AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSMC Recruitment 2026: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್‌ನಲ್ಲಿ ಉದ್ಯೋಗವಕಾಶ; ಲಿಖಿತ ಪರೀಕ್ಷೆಯಿಲ್ಲದೇ ನೇರ ನೇಮಕಾತಿ!

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ (KSMC) 50 ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ, ಜುಲೈ 29 ರಿಂದ 31 ರ ವರೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಇದು 11 ತಿಂಗಳ ಗುತ್ತಿಗೆ ಆಧಾರಿತವಾಗಿದ್ದು, ಮಾಸಿಕ ರೂ. 18,350 ರಿಂದ ರೂ. 50,000 ಗೌರವಧನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು KSMC ವೆಬ್‌ಸೈಟ್‌ನಿಂದ ಅರ್ಜಿ ಡೌನ್‌ಲೋಡ್ ಮಾಡಿ ಹಾಜರಾಗಬೇಕು.

KSMC Recruitment 2026: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್‌ನಲ್ಲಿ ಉದ್ಯೋಗವಕಾಶ; ಲಿಖಿತ ಪರೀಕ್ಷೆಯಿಲ್ಲದೇ ನೇರ ನೇಮಕಾತಿ!
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್‌
ಅಕ್ಷತಾ ವರ್ಕಾಡಿ
|

Updated on: Jul 18, 2026 | 3:57 PM

Share

ಮುಖ್ಯಾಂಶಗಳು

  • ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್​​ನಲ್ಲಿ ನೇಮಕಾತಿ
  • 50 ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಜುಲೈ 29 ರಿಂದ 31 ರ ವರೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಉದ್ಯಮವಾದ ‘ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್’ (KSMC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಬಂಪರ್ ಅವಕಾಶ ನೀಡಿದೆ. ಕರ್ನಾಟಕದಾದ್ಯಂತ ಇರುವ ತನ್ನ ವಿವಿಧ ಗಣಿಗಳು ಮತ್ತು ಘಟಕಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಉದ್ಯೋಗ ಆಕಾಂಕ್ಷಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಬದಲಿಗೆ ನೇರ ಸಂದರ್ಶನದ (Walk-in Interview) ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

11 ತಿಂಗಳ ಗುತ್ತಿಗೆ ಆಧಾರದ ನೇಮಕಾತಿ ಮತ್ತು ಸಂಬಳ:

ಈ ನೇಮಕಾತಿಯು ಸಂಪೂರ್ಣವಾಗಿ 11 ತಿಂಗಳ ತಾತ್ಕಾಲಿಕ ಗುತ್ತಿಗೆ ಆಧಾರದ ನಡೆಯಲಿದೆ. ಒಟ್ಟು 50 ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ. 18,350 ರಿಂದ ಹಿಡಿದು ಗರಿಷ್ಠ ರೂ. 50,000 ವರೆಗೆ ಆಕರ್ಷಕ ಗೌರವಧನ (ಸಂಭಾವನೆ) ನೀಡಲಾಗುತ್ತದೆ.

ಜುಲೈ 29 ರಿಂದ ನೇರ ಸಂದರ್ಶನ ಆರಂಭ:

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 2026ರ ಜುಲೈ 29 ರಿಂದ ಜುಲೈ 31ರ ವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಲ್ಲಾ ದಿನಗಳ ಸಂದರ್ಶನಗಳು ನಿಖರವಾಗಿ ಬೆಳಿಗ್ಗೆ 10:30 ಗಂಟೆಗೆ ಪ್ರಾರಂಭವಾಗಲಿವೆ.

ಇದನ್ನೂ ಓದಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ; 253 ಪಿಎಸ್‌ಐ ಹುದ್ದೆಗೆ ನೇರ ನೇಮಕಾತಿ!

ಸಂದರ್ಶನಕ್ಕೆ ಹಾಜರಾಗುವುದು ಹೇಗೆ? ಮತ್ತು ಬೇಕಾಗುವ ದಾಖಲೆಗಳು:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಸರಿಯಾಗಿ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು KSMC ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅದನ್ನು ಸಂಪೂರ್ಣವಾಗಿ ಭರ್ತಿ ಮಾಡಿ ತರಬೇಕಿರುತ್ತದೆ. ಸಂದರ್ಶನದ ವೇಳೆ ತಮ್ಮ ಎಲ್ಲಾ ಸಂಬಂಧಿತ ಮೂಲ ಶೈಕ್ಷಣಿಕ ದಾಖಲೆಗಳು (Original Documents) ಹಾಗೂ ಅವುಗಳ ನಕಲು ಪ್ರತಿಗಳನ್ನು (Xerox Copies) ತರುವುದು ಕಡ್ಡಾಯವಾಗಿದೆ.

ಸಂದರ್ಶನ ನಡೆಯುವ ಸ್ಥಳ ಮತ್ತು ಅಧಿಕೃತ ವೆಬ್‌ಸೈಟ್ ಮಾಹಿತಿ:

ನೇರ ಸಂದರ್ಶನವು ಬೆಂಗಳೂರಿನ ಶಾಂತಿನಗರದಲ್ಲಿರುವ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.

  • ವಿಳಾಸ: ಪ್ರಧಾನ ಕಚೇರಿ, ಟಿ.ಟಿ.ಎಂ.ಸಿ. ‘ಎ’ ಬ್ಲಾಕ್, 5ನೇ ಮಹಡಿ, ಬಿ.ಎಂ.ಟಿ.ಸಿ. ಬಿಲ್ಡಂಗ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು – 560 027.
  • ಅಭ್ಯರ್ಥಿಗಳಿಗೆ ಅಗತ್ಯವಿರುವ ಶೈಕ್ಷಣಿಕ ವಿದ್ಯಾರ್ಹತೆ, ನಿಖರ ವಯೋಮಿತಿ, ಕೆಲಸದ ಅನುಭವ ಹಾಗೂ ಅಧಿಕೃತ ಅರ್ಜಿ ನಮೂನೆಯನ್ನು ಪಡೆಯಲು ಇಲಾಖೆಯ ಅಧಿಕೃತ ವೆಬ್‌ಸೈಟ್ ಆದ ksmc.karnataka.gov.in ಗೆ ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ