AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MEIL: ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂಇಐಎಲ್​ನ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳು

ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್​ಫ್ರಾಸ್ಟ್ರಕ್ಚರ್ ಲಿಮಿಟೆಡ್​​ನ ಅಂಗಸಂಸ್ಥೆ ಒಲೆಕ್ಟ್ರಾ ಕಂಪನಿಯ 50 ಎಲೆಕ್ಟ್ರಿಕ್ ಬಸ್​​ಗಳು ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅದ್ಯಕ್ಷ ಎಂ. ಚಂದ್ರಪ್ಪ ಚಿತ್ರದುರ್ಗದಲ್ಲಿ ತಿಳಿಸಿದ್ದಾರೆ.

MEIL: ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂಇಐಎಲ್​ನ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳು
ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್
Ganapathi Sharma
|

Updated on: Mar 04, 2023 | 5:48 PM

Share

ಚಿತ್ರದುರ್ಗ: ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್​ಫ್ರಾಸ್ಟ್ರಕ್ಚರ್ ಲಿಮಿಟೆಡ್​​ನ (MEIL) ಅಂಗಸಂಸ್ಥೆ ಒಲೆಕ್ಟ್ರಾ ಕಂಪನಿಯ 50 ಎಲೆಕ್ಟ್ರಿಕ್ ಬಸ್​​ಗಳು ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಅದ್ಯಕ್ಷ ಎಂ. ಚಂದ್ರಪ್ಪ ಚಿತ್ರದುರ್ಗದಲ್ಲಿ ‘ಟಿವಿ9’ಗೆ ತಿಳಿಸಿದ್ದಾರೆ. ಎಲೆಕ್ಟ್ರಿಕ್ ಬಸ್​​ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. 20 ವೋಲ್ವೊ ಬಸ್‌ಗಳಿಗೆ ಫೆಬ್ರುವರಿ 21ಕ್ಕೆ ಚಾಲನೆ ನೀಡಿದ್ದೇವೆ. ಸುಮಾರು ಐವತ್ತು ಇ-ಬಸ್ ಗಳು ಕೆಎಸ್​ಆರ್​ಟಿಸಿ ಬಳಿ ಇವೆ. ಈ ಬಸ್​ಗಳು ಒಂದು‌ ಬಾರಿ ಬ್ಯಾಟರಿ ಚಾರ್ಜ್ ಆದರೆ 350 ಕಿ.ಮೀ. ಚಲಿಸುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು-ಮೈಸೂರು ಮಧ್ಯೆ ಆರಂಭಿಸಿರುವ ಇ-ಬಸ್​​ಗೆ ಉತ್ತಮ‌ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇ-ಬಸ್​​ಗಳು ವಾಯುಮಾಲಿನ್ಯ ರಹಿತ ಪರಿಸರ ಸ್ನೇಹಿ ಬಸ್​​ಗಳಾಗಿದ್ದು, ಪ್ರಯಾಣಿಕಸ್ನೇಹಿಯಾಗಿವೆ. ಇವು ಏರ್ ಕಂಡಿಷನ್​​ಯುಕ್ತ ಸುಸಜ್ಜಿತ ಬಸ್​​ಗಳಾಗಿವೆ ಎಂದು ಅವರು ಹೇಳಿದ್ದಾರೆ. ಶೀಘ್ರದಲ್ಲೇ 550 ಸಾಮಾನ್ಯ ಬಸ್​ಗಳು, 50 ಲೇಲ್ಯಾಂಡ್ ಹಾಗೂ ಸ್ಲೀಪರ್ ಕೋಚ್ ಬಸ್​​ಗಳು ಸಹ ಬರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: KSRTC Electric Bus: ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು, ಮೊದಲ ಪ್ರಯಾಣ ಆರಂಭ

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇದೇ ವರ್ಷ ಜನವರಿ 16ರಂದು ಆರಂಭವಾಗಿತ್ತು. ಮೊದಲ ಎಲೆಕ್ಟ್ರಿಕ್​​ ಬಸ್​​ಗೆ ಚಾಲನೆ ನೀಡಿದ ಸಂದರ್ಭದಲ್ಲೇ, ಮುಂದಿನ ಮೂರು ತಿಂಗಳಲ್ಲಿ 50 ಎಲೆಕ್ಟ್ರಿಕ್ ಬಸ್​​ಗಳನ್ನು ರಸ್ತೆಗಿಳಿಸಲಾಗುವುದು ಎಂದು ಕೆಎಸ್​ಆರ್​​ಟಿಸಿ ತಿಳಿಸಿತ್ತು.

ಎಲೆಕ್ಟ್ರಿಕ್ ಬಸ್ ವಿಶೇಷ

ಆರಾಮದಾಯಕ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟಿಗೂ ಚಾರ್ಜಿಂಗ್ ಸಾಕೆಟ್‌, ಎಸಿ​ ವೆಂಟ್‌ಗಳು, ಓದುವ ದೀಪಗಳು ಸೇರಿದಂತೆ ಇನ್ನೂ ಅನೇಕ ಸೌಲಭ್ಯಗಳನ್ನು ಎಲೆಕ್ಟ್ರಿಕ್ ಬಸ್ ಒಳಗೊಂಡಿವೆ. ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದೇ ರಾಜ್ಯಕ್ಕೆ ಬಂದಿದ್ದು, ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?