Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 2023-24ನೇ ಸಾಲಿನ ರಾಷ್ಟ್ರೀಯ ಸಾರ್ವಜನಿಕ ಸಾರಿಗೆ ಪ್ರಶಸ್ತಿಗಳಲ್ಲಿ ಮೂರು ಪ್ರಶಸ್ತಿಗಳನ್ನು ಗೆದ್ದಿದೆ. ಅಶ್ವಮೇಧ ಬ್ರ್ಯಾಂಡಿಂಗ್, ಉದ್ಯೋಗಿ ಕಲ್ಯಾಣ ಯೋಜನೆಗಳು ಮತ್ತು ಗಣಕೀಕರಣ ಉಪಕ್ರಮಗಳಿಗೆ ಈ ಪ್ರಶಸ್ತಿಗಳು ಲಭಿಸಿವೆ. ನ್ಯೂ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. 26 ವರ್ಷಗಳ ಸೇವೆ ಸಲ್ಲಿಸಿದ ಚಾಲಕ-ನಿರ್ವಾಹಕಿಯೊಬ್ಬರನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಗೌರವಿಸಲಾಯಿತು.

ಕೆಎಸ್​ಆರ್​ಟಿಸಿ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು
ಕೆಎಸ್​ಆರ್​ಟಿಸಿ
Follow us
ವಿವೇಕ ಬಿರಾದಾರ
|

Updated on: Mar 09, 2025 | 10:10 AM

ಬೆಂಗಳೂರು, ಮಾರ್ಚ್​ 09: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ASRTU) 2023-24ನೇ ಸಾಲಿನ ಒಟ್ಟು ಮೂರು ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು (National Transport Excellence Award) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)  ಲಭಿಸಿವೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ (ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಸದರಿ ಒಕ್ಕೂಟವು 13ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ,ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಕೆಎಸ್​ಆರ್​ಟಿ‌‌ಸಿ‌ಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ*ಮೂರು ಪ್ರಶಸ್ತಿಗಳು ಲಭಿಸಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ (ASRTU)ದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಡಾ. ಕಿರಣ್ ಬೇಡಿ IPS(ನಿವೃತ್ತ ) ರವರು ಪ್ರಶಸ್ತಿ ಪ್ರಧಾನ ಮಾಡಿದ್ದು, ಈ ಸಂದರ್ಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಪ್ರಿಯಾಂಗ ಭಾಆಸೇ, ನಿರ್ವಾಹಕ ನಿರ್ದೇಶಕರು, ASRTU ಸೂರ್ಯಕಿರಣ್ ಉಪಸ್ಥಿತರಿದ್ದು, ಉಪಮುಖ್ಯ ಸಂಚಾರ ವ್ಯವಸ್ಥಾಪಕರು ಗುರುರಾಜ ಹೆಚ್, ಹಾಗೂ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ರಾಧಾರವರು ನಿಗಮದ ಪರವಾಗಿ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಇದೆ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀಮತಿ ಸುಲೋಚನಾ ದೇವಿ ಚಾಲಕ ಕಂ ನಿರ್ವಹಕಿ, ಆನೇಕಲ್ ಘಟಕರವರು ಸಾರಿಗೆ ಸಂಸ್ಥೆಯಲ್ಲಿ ಸಲ್ಲಿಸಿರುವ 26 ವರ್ಷಗಳ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ