ಎಲೆಕ್ಷನ್‌ ಡ್ಯೂಟಿಗೆ ಹೋಗುತ್ತಿದ್ದಾಗ ಅಪಘಾತ; ಕರ್ನಾಟಕ ಪೊಲೀಸ್‌ ಸೇರಿ ಇಬ್ಬರ ಸಾವು

ತಮಿಳುನಾಡಿನಲ್ಲಿ ಬಸ್ ಹಾಗೂ ಪೊಲೀಸ್ ಜೀಪ್ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಓರ್ವ ಕೆಎಸ್ ಆರ್ ಪಿಯ ಹಿರಿಯ ಅಧಿಕಾರಿ ಹಾಗೂ ತಮಿಳುನಾಡಿನ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ತಮಿಳುನಾಡು ಪೊಲೀಸ್ ಸಿಬ್ಬಂದಿ ಸಹಿತ ಮೂವರಿಗೆ ಗಾಯಗಳಾಗಿವೆ.

ಎಲೆಕ್ಷನ್‌ ಡ್ಯೂಟಿಗೆ ಹೋಗುತ್ತಿದ್ದಾಗ ಅಪಘಾತ; ಕರ್ನಾಟಕ ಪೊಲೀಸ್‌ ಸೇರಿ ಇಬ್ಬರ ಸಾವು
Follow us
| Updated By: ರಮೇಶ್ ಬಿ. ಜವಳಗೇರಾ

Updated on: Apr 11, 2024 | 9:38 PM

ಬೆಂಗಳೂರು, (ಏಪ್ರಿಲ್ 11): ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಐವರು ಪೊಲೀಸ್‌ ಅಧಿಕಾರಿಗಳು ಹೋಗುತ್ತಿದ್ದ ಜೀಪ್‌ ಮತ್ತು ಬಸ್‌ ನಡುವೆ ಅಪಘಾತ (Road Accident) ಸಂಭವಿಸಿದೆ. ತಮಿಳುನಾಡಿನ ಕಿಲ್ಪೆನ್ನತುರ್ ಠಾಣಾ ವ್ಯಾಪ್ತಿಯ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಕರ್ನಾಟಕದ ಅಧಿಕಾರಿ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಕರ್ನಾಟಕದಿಂದ ಎಲೆಕ್ಷನ್ ಡ್ಯೂಟಿಗೆ ಹೋಗಿದ್ದ ಪೊಲೀಸ್ ಅಧಿಕಾರಿ, KSRP ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕರ್ ಹಾಗೂ ತಮಿಳುನಾಡು ಕಾನ್ಸ್‌ಟೇಬಲ್ ದಿನೇಶ್ ಮೃತಪಟ್ಟಿದ್ದಾರೆ.

ಇಂದು (ಏಪ್ರಿಲ್ 11) ಸಂಜೆ ನಾಲ್ಕು ಗಂಟೆ ಸುಮಾರಿಗೆ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಇಬ್ಬರ ಮೃತದೇಹಗಳನ್ನು ತಮಿಳುನಾಡಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕರ್ನಾಟಕ ಪೊಲೀಸರಿಗೆ ಹಸ್ತಾಂತರ ಮಾಡಲಾಗುವುದು. ಮೃತಪಟ್ಟಿರುವ ಬಗ್ಗೆ ಪ್ರಭಾಕರ್ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Bike Accident: ಬೆಂಗಳೂರಿನಲ್ಲಿ ಕಾಂಗ್ರೆಸ್​ ಶಾಸಕ ಪುತ್ರನ ಬೈಕ್ ಅಪಘಾತ

ಅಪಘಾತದ ರಭಸಕ್ಕೆ ಜೀಪ್‌ ಛಿದ್ರವಾಗಿದ್ದು, ಬಸ್‌ನ ಮುಂಭಾಗ ಸಹ  ಜಖಂ ಆಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಹೇಮಂತ್ ಕುಮಾರ್ (ಡೆಪ್ಯೂಟಿ ಕಮಾಂಡರ್), ವಿಟ್ಠಲ್ ಗಡಾದರ್ (ಹೆಡ್ ಕಾನ್ಸ್‌ಟೇಬಲ್), ಜಯಕುಮಾರ್ (ಕಾನ್ಸ್‌ಟೇಬಲ್) ಮೂವರನ್ನು ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ