AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಉದ್ಯೋಗವಕಾಶ; ಚಾಮರಾಜನಗರದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ!

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ (KSRLPS) ಚಾಮರಾಜನಗರ ಜಿಲ್ಲೆಯಲ್ಲಿ 8 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪದವಿ, ಬಿ.ಎಸ್ಸಿ/ಎಂ.ಎಸ್ಸಿ ಪದವೀಧರರಿಗೆ ಇದೊಂದು ಉತ್ತಮ ಅವಕಾಶ. ಯಾವುದೇ ಅರ್ಜಿ ಶುಲ್ಕವಿಲ್ಲ, ನೇರ ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ. ಆಸಕ್ತರು ಆಗಸ್ಟ್ 31ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಉದ್ಯೋಗವಕಾಶ; ಚಾಮರಾಜನಗರದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ!
KSRLPS ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Aug 19, 2026 | 4:02 PM

Share

ಕರ್ನಾಟಕ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ‘ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ’ (KSRLPS) ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸರ್ಕಾರಿ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ:

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು ಒಟ್ಟು 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಇದರಲ್ಲಿ 7 ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 18,000ರೂ. ವೇತನ ಸಿಗಲಿದೆ. ಹಾಗೆಯೇ 1 ಜಿಲ್ಲಾ ವ್ಯವಸ್ಥಾಪಕ ಹುದ್ದೆಯಿದ್ದು, ಮಾಸಿಕ 30,000 ರೂ. ಸಂಭಾವನೆ ನಿಗದಿಪಡಿಸಲಾಗಿದೆ. ಈ ಎಲ್ಲಾ ಹುದ್ದೆಗಳ ಉದ್ಯೋಗ ಸ್ಥಳ ಚಾಮರಾಜನಗರವಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಕ್ಲಸ್ಟರ್ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Graduation) ಪೂರ್ಣಗೊಳಿಸಿರಬೇಕು. ಜಿಲ್ಲಾ ವ್ಯವಸ್ಥಾಪಕ ಹುದ್ದೆಗೆ ಬಿ.ಎಸ್ಸಿ (B.Sc) ಅಥವಾ ಎಂ.ಎಸ್ಸಿ (M.Sc) ಪದವಿ ಅರ್ಹತೆ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 50 ವರ್ಷ ವಯೋಮಿತಿ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ, ಎಲ್ಲಾ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರ ಸಂದರ್ಶನದ (Interview) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಭರ್ತಿ ಮಾಡುವ ಮೊದಲು ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಶೈಕ್ಷಣಿಕ ದಾಖಲೆಗಳು, ಆಧಾರ್ ಕಾರ್ಡ್, ರೆಸ್ಯೂಮ್ ಮತ್ತು ಫೋಟೋ ಸಿದ್ಧವಿಟ್ಟುಕೊಳ್ಳಬೇಕು. ಅಧಿಕೃತ ಲಿಂಕ್(ksrlps.karnataka.gov.in) ಬಳಸಿ ಆನ್‌ಲೈನ್ ಫಾರ್ಮ್‌ನಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು 31 ಆಗಸ್ಟ್ ಕೊನೆಯ ದಿನಾಂಕವಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More