AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳಿನ ಕರ್ನಾಟಕ ಬಂದ್ ವೇಳೆ KSRTC, BMTC ಸಂಚಾರ: ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ

ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿ ನೂರಾರು ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ಕೊಟ್ಟಿವೆ. ಹೀಗಾಗಿ ಶುಕ್ರವಾರ ಅಖಂಡ ಕರ್ನಾಟಕ ಸ್ತಬ್ಧವಾಗಲಿದೆ. ಬಂದ್ ನಡುವೆಯೂ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳ ಸಂಚಾರ ಇರಲಿದೆ. ಈ ಬಗ್ಗೆ ಸಾರಿಗೆ ನಿಗಮಗಳು ತಮ್ಮ ಸಿಬ್ಬಂದಿಗೆ ಖಡಕ್ ಸೂಚನೆಯೊಂದನ್ನು ಕೊಟ್ಟಿದೆ.

ನಾಳಿನ ಕರ್ನಾಟಕ ಬಂದ್ ವೇಳೆ KSRTC, BMTC ಸಂಚಾರ: ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ
ಬಿಎಂಟಿಸಿ-ಕೆಎಸ್​ಆರ್​ಟಿಸಿ ಬಸ್
Kiran Surya
| Updated By: ರಮೇಶ್ ಬಿ. ಜವಳಗೇರಾ|

Updated on: Sep 28, 2023 | 12:03 PM

Share

ಬೆಂಗಳೂರು, (ಸೆಪ್ಟೆಂಬರ್ 28): ಕಾವೇರಿ ನದಿ ನೀರಿಗಾಗಿ ನಾಳೆ(ಸೆಪ್ಟೆಂಬರ್ 29) ಕರ್ನಾಟಕ ಬಂದ್​ಗೆ (Karnataka Bandh)ಕರೆ ನೀಡಲಾಗಿದೆ. ಈ ಬಂದ್​ಗೆ ಸಂಘ-ಸಂಸ್ಥೆಗಳು ಸೇರಿದಂತೆ ನೂರಾರು ಸಂಘಟನೆಗಳು ಬೆಂಬಲ ನೀಡಿವೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬಹುತೇಕ ಅಖಂಡ ಕರ್ನಾಟಕ ಸ್ತಬದ್ಧವಾಗಲಿದೆ. ಇದರ ನಡುವೆ ಸಾರ್ವಜನಿಕರ ಸಂಚಾರನಾಡಿ ಕೆಎಸ್​ಆರ್​ಟಿಸಿ ಹಾಗೂ ಬಿಎಂಪಿಟಿಸಿ ಬಸ್​ (KSRTC And bmtc  Buses) ಸಂಚಾರಕ್ಕೆ ನಿಗಮಗಳು ತೀರ್ಮಾನಿಸಿವೆ. ಈ ಹಿನ್ನೆಲೆಯಲ್ಲಿ ನೌಕರರಿಗೆ ನಾಳೆ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಲಾಗಿದೆ.

ಹೌದು… ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಲಾಗಿದೆ. ದೀರ್ಘಾವಧಿ, ವಾರದ ರಜೆ ಹೊರತುಪಡಿಸಿ ನೌಕರರು ಹೊರತುಪಡಿಸಿ ಉಳಿದ ಎಲ್ಲಾ ನೌಕರರು ಕಡ್ಡಾಯವಾಗಿ ನಾಳೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ನೌಕರರಿಗೆ ಸಾರಿಗೆ ನಿಗಮಗಳು ಮೌಖಿಕ ಸೂಚನೆ ನೀಡಿವೆ.

ಇದನ್ನೂ ಓದಿ: Karnataka Bandh: ನಾಳೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ

ಸಾರಿಗೆ ನಿಗಮಗಳು ಅಗತ್ಯ ಸೇವೆಗಳ ಅಡಿಯಲ್ಲಿ ಬರುವುದರರಿಂದ ಸೇವೆ ನೀಡಬೇಕು. ಹೀಗಾಗಿ ಯಾರು ಸಹ ನಾಳಿನ ಬಂದ್ ನಲ್ಲಿ ಭಾಗಿಯಾಗುವಂತಿಲ್ಲ. ಒಂದು ವೇಳೆ ಕೆಲಕ್ಕೆ ಗೈರು ಆಗಿ ಬಂದ್ ನಲ್ಲಿ ಭಾಗಿಯಾದ್ರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುವುದಾಗಿ ಎಚ್ಚರಿಕೆ ಸಹ ನೀಡಲಾಗಿದೆ.

ಮುಂಜಾಗ್ರತಾ ಕ್ರಮಕ್ಕೆ ಮುಂದಾದ ಬಿಎಂಟಿಸಿ

ಕರ್ನಾಟಕ ಬಂದ್​ ಹಿನ್ನೆಲೆಯಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿಯಾಗದಂತೆ ಬಿಎಂಟಿಸಿ ನಿಗಮ ಮುಂಜಾಗ್ರತಾ ಕ್ರಮಕೈಗೊಂಡಿದೆ. ಬಿಎಂಟಿಸಿ ಎಲ್ಲ ಡಿಪೋಗಳಿಗೂ ಪೊಲೀಸ್ ಭದ್ರತೆ ನೀಡುವಂತೆ ನಿಗಮ ಮನವಿ ಮಾಡಿದೆ. ಅಲ್ಲದೇ ಬಸ್ ನಿಲ್ದಾಣಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಈ ಮೂಲಕ ಬಿಎಂಟಿಸಿ ಬಸ್ ರಸ್ತೆಗಿಳಿದಾಗ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮುಂದಾಗಿದೆ.

ಡಿಪೋ ಮ್ಯಾನೇಜರ್ ಗಳು ಕಡ್ಡಾಯವಾಗಿ ಡಿಪೋದಲ್ಲಿದ್ದು ಬಸ್ ಕಾರ್ಯಚರಣೆ ನಡೆಸುವಂತೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್ ಗಳ ಕಾರ್ಯಚರಣೆ ಮಾಡಲು ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ ನಾಳಿನ ಬಂದ್​​ ವೇಳೆ ರಾಜ್ಯಾದ್ಯಂತ ಕೆಸ್​ಆರ್​ಟಿಸಿ ಬಸ್ ಸಂಚರಿಸಲಿವೆ. ಇನ್ನು ಬೆಂಗಳೂರಿನಲ್ಲೂ ಸಹ ಬಿಎಂಟಿಸಿ ಬಸ್​ ಸಂಚಾರ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?