AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್‌ಆರ್‌ಪಿ 2,314 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಯಶಸ್ವಿ: ಶೇ. 80ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರು!

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಒಟ್ಟು 2,314 ಹುದ್ದೆಗಳಿಗಾಗಿ ನಡೆದ ಪರೀಕ್ಷೆಯಲ್ಲಿ ಶೇ. 78-85 ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷಾ ಪ್ರಕ್ರಿಯೆಯ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಮಾಂಡ್ ಸೆಂಟರ್ ಮೂಲಕ ಕಟ್ಟುನಿಟ್ಟಿನ ನಿಗಾ ವಹಿಸಿ, ಲೋಪಗಳನ್ನು ತಡೆಗಟ್ಟಲಾಗಿದೆ.

ಕೆಎಸ್‌ಆರ್‌ಪಿ 2,314 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಯಶಸ್ವಿ: ಶೇ. 80ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರು!
ಕೆಎಸ್‌ಆರ್‌ಪಿ ನೇಮಕಾತಿ ಪರೀಕ್ಷೆImage Credit source: x/KEA_karnataka
ಗಂಗಾಧರ​ ಬ. ಸಾಬೋಜಿ
|

Updated on: Sep 20, 2026 | 6:23 PM

Share

ಬೆಂಗಳೂರು, ಸೆಪ್ಟೆಂಬರ್​​ 20: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್​​ಆರ್​​ಪಿ) ಪಡೆಯ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಭಾನುವಾರ ನಡೆದ ಲಿಖಿತ ಪರೀಕ್ಷೆಯು ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಮಿಕ್ಕುಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದಗಳ ಒಟ್ಟು 2,314 ಹುದ್ದೆಗಳಿಗಾಗಿ ಈ ನೇಮಕಾತಿ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೆ ಅಭ್ಯರ್ಥಿಗಳು ಹಾಜರು

ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದಾರೆ. ಮಿಕ್ಕುಳಿಕೆ ವೃಂದದ ಒಟ್ಟು 1,42,912 ಅಭ್ಯರ್ಥಿಗಳ ಪೈಕಿ 1,12,125 ಅಂದರೆ ಶೇ. 78 ರಷ್ಟು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದೇ ರೀತಿ, ಕಲ್ಯಾಣ ಕರ್ನಾಟಕ ವೃಂದದ 38,332 ಪೈಕಿ 32,694 ಅಂದರೆ ಶೇ. 85 ರಷ್ಟು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಟ್ವೀಟ್​​

ರಾಜಧಾನಿ ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳ ಒಟ್ಟು 333 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಮಿಕ್ಕುಳಿದ ವೃಂದದ ಪರೀಕ್ಷೆಯು ಬೆಳಿಗ್ಗೆ 10:30ಕ್ಕೆ ನಡೆದರೆ, ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ನಿಗದಿಯಾಗಿರುವ ಪರೀಕ್ಷೆಯು ನಾಲ್ಕು ಜಿಲ್ಲೆಗಳ 85 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆದಿದೆ.

LIVE TV

ಕಮಾಂಡ್ ಸೆಂಟರ್ ಮೂಲಕ ಕಟ್ಟುನಿಟ್ಟಿನ ನಿಗಾ

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಲೋಪಗಳು ನಡೆಯದಂತೆ ತೀವ್ರ ನಿಗಾ ವಹಿಸಲು ಕೆಇಎ ಕಚೇರಿಯಲ್ಲಿ ವಿಶೇಷ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿತ್ತು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಹಾಗೂ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕಮಾಂಡ್ ಸೆಂಟರ್‌ನಲ್ಲಿ ಖುದ್ದು ಉಪಸ್ಥಿತರಿದ್ದು, ಪರೀಕ್ಷಾ ಪ್ರಕ್ರಿಯೆಗಳ ಮೇಲೆ ನಿರಂತರ ನಿಗಾ ಇರಿಸಿ ಪರಿಶೀಲನೆ ಮಾಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್