AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC, KSRTC Buses: ನಾಳೆಯಿಂದ ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸಲು ಈ ನಿಯಮ ಪಾಲಿಸಲೇಬೇಕು

ಸಂಜೆ 7 ಗಂಟೆ ನಂತರ ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ. ಜತೆಗೆ ಬೆಳಗ್ಗೆ 6 ಗಂಟೆಯ ಮುನ್ನವೂ ಬಿಎಂಟಿಸಿ ಬಸ್ ಸಂಚರಿಸುವುದಿಲ್ಲ. ಬಿಎಂಟಿಸಿ ಸಿಬ್ಬಂದಿ 8 ಗಂಟೆಗೂ ಹೆಚ್ಚು ಕಾಲ ಕೆಲಸ ಮಾಡುವಂತಿಲ್ಲ.

BMTC, KSRTC Buses: ನಾಳೆಯಿಂದ ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸಲು ಈ ನಿಯಮ ಪಾಲಿಸಲೇಬೇಕು
ಬಿಎಂಟಿಸಿ ಬಸ್
TV9 Web
| Edited By: |

Updated on:Jun 20, 2021 | 3:28 PM

Share

ಬೆಂಗಳೂರು: ನಾಳೆಯಿಂದ ಬಸ್​ಗಳನ್ನು ರಸ್ತೆಗಿಳಿಸಲು ಬಿಎಂಟಿಸಿ ಸಿದ್ದತೆ ನಡೆಸಿದ್ದು, ಮೊದಲ ಹಂತದಲ್ಲಿ 2 ಸಾವಿರ ಬಿಎಂಟಿಸಿ ಬಸ್​ಗಳು ಸೇವೆ ಒದಗಿಸಲಿವೆ. ಬೆಳಗ್ಗೆ 6ರಿಂದ ಸಂಜೆ 7 ಗಂಟೆಯವರೆಗೆ ಬಿಎಂಟಿಸಿ ಬಸ್ ಸಂಚರಿಸಲಿದ್ದು, ಸಂಜೆ 7 ಗಂಟೆ ನಂತರ ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ. ಜತೆಗೆ ಬೆಳಗ್ಗೆ 6 ಗಂಟೆಯ ಮುನ್ನವೂ ಬಿಎಂಟಿಸಿ ಬಸ್ ಸಂಚರಿಸುವುದಿಲ್ಲ. ಬಿಎಂಟಿಸಿ ಸಿಬ್ಬಂದಿ 8 ಗಂಟೆಗೂ ಹೆಚ್ಚು ಕಾಲ ಕೆಲಸ ಮಾಡುವಂತಿಲ್ಲ. ಪ್ರತಿ ಡಿಪೋದಲ್ಲೂ 5 ಹೆಚ್ಚುವರಿ ಬಸ್‌ಗಳು ಇರಬೇಕು. ಬಸ್‌ಗಳಲ್ಲಿ ಮಾರ್ಗಸೂಚಿ ಫಲಕ ಕಡ್ಡಾಯವಾಗಿರಬೇಕು ಮತ್ತು ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.

ಎರಡು ಹಂತದ ಕೊವಿಡ್ ಲಸಿಕೆ ಪಡೆದುಕೊಂಡ ಸಿಬ್ಬಂದಿ ಮಾತ್ರ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.  ಸಿಬ್ಬಂದಿ ಫೇಸ್ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಬಸ್ ಗೆ ಆಗಿಂದಾಗೆ ಸ್ಯಾನಿಟೈಸರ್ ಸಿಂಪಡಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಪ್ರಯಾಣಿಕರು ಮೂಗು, ಬಾಯಿ ಮುಚ್ಚಿಕೊಳ್ಳುವಂತೆ ಮಾಸ್ಕ್ ಧರಿಸಬೇಕು. ಮಾಸ್ಕ್ ಇಲ್ಲದಿದ್ದರೆ ಬಸ್ ಹತ್ತುವಂತಿಲ್ಲ ಗುಂಪು ಗುಂಪು ಸೇರುವಂತಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡು  ಬಸ್ ಹತ್ತಬೇಕು ಎಂದು ನಿರ್ದೇಶನ ನೀಡಲಾಗಿದೆ.

ಬಿಎಂಟಿಸಿ ಏಪ್ರಿಲ್‌ ತಿಂಗಳ ಮಾಸಿಕ ಪಾಸ್ ಅವಧಿ ವಿಸ್ತರಿಸಲಾಗಿದೆ.  ಹಾಲಿ ಇರುವ ಮಾಸಿಕ ಪಾಸ್‌ ಅವಧಿ ಜುಲೈ 8ರವರೆಗೂ ವಿಸ್ತರಣೆಗೊಂಡಿದೆ. ಒಟ್ಟು 2,000 ಬಸ್​ಗಳನ್ನು ಸೇವೆಗೆ ಒದಗಿಸಲು ಬಿಎಂಟಿಸಿ ನಿರ್ಧರಿಸಿದ್ದು, ಪೂರ್ವ ವಲಯದಲ್ಲಿ 350, ಪಶ್ಚಿಮ ವಲಯದಲ್ಲಿ 400, ಉತ್ತರ ವಲಯದಲ್ಲಿ 500, ದಕ್ಷಿಣ ವಲಯದಲ್ಲಿ 400, ಈಶಾನ್ಯ ವಲಯದಲ್ಲಿ 350 ಬಸ್​ಗಳ ಓಡಾಟಕ್ಕೆ ಸಿದ್ಧತೆ ನಡೆಸಲಾಗಿದೆ. ಬೆಳಗ್ಗೆ 8 ರಿಂದ 11 ಹಾಗೂ ಸಂಜೆ 4 ರಿಂದ 7 ಗಂಟೆವರೆಗೂ ಹೆಚ್ಚುವರಿ ಬಸ್ ಓಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಕೆಎಸ್​ಆರ್​ಟಿಸಿ ಮಾರ್ಗಸೂಚಿ ಇಲ್ಲಿದೆ ನಾಳೆಯಿಂದ ಮೈಸೂರು ಜಿಲ್ಲೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಕೆಎಸ್​ಆರ್​ಟಿಸಿ ಬಸ್​ ಸೇವೆ ಆರಂಭವಾಗಲಿದ್ದು, ಮೊದಲ ಹಂತದಲ್ಲಿ 3000 ಬಸ್​ಗಳು ಸಂಚರಿಸಲಿವೆ. ಪ್ರಯಾಣಿಕರು ಕೊವಿಡ್ 19 ತಡೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೆಎಸ್ಆರ್​ಟಿಸಿ ಸೂಚಿಸಿದೆ. ಆದರೆ ಅಂತಾರಾಜ್ಯಗಳಿಗೆ ಕೆಎಸ್​ಆರ್​ಟಿಸಿ ಬಸ್ ಸೇವೆ ಸದ್ಯ ಲಭ್ಯವಿಲ್ಲ. ಮುಂದಿನ ದಿನಗಳಲ್ಲಿ ಅಂತರಾಜ್ಯ ಬಸ್ ಸಂಚಾರದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: Karnataka Unlock: 2ನೇ ಹಂತದ ಅನ್​ಲಾಕ್: ಸೋಮವಾರದಿಂದಲೇ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್, ಶರತ್ತುಗಳು ಅನ್ವಯ

ಕೊವಿಡ್ 19ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂ.ಪರಿಹಾರ ಕೊಡಲು ಸಾಧ್ಯವೇ ಇಲ್ಲ: ಕೇಂದ್ರ ಸರ್ಕಾರದಿಂದ ಸುಪ್ರೀಂಕೋರ್ಟ್​ಗೆ ಅಫಿಡವಿಟ್​

(KSRTC BMTC Bus service starts from tomorrow here is the full Guidelines)

Published On - 3:20 pm, Sun, 20 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?