 PM

Share

ಕಲಬುರಗಿ, ಡಿಸೆಂಬರ್ 14: ಪರೀಕ್ಷೆಗೆ ಸಂಬಂಧಿಸಿದ ಸರಣಿ ಅಕ್ರಮಗಳ ಬೆನ್ನಲ್ಲೇ ಕಲಬುರಗಿಯಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗದು ಎಂಬ ನಿರ್ಧಾರಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಂದಂತಿದೆ. ಹೀಗಾಗಿ ಕಲಬುರಗಿಯಿಂದ ನೇಮಕಾತಿ ಪರೀಕ್ಷೆಯನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.

ಕಲಬುರಗಿಯಲ್ಲಿ ಪರೀಕ್ಷೆ ನಡೆಸಿದರೆ ಅಕ್ರಮ ನಡೆಯಬಹುದೆಂಬ ಆತಂಕದಿಂದ ಪಿಎಸ್ಐ ಮರು ಪರೀಕ್ಷೆಯನ್ನು ಬೆಂಗಳೂರಿನಲ್ಲಿ ನಡೆಸಲು ಇತ್ತೀಚೆಗೆ ತೀರ್ಮಾನಿಸಲಾಗಿತ್ತು. ಇದೀಗ ಸಹಾಯಕ ಪ್ರಾಧ್ಯಾಪಕ ಹುದ್ದೆಯ ಪರೀಕ್ಷೆಗೆ ಕಲಬುರಗಿ ಸೆಂಟರ್ ಅನ್ನು ಬದಲಾಯಿಸಿ ಬೆಂಗಳೂರಿನಲ್ಲಿ ನಿಗದಿಪಡಿಸಲಾಗಿದೆ.

ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ ಕಲಬುರಗಿಯ ಬದಲು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕೆಇಎ ತಿಳಿಸಿದೆ. ಕಲಬುರಗಿ ಮಾತ್ರವಲ್ಲದೆ, ವಿಜಯಪುರ ಜಿಲ್ಲೆಯಲ್ಲಿ ನಡೆಯಬೇಕಿರುವ ಪರೀಕ್ಷೆಗಳನ್ನೂ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಮಕ್ಕಳಿಗೆ ಊಟ ಸಿದ್ಧ

ಕಲಬುರಗಿಯಲ್ಲಿ ನಡೆಯಬೇಕಿರುವ ಪರೀಕ್ಷೆಗಳು ಬೆಂಗಳೂರಿಗೆ ಸ್ಥಳಾಂತರವಾದರೆ, ವಿಜಯಪುರದಿಂದ ತುಮಕೂರಿಗೆ ಸ್ಥಳಾಂತರ ಮಾಡಲಾಗಿದೆ.

ಡಿಸೆಂಬರ್ 31 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಜನವರಿ 13 ಕ್ಕೆ ಮುಂದೂಡಲಾಗಿದೆ. ಕೆ-ಸೆಟ್‌ಗೆ ಕಲ್ಯಾಣ ಕರ್ನಾಟಕ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ